Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ವೀರಭದ್ರಪ್ಪ ಅವರ ತ್ಯಾಗ,...

Kuknoor | ವೀರಭದ್ರಪ್ಪ ಅವರ ತ್ಯಾಗ, ಸರಳತೆ ಇಂದಿನ ಪೀಳಿಗೆಗೆ ಮಾದರಿ : ಡಾ.ಬಿ.ವಿ.ಶಿರೂರ

ವಾರ್ತಾಭಾರತಿವಾರ್ತಾಭಾರತಿ15 Aug 2026 10:46 PM IST
share
Kuknoor | ವೀರಭದ್ರಪ್ಪ ಅವರ ತ್ಯಾಗ, ಸರಳತೆ ಇಂದಿನ ಪೀಳಿಗೆಗೆ ಮಾದರಿ : ಡಾ.ಬಿ.ವಿ.ಶಿರೂರ
ಯಲಬುರ್ಗಾ ಕ್ಷೇತ್ರದ ಮೊದಲ ಶಾಸಕರ ಮೂರ್ತಿ ಅನಾವರಣ; ‘ಶಿರೂರು ವೀರಭದ್ರಪ್ಪ’ ಕೃತಿ ಬಿಡುಗಡೆ

ಕುಕನೂರು, ಆ.15: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮೊದಲ ಶಾಸಕ ಶಿರೂರು ವೀರಭದ್ರಪ್ಪ ಅವರ ತ್ಯಾಗ, ಸರಳತೆ, ಪ್ರಾಮಾಣಿಕತೆ, ತತ್ವ–ಸಿದ್ಧಾಂತ ಹಾಗೂ ಜನಪರ ಕಾಳಜಿ ಇಂದಿನ ಪೀಳಿಗೆಗೆ ಮಾದರಿಯಾಗಿವೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಅವರ ಪುತ್ರ ಡಾ. ಬಿ.ವಿ. ಶಿರೂರ ಹೇಳಿದರು.

ಪಟ್ಟಣದ ವೀರಭದ್ರಪ್ಪ ವೃತ್ತದಲ್ಲಿ ಶನಿವಾರ ಶಿರೂರು ವೀರಭದ್ರಪ್ಪ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಮೂರ್ತಿ ಅನಾವರಣ, ರಾಷ್ಟ್ರಧ್ವಜಾರೋಹಣ ಹಾಗೂ ‘ಶಿರೂರು ವೀರಭದ್ರಪ್ಪ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟಗಾರರಾಗಿ, ಜನಪ್ರತಿನಿಧಿಯಾಗಿ ಹಾಗೂ ಸಮಾಜ ಸೇವಕರಾಗಿ ವೀರಭದ್ರಪ್ಪ ಅವರು ಜೀವನವನ್ನು ಜನರಿಗಾಗಿ ಮುಡಿಪಾಗಿಟ್ಟಿದ್ದರು. ಅವರ ಸರಳತೆ, ಪ್ರಾಮಾಣಿಕತೆ, ತತ್ವ–ಸಿದ್ಧಾಂತ ಹಾಗೂ ಜನಪರ ಕಾಳಜಿ ಇಂದಿಗೂ ಆದರ್ಶವಾಗಿವೆ. ಪಟ್ಟಣದ ಪ್ರಮುಖ ವೃತ್ತದಲ್ಲಿ ಅವರ ಮೂರ್ತಿ ಅನಾವರಣಗೊಂಡಿರುವುದು ಕುಟುಂಬಕ್ಕೆ ಹೆಮ್ಮೆ ಹಾಗೂ ಸಂತಸದ ಸಂಗತಿಯಾಗಿದೆ ಎಂದರು.

ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿಯಲ್ಲೂ ವೀರಭದ್ರಪ್ಪ ಸಕ್ರಿಯವಾಗಿ ಪಾಲ್ಗೊಂಡಿದ್ದರು. ರಜಾಕಾರರ ಹಾವಳಿಯ ಸಂದರ್ಭದಲ್ಲಿ ಜನರ ರಕ್ಷಣೆಗೆ ನಿಂತು ಹೋರಾಡಿದ್ದರು. 1930ರಲ್ಲಿಯೇ ರಾಜೂರಿನಲ್ಲಿ ಹರಿಜನರಿಗಾಗಿ ಶಾಲೆ ಆರಂಭಿಸುವ ಜತೆಗೆ ಹೆಣ್ಣುಮಕ್ಕಳಿಗೆ ಕೈಗಾರಿಕಾ ತರಬೇತಿ ವ್ಯವಸ್ಥೆ ಕಲ್ಪಿಸಿದ್ದರು. ಗ್ರಾಮಗಳ ಅಭಿವೃದ್ಧಿ ಹಾಗೂ ಜನರ ಬದುಕಿನ ಸುಧಾರಣೆಯ ಕುರಿತು ಕಾಳಜಿ ಹೊಂದಿದ್ದ ಅವರು ‘ಹಳ್ಳಿಗಳ ಏಳಿಗೆ’ ಕೃತಿ ರಚಿಸಿದ್ದರು ಎಂದು ಡಾ. ಬಿ.ವಿ. ಶಿರೂರ ತಿಳಿಸಿದರು.

