ಕುಕನೂರು | ಕುದರಿಮೋತಿ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ

ಕುಕನೂರು: ಕುದರಿಮೋತಿ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಕಾಂತ್ ಸಜ್ಜನ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಹುಲಿಗೆಮ್ಮ ಗಂಡ ಪರಸಪ್ಪ ಹನುಮನಟ್ಟಿ ಅವರಿಗೆ ತಾಲೂಕು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಅಶೋಕ್ ಗಟ್ಟೆಪ್ಪನವರ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಶುಭಾಶಯ ತಿಳಿಸಿರುವ ಅವರು, ಸಂಘದ ಜವಾಬ್ದಾರಿಯುತ ಸ್ಥಾನಗಳಿಗೆ ಆಯ್ಕೆಯಾಗಿರುವುದು ಸಂತಸದ ಸಂಗತಿಯಾಗಿದೆ. ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಅಧಿಕಾರಾವಧಿಯಲ್ಲಿ ಸಂಘವು ಮತ್ತಷ್ಟು ಅಭಿವೃದ್ಧಿ ಹೊಂದಲಿ. ರೈತರ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪಾರದರ್ಶಕ, ಪ್ರಾಮಾಣಿಕ ಹಾಗೂ ಜನಪರ ಆಡಳಿತದ ಮೂಲಕ ಮಾದರಿ ಸಹಕಾರಿ ಸಂಘವಾಗಿ ಹೊರಹೊಮ್ಮಲಿ ಎಂದು ಆಶಿಸಿದ್ದಾರೆ.
ರೈತ ಬಾಂಧವರ ವಿಶ್ವಾಸಕ್ಕೆ ಪಾತ್ರರಾಗಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಇಬ್ಬರೂ ಶ್ರಮಿಸಲಿ ಹಾಗೂ ಮುಂದಿನ ಕಾರ್ಯಚಟುವಟಿಕೆಗಳಲ್ಲಿ ಯಶಸ್ಸು ದೊರೆಯಲಿ ಎಂದು ನೂತನ ನಿರ್ದೇಶಕ ಹನುಮೇಶ ಗಟ್ಟೆಪ್ಪನವರ ಹಾಗೂ ಅಶೋಕ್ ಗಟ್ಟೆಪ್ಪನವರ ಶುಭ ಹಾರೈಸಿದ್ದಾರೆ.




