Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಕನೂರು | ನಿವೃತ್ತ ನೌಕರರ ಅನುಭವ...

ಕುಕನೂರು | ನಿವೃತ್ತ ನೌಕರರ ಅನುಭವ ಯುವಜನತೆಗೆ ಪ್ರೇರಣೆಯಾಗಲಿ: ಮಹಾದೇವಪ್ಪ ಮೂಲಿಮನಿ

ನಿವೃತ್ತ ನೌಕರರ ಅಭಿನಂದನಾ ಸಮಾರಂಭ

ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ27 Nov 2026 8:35 PM IST
share
ಕುಕನೂರು | ನಿವೃತ್ತ ನೌಕರರ ಅನುಭವ ಯುವಜನತೆಗೆ ಪ್ರೇರಣೆಯಾಗಲಿ: ಮಹಾದೇವಪ್ಪ ಮೂಲಿಮನಿ

ಕುಕನೂರು: ನಿವೃತ್ತ ನೌಕರರು ತಮ್ಮ ಬದುಕಿನ ಅಮೂಲ್ಯ ವರ್ಷಗಳನ್ನು ಸಮಾಜದ ಸೇವೆಗೆ ಅರ್ಪಿಸಿದ್ದು, ಅವರ ಅನುಭವ ಮತ್ತು ಮಾರ್ಗದರ್ಶನ ಇಂದಿನ ಯುವಜನತೆಗೆ ಪ್ರೇರಣೆಯಾಗಬೇಕು ಎಂದು ಮಹಾದೇವಪ್ಪ ಮೂಲಿಮನಿ ಹೇಳಿದರು.

ಕುಕನೂರು ತಾಲೂಕಿನ ತಳಕಲ್ ಗ್ರಾಮದ ಮುಂಡರಗಿ ಅನ್ನದಾನೀಶ್ವರ ಶಾಖಾಮಠದಲ್ಲಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ನಿವೃತ್ತ ನೌಕರರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಗುರುತಿಸಿ ಗೌರವಿಸುವುದು ಮಠದ ಸಾಮಾಜಿಕ ಬದ್ಧತೆಯಾಗಿದೆ. ಮಠವೆಂದರೆ ಕೇವಲ ಧಾರ್ಮಿಕ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸುವ ಹಾಗೂ ಹಿರಿಯರ ಸೇವೆ ಮತ್ತು ಸಾಧನೆಗಳನ್ನು ಗೌರವಿಸುವ ಕೇಂದ್ರವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ನೌಕರ ಎ.ಪಿ. ಮುದೋಳ ಮಾತನಾಡಿ, ಸರ್ಕಾರಿ ಸೇವೆಯಲ್ಲಿದ್ದಾಗ ಎದುರಿಸಿದ ಸವಾಲುಗಳು, ಕರ್ತವ್ಯ ನಿರ್ವಹಣೆಯ ಅನುಭವ ಹಾಗೂ ನಿವೃತ್ತಿಯ ನಂತರದ ಬದುಕಿನ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಿವೃತ್ತಿಯ ನಂತರವೂ ವ್ಯಕ್ತಿ ಕ್ರಿಯಾಶೀಲವಾಗಿ ಬದುಕಬೇಕು. ಕುಟುಂಬಕ್ಕೆ ಸಮಯ ನೀಡುವುದರ ಜೊತೆಗೆ ಸಮಾಜದ ಒಳಿತಿಗಾಗಿ ತಮ್ಮ ಅನುಭವ ಮತ್ತು ಜ್ಞಾನವನ್ನು ಬಳಸಿಕೊಳ್ಳಬೇಕು. ನಿವೃತ್ತಿ ಜೀವನವನ್ನು ಹೊಸ ಆಸಕ್ತಿ ಮತ್ತು ಉತ್ಸಾಹದಿಂದ ಮುನ್ನಡೆಸಬೇಕು ಎಂದು ಹೇಳಿದರು.

ನಿವೃತ್ತ ಪ್ರಾಚಾರ್ಯ ಡಾ. ಫಕೀರಪ್ಪ ವಜ್ರಬಂಡಿ ಮಾತನಾಡಿ, ವೃತ್ತಿಜೀವನದಲ್ಲಿ ಶಿಸ್ತು, ಸಮಯಪ್ರಜ್ಞೆ, ಪ್ರಾಮಾಣಿಕತೆ ಹಾಗೂ ನಿರಂತರ ಕಲಿಕೆ ಅತ್ಯಂತ ಮುಖ್ಯ. ಉದ್ಯೋಗದ ಅವಧಿಯಲ್ಲಿ ಗಳಿಸಿದ ಅನುಭವಗಳು ನಿವೃತ್ತಿಯ ನಂತರವೂ ವ್ಯಕ್ತಿಯ ಬದುಕಿಗೆ ದಾರಿದೀಪವಾಗುತ್ತವೆ. ಶಿಕ್ಷಕ ವೃತ್ತಿ ಸೇರಿದಂತೆ ಪ್ರತಿಯೊಂದು ವೃತ್ತಿಯೂ ಸಮಾಜ ನಿರ್ಮಾಣದಲ್ಲಿ ತನ್ನದೇ ಆದ ಮಹತ್ವ ಹೊಂದಿದೆ. ನಿವೃತ್ತರಾದವರು ತಮ್ಮ ಅನುಭವವನ್ನು ಮುಂದಿನ ಪೀಳಿಗೆಗೆ ಹಂಚುವ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾದೇವ ಸ್ವಾಮೀಜಿ, ಶಾಂತ, ನಿಂಗಮ್ಮ, ಕೊಟ್ರಪ್ಪ ಗಡಿಗಿ, ಜಗದೀಶ ಕರ್ಕಿಹಳ್ಳಿ, ಶಿವಲಿಂಗಪ್ಪ ಪಟ್ಟೆದ, ಯಲ್ಲಪ್ಪ ನಡುಲಮನಿ, ಸಂಗಪ್ಪ ದೇವಕಿ, ನಿಂಗಪ್ಪ ಮೇಟಿ, ನಿಂಗಪ್ಪ ಹೆಳವಾರ, ಶಂಕ್ರಪ್ಪ ಮೇಟಿ, ಭರಮಪ್ಪ ಡಬ್ಬಿ, ಶಂಕ್ರಪ್ಪ ಬೀಮರೆಡ್ಡಿ, ಸಂಗನಗೌಡ್ರ ಪಾಟೀಲ, ಶಂಕರಗೌಡ್ರ, ಮಲ್ಲಿಕಾಸಾಬ್ ತಳಬಾಳ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Tags

Kukanuremployeesyouth
share
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ

Next Story
X