Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಬನ್ನಿಕೊಪ್ಪದಲ್ಲಿ ನಿವೇಶನಗಳ...

Kuknoor | ಬನ್ನಿಕೊಪ್ಪದಲ್ಲಿ ನಿವೇಶನಗಳ ಹಂಚಿಕೆ : 122 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ31 Jan 2026 7:33 PM IST
share
Kuknoor | ಬನ್ನಿಕೊಪ್ಪದಲ್ಲಿ ನಿವೇಶನಗಳ ಹಂಚಿಕೆ : 122 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಕುಕನೂರು : ತಾಲೂಕಿನ ಬನ್ನಿಕೊಪ್ಪ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜೀವಗಾಂಧಿ ವಸತಿ ನಿಗಮದ ನಿವೇಶನಗಳ ಹಂಚಿಕೆ ನಡೆಯಿತು.

ಗ್ರಾಮ ಪಂಚಾಯತ್‌ ಅಧ್ಯಕ್ಷ ನಾಗರಾಜ ವೆಂಕಟಾಪುರ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವೀರಪ್ಪ ಗೊಂದಿ, ವಿಜಯಲಕ್ಷ್ಮಿ ಯರಾಶಿ, ಮಹೇಶ್ ತಳವಾರ, ಜುನಾಭಿ ವಾಲಿಕಾರ್, ಲಲಿತಮ್ಮ ಹರಿಜನ, ಶಾಂತಮ್ಮ ಆಲೂರ, ಊರಿನ ಹಿರಿಯರು, ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿ ನಿವೇಶನಗಳನ್ನು ಅಳತೆ ಮಾಡಿ, ಕಲ್ಲು ಹಾಕಿ, ನಂಬರ್ ಮಾರ್ಕಿಂಗ್ ಮಾಡಿ ನಿವೇಶನರಹಿತ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಯಿತು.

ನಿವೇಶನ ಪಡೆದ ಫಲಾನುಭವಿಗಳು ಆದಷ್ಟು ಬೇಗ ಮ್ಯೂಟೇಶನ್ ಮಾಡಿಕೊಂಡು 9/11 ದಾಖಲಾತಿ ಪಡೆಯಬೇಕು ಎಂದು ಸಲಹೆ ನೀಡಿದರು. ರಾಜೀವಗಾಂಧಿ ವಸತಿ ನಿಗಮದಡಿ ಮಂಜೂರಾದ ಒಟ್ಟು 144 ನಿವೇಶನಗಳಲ್ಲಿ 122 ಜನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಉಳಿದ 20 ನಿವೇಶನಗಳನ್ನು ಟರಾವು ಮಾಡಲಾಗಿದ್ದು, ಇನ್ನೂ ಎರಡು ನಿವೇಶನಗಳನ್ನು ಕಾಯ್ದಿರಿಸಲಾಗಿದೆ.

ನಿವೇಶನ ಬಡಾವಣೆಯಲ್ಲಿ ಸಿಸಿ ರಸ್ತೆ, ಚರಂಡಿ, ವಿದ್ಯುತ್ ಕಂಬಗಳು ಹಾಗೂ ನಳದ ನೀರಿನ ವ್ಯವಸ್ಥೆ ಕಲ್ಪಿಸುವ ಕುರಿತು ಶಾಸಕರಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗುವುದಾಗಿ ಭರವಸೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಫಲಾನುಭವಿ ಸುರೇಶ್ ನಾಯಕ ಮಾತನಾಡಿ, ಈ ನಿವೇಶನಗಳು ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದವು. ಗ್ರಾಮ ಪಂಚಾಯತ್‌ ಅಧ್ಯಕ್ಷ ನಾಗರಾಜ ವೆಂಕಟಾಪುರ ಅವರ ಪ್ರಯತ್ನದಿಂದ ಬಡವರಿಗೆ ನಿವೇಶನಗಳ ಹಂಚಿಕೆ ಸಾಧ್ಯವಾಗಿದೆ. ಸಿಸಿ ರಸ್ತೆ, ಚರಂಡಿ ಹಾಗೂ ಮನೆಗಳ ಮಂಜೂರಾತಿಯಿಂದ ಈ ಭಾಗದ ಜನತೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

Tags

Kuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X