ಕುಕನೂರು | ತಳಕಲ್ ಬಳಿ ಬಸ್ಗೆ ಕಾರು ಢಿಕ್ಕಿ: ಪ್ರಯಾಣಿಕರು ಪಾರು

ಕುಕನೂರು: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಳಕಲ್ ಗ್ರಾಮದ ಬಳಿ ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾರೊಂದು ಹಿಂಭಾಗದಿಂದ ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಎರಡೂ ವಾಹನಗಳಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಪ್ಪಳದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಗಂಗಾವತಿ ಘಟಕದ ಕೆಎ 37 ಎಫ್ 0787 ನೋಂದಣಿ ಸಂಖ್ಯೆಯ ಬಸ್ಗೆ ಕೆಎ 36 ಎನ್ 8333 ನೋಂದಣಿ ಸಂಖ್ಯೆಯ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯ ವೇಳೆ ಬಸ್ನಲ್ಲಿ ಸುಮಾರು 60ರಿಂದ 70 ಪ್ರಯಾಣಿಕರಿದ್ದರು. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
Next Story




