Kuknoor | ಭಾಷಣ ಸ್ಪರ್ಧೆಯಲ್ಲಿ ಭಾಗ್ಯ ಗುಮಗೇರಿಗೆ ಪ್ರಥಮ ಸ್ಥಾನ : ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಕನೂರು : ಯಲಬುರ್ಗಾ ಪಟ್ಟಣದ ಸಿದ್ದರಾಮೇಶ್ವರ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕುಕನೂರ ಪಟ್ಟಣದ ವಿದ್ಯಾನಂದ ಗುರುಕುಲ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯ ರಮೇಶ ಗುಮಗೇರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
2026–27ನೇ ಸಾಲಿನ ‘ಪ್ರಜ್ಞೆ–ಪ್ರಾಚ್ಯ ಪ್ರಜ್ಞೆ’ ಯೋಜನೆಯಡಿ ‘ಸ್ಮಾರಕಗಳ ಸಂರಕ್ಷಣೆಯಲ್ಲಿ ಯುವ ಪೀಳಿಗೆಯ ಪಾತ್ರ’ ಎಂಬ ವಿಷಯದ ಕುರಿತು ಸ್ಪರ್ಧೆ ಆಯೋಜಿಸಲಾಗಿತ್ತು. ಯಲಬುರ್ಗಾ ಮತ್ತು ಕುಕನೂರ ತಾಲೂಕುಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಭಾಷಣ, ಚಿತ್ರಕಲೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಯಲಬುರ್ಗಾ ಮತ್ತು ಪುರಾತತ್ವ, ವಸ್ತುಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ ಮೈಸೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿದ್ಯಾರ್ಥಿನಿಯ ಸಾಧನೆಗೆ ವಿದ್ಯಾನಂದ ಗುರುಕುಲ ವಿಶ್ವಸ್ಥ ಮಂಡಳಿ ಸಂಸ್ಥೆಯ ಉಪಾಧ್ಯಕ್ಷ ಶರಣಪ್ಪ ಹೊಸಮನಿ, ಕಾರ್ಯದರ್ಶಿ ಶ್ರೀನಿವಾಸ್ ದೇಸಾಯಿ, ಶಾಲೆಯ ಉಪಪ್ರಾಚಾರ್ಯ ಸೋಮಶೇಖರ ಲಮಾಣಿ, ಶಿಕ್ಷಕಿ ಅರುಂಧತಿ ಬಟನೂರ ಸೇರಿದಂತೆ ಶಿಕ್ಷಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.






