Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಪಂಚಮಸಾಲಿ ಸಮಾಜಕ್ಕೆ ಸಚಿವ...

Kuknoor | ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ7 Jun 2026 7:59 PM IST
share
Kuknoor | ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸಮರ್ಪಕ ಪ್ರಾತಿನಿಧ್ಯ ನೀಡಲು ಆಗ್ರಹ

ಕುಕನೂರು : ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸಿ, ಶಾಸಕ ಬಸವರಾಜ ರಾಯರೆಡ್ಡಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಸಮಾಜದ ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕು ಘಟಕ ಆಗ್ರಹಿಸಿದೆ.

ಪಟ್ಟಣದ ಆರೇರ್ ಸೊರಟೂರು ಆಯಿಲ್ ಮಿಲ್ ಸಭಾಂಗಣದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಈಶಪ್ಪ ಆರೇರ್ ಮತ್ತು ವೀರಣ್ಣ ಅಣ್ಣಿಗೇರಿ ಮಾತನಾಡಿ, ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಪಂಚಮಸಾಲಿ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.

ಸಮಾಜದ 11 ಮಂದಿ ಶಾಸಕರು ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದು, ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಮಾಜಕ್ಕೆ ಮೊದಲ ಆದ್ಯತೆ ನೀಡಬೇಕು. ಬಸವರಾಜ ರಾಯರೆಡ್ಡಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕನಿಷ್ಠ ನಾಲ್ವರು ಪಂಚಮಸಾಲಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತ ಹಾಗೂ ಪಂಚಮಸಾಲಿ ಸಮಾಜವನ್ನು ಕಡೆಗಣಿಸದೇ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸಬೇಕು. ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಮಾಜಕ್ಕೆ ದೊರೆತಿದ್ದ ಪ್ರಾತಿನಿಧ್ಯವನ್ನು ಮುಂದುವರಿಸುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ವೇಳೆ ಪಂಚಮಸಾಲಿ ಸಮಾಜಕ್ಕೆ ಸಮರ್ಪಕ ಸ್ಥಾನಮಾನ ನೀಡದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಡಾ. ಈಶಪ್ಪ ಆರೇರ್, ಶರಣಗೌಡ ಪಾಟೀಲ್, ಗವಿಸಿದ್ದಪ್ಪ ಆರೇರ್, ಮಲ್ಲಣ್ಣ ಕೂಡ್ಲೂರು, ಸರಸ್ವತಿ ಕೂಡ್ಲೂರು, ಮಹೇಶ್ ಬನ್ನಿಕೊಪ್ಪ, ಚಂದ್ರು ಬಗನಾಳ, ಉಮಾ ಆರೇರ್, ಬಸವರಾಜ ವೀರಾಪುರ, ಬಸವರಾಜ ತೊಂಡಿಹಾಳ, ದೀಪಾ ಮಹೇಶಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X