Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಖುದಿರಾಮ್ ಬೋಸ್‌ರ ತ್ಯಾಗ...

Kuknoor | ಖುದಿರಾಮ್ ಬೋಸ್‌ರ ತ್ಯಾಗ ಯುವಜನತೆಗೆ ಸ್ಫೂರ್ತಿ : ಸಿದ್ದಲಿಂಗ ಬಾಗೇವಾಡಿ

ವಾರ್ತಾಭಾರತಿವಾರ್ತಾಭಾರತಿ12 Aug 2026 6:28 PM IST
share
Kuknoor | ಖುದಿರಾಮ್ ಬೋಸ್‌ರ ತ್ಯಾಗ ಯುವಜನತೆಗೆ ಸ್ಫೂರ್ತಿ : ಸಿದ್ದಲಿಂಗ ಬಾಗೇವಾಡಿ

ಕುಕನೂರು : ಭಾರತದ ಸ್ವಾತಂತ್ರ್ಯ ಹೋರಾಟದ ಅಗ್ನಿಯುಗದ ಹರಿಕಾರ ಹಾಗೂ ಕ್ರಾಂತಿಕಾರಿ ಖುದಿರಾಮ್ ಬೋಸ್ ಅವರ 118ನೇ ಹುತಾತ್ಮ ದಿನಾಚರಣೆಯನ್ನು ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾನ ಮನಸ್ಕರ ಬಳಗದ ವತಿಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಭಾಷಣಕಾರ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಭಾರತದ ಜನತೆ ದೌರ್ಜನ್ಯವನ್ನು ಸಹಿಸಿಕೊಳ್ಳುವುದಿಲ್ಲ ಎಂಬುದನ್ನು ಪೂರ್ವ ಭಾರತದಲ್ಲಿ ದಿಟ್ಟತನದಿಂದ ತೋರಿಸಿಕೊಟ್ಟ ಯೋಧ ಖುದಿರಾಮ್ ಬೋಸ್. ಅವರ ಧೈರ್ಯ, ದೇಶಪ್ರೇಮ ಹಾಗೂ ಬಲಿದಾನ ಅಂದಿನ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ನೀಡಿದ್ದು, ಇಂದಿಗೂ ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧದ ಹೋರಾಟಗಳಿಗೆ ಪ್ರೇರಣೆಯಾಗಿದೆ ಎಂದರು.

ಬಂಗಾಳದ ಜನತೆ ಖುದಿರಾಮ್ ಬೋಸ್ ಅವರನ್ನು ‘ಅಗ್ನಿಶಿಶು’ ಹಾಗೂ ‘ಧೀರ ಯೋಧ’ ಎಂದು ಕರೆಯುತ್ತಿದ್ದರು. ಅತ್ಯಂತ ಚಿಕ್ಕ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಅವರ ಜೀವನ ಹಾಗೂ ಹೋರಾಟ ಇಂದಿನ ಯುವಜನತೆಗೆ ಮಾದರಿಯಾಗಿದೆ. ಅವರ ತ್ಯಾಗವನ್ನು ಕೇವಲ ಸ್ಮರಣೆಗೆ ಸೀಮಿತಗೊಳಿಸದೆ, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಸಮಾಜದಲ್ಲಿ ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಅತಿಥಿಯಾಗಿ ಎಐಡಿವೈಒ ಮುಖಂಡ ಶರಣು ಪಾಟೀಲ್ ಮಾತನಾಡಿ, ಖುದಿರಾಮ್ ಬೋಸ್ ಅವರ ಜೀವನ ಹಾಗೂ ಹೋರಾಟವನ್ನು ಇಂದಿನ ಯುವಜನತೆ ಅರಿತುಕೊಂಡು, ಅವರ ದೇಶಪ್ರೇಮ, ಧೈರ್ಯ ಮತ್ತು ತ್ಯಾಗದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾನ ಮನಸ್ಕರ ಬಳಗದ ಸದಸ್ಯರಾದ ಭೀಮಾಶಂಕರ ಪಾಣೇಗಾಂವ, ಚಂದ್ರು ಭಾನಾಪುರ, ರುದ್ರಪ್ಪ ಭಂಡಾರಿ, ಬಸವರಾಜ ಕೊಡ್ಲಿ, ಮಂಜುನಾಥ ಅಂಗಡಿ, ಬಸವರಾಜ ಉಪ್ಪಿನ್, ರವಿ ಹಿರೇಮನಿ, ಕನಕರಾಯ ಭಜಂತ್ರಿ, ಬಸವರಾಜ ಕೊನಾರಿ, ಮುರಾರಿ ಭಜಂತ್ರಿ, ವಿಶ್ವನಾಥ ಬಿನ್ನಾಳ ಸೇರಿದಂತೆ ಹಲವರು ಇದ್ದರು.

Tags

Kuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X