Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಕನೂರು | ವಿದ್ಯುತ್ ತಂತಿ ತಗುಲಿ...

ಕುಕನೂರು | ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ವಾರ್ತಾಭಾರತಿವಾರ್ತಾಭಾರತಿ24 Jun 2026 12:16 AM IST
share
ಕುಕನೂರು | ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ; ಪ್ರಕರಣ ದಾಖಲು

ಕುಕನೂರು: ತಾಲೂಕಿನ ಇಟಗಿ ಗ್ರಾಮದಲ್ಲಿ ಶೆಡ್ ನಿರ್ಮಾಣ ಕಾಮಗಾರಿ ವೇಳೆ 11 ಕೆವಿ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಈ ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.

ಮೃತರನ್ನು ಇಟಗಿ ಗ್ರಾಮದ ನಾಗರಾಜ ಚನ್ನಪ್ಪ ಚಕ್ರಸಾಲಿ (36) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡಿದ್ದು, ಪತ್ನಿ ನಾಗರತ್ನ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಬಸವರಾಜ ಅಡಿವೆಪ್ಪನವರ್ ಅವರ ಜಾಗದಲ್ಲಿ ನಿರ್ಮಾಣವಾಗುತ್ತಿದ್ದ ಶೆಡ್‌ಗೆ ಕಬ್ಬಿಣದ ಪೈಪ್ ಅಳವಡಿಸುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕನಕರಾಜ ಭೋವಿ ಅವರ ಮನೆಯಿಂದ ತಂದಿದ್ದ ಕಬ್ಬಿಣದ ಏಣಿಯನ್ನು ಮೇಲಕ್ಕೆ ಎತ್ತುವ ಸಂದರ್ಭದಲ್ಲಿ ಅದು ಮೇಲ್ಭಾಗದಲ್ಲಿ ಹಾದು ಹೋಗಿದ್ದ 11 ಕೆವಿ ವಿದ್ಯುತ್ ತಂತಿಗೆ ತಗುಲಿತು. ಪರಿಣಾಮ ತೀವ್ರ ವಿದ್ಯುತ್ ಪ್ರವಹಿಸಿ ನಾಗರಾಜ ಸ್ಥಳದಲ್ಲೇ ಮೃತಪಟ್ಟರು.

ಮೃತನ ಸಹೋದರ ಶರಣಪ್ಪ ಚಕ್ರಸಾಲಿ ನೀಡಿದ ದೂರಿನಲ್ಲಿ, ತಮ್ಮ ನಿವೇಶನದ ಮೇಲ್ಭಾಗದಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ತಂತಿಯನ್ನು ಸ್ಥಳಾಂತರಿಸುವಂತೆ ಗ್ರಾಮ ಪಂಚಾಯಿತಿ ಹಾಗೂ ಜೆಸ್ಕಾಂ ಇಟಗಿ ವಿಭಾಗದ ಅಧಿಕಾರಿಗಳಿಗೆ ಹಲವು ಬಾರಿ ಮೌಖಿಕ ಹಾಗೂ ಲಿಖಿತ ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 106ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


"ಈ ಘಟನೆ ಕುರಿತು ಪೊಲೀಸ್ ಇಲಾಖೆ ಹಾಗೂ ಇಂಧನ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ನಿಜಾಂಶ ತಿಳಿದ ಬಳಿಕ ಇಲಾಖೆಯ ನಿಯಮಾನುಸಾರ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಅಮಾಯಕ ವ್ಯಕ್ತಿಯ ಸಾವಿಗೆ ವಿಷಾದ ವ್ಯಕ್ತಪಡಿಸುತ್ತೇನೆ."

– ನಾಗರಾಜ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ, ಜೆಸ್ಕಾಂ, ಕುಕನೂರು

Tags

Kukanurelectrocuted
share
ವಾರ್ತಾಭಾರತಿ
ವಾರ್ತಾಭಾರತಿ
Next Story
X