ನಿಜಾಮನ ಆಡಳಿತದ ಸಂದರ್ಭದಲ್ಲಿ ಕೊಪ್ಪಳದ ರೈಲ್ವೆ ಮೈದಾನದಲ್ಲಿ ಸಹಚರರೊಂದಿಗೆ ರಾಷ್ಟ್ರಧ್ವಜಾರೋಹಣ ಮಾಡಿದ್ದಕ್ಕಾಗಿ ಏಳು ತಿಂಗಳು ಜೈಲು ವಾಸ ಅನುಭವಿಸಿದ್ದರು. 1934–36ರ ಅವಧಿಯಲ್ಲಿ ಭಾನಾಪುರ ರೈಲು ನಿಲ್ದಾಣದಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಸ್ವಾಗತಿಸಿ, ಸಾವಿರಾರು ಜನರಿಗೆ ಅವರ ದರ್ಶನಕ್ಕೆ ಅವಕಾಶ ಕಲ್ಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.

1952 ಹಾಗೂ 1957ರ ಚುನಾವಣೆಗಳಲ್ಲಿ ಸೋತಿದ್ದ ವೀರಭದ್ರಪ್ಪ ಅವರು 1962 ಮತ್ತು 1967ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಶಾಸಕರಾಗಿದ್ದರೂ ಸ್ವಂತ ವಾಹನ ಬಳಸದೆ ಬಸ್‌ನಲ್ಲಿ ಸಂಚರಿಸುತ್ತಿದ್ದರು. ಬರಗಾಲದ ಸಂದರ್ಭದಲ್ಲಿ ರೈತರು ಹಾಗೂ ಬಡವರಿಗೆ ಧಾನ್ಯ ಒದಗಿಸುವಂತೆ ಒತ್ತಾಯಿಸಿ ಸತ್ಯಾಗ್ರಹ ನಡೆಸಿದ್ದರು. ದೇಶದ ಅಭಿವೃದ್ಧಿಗೆ ಪಕ್ಷಾತೀತ ಆಡಳಿತ ಅಗತ್ಯ ಎಂದು ವಿಧಾನಸಭೆಯಲ್ಲಿ ಖಾಸಗಿ ನಿರ್ಣಯ ಮಂಡಿಸಿದ್ದರು. ಶಿಕ್ಷಣ ಹಾಗೂ ಸಮಾಜ ಸುಧಾರಣೆಯಲ್ಲೂ ಕೊಡುಗೆ ನೀಡಿದ್ದರು ಎಂದರು.

ಮೂರ್ತಿ ಅನಾವರಣ, ಕೃತಿ ಬಿಡುಗಡೆ :

ಕಾರ್ಯಕ್ರಮಕ್ಕೂ ಮುನ್ನ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಂದಪ್ಪ ಜವಳಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಿರೂರು ವೀರಭದ್ರಪ್ಪ ಅವರ ಜೀವನ, ಹೋರಾಟ ಹಾಗೂ ಜನಪರ ಸೇವೆಯನ್ನು ಒಳಗೊಂಡ ‘ಶಿರೂರು ವೀರಭದ್ರಪ್ಪ’ ಕೃತಿಯನ್ನು ಶರಣಪ್ಪ ಅರಿಕೇರಿ ಬಿಡುಗಡೆಗೊಳಿಸಿದರು. ಮೂರ್ತಿ ಅನಾವರಣವನ್ನು ತಾ.ಪಂ. ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಕಳಕಪ್ಪ ಕಂಬಳಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಂದಪ್ಪ ಜವಳಿ, ಸಾಹಿತಿ ಕೆ.ಬಿ. ಬ್ಯಾಳಿ, ರಶೀದ್ ಹಣಜಗೇರಿ ಹಾಗೂ ವೀರಭದ್ರಪ್ಪ ಅವರ ಆತ್ಮೀಯ ಒಡನಾಡಿ ಈಶಪ್ಪ ಹಂಚಿನಾಳ ಸೇರಿದಂತೆ ಗಣ್ಯರು ಮಾತನಾಡಿ, ಅವರ ಸ್ವಾತಂತ್ರ್ಯ ಹೋರಾಟ, ಜನಪರ ಸೇವೆ, ಸರಳ ಜೀವನ ಹಾಗೂ ಜನರೊಂದಿಗೆ ಹೊಂದಿದ್ದ ಆತ್ಮೀಯ ಒಡನಾಟವನ್ನು ಸ್ಮರಿಸಿದರು.

ವೀರಭದ್ರಪ್ಪ ಅವರ ನಿಸ್ವಾರ್ಥ ಸೇವೆ, ತತ್ವ–ಸಿದ್ಧಾಂತ ಹಾಗೂ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವೀರಭದ್ರಪ್ಪ ಅವರ ಕುಟುಂಬಸ್ಥರಾದ ದೇವಪ್ಪ ಶಿರೂರು, ಐಎಫ್‌ಎಸ್ ಅಧಿಕಾರಿ ಮಹೇಶ್ ಶಿರೂರು, ದೇವಪ್ಪ ಸೊಬನದ, ಭರಮಪ್ಪ ತಳವಾರ, ಕೆ.ಆರ್. ಕುಲಕರ್ಣಿ, ರಾಮಾನಂದ ರಾಜೂರ, ಶರಣಪ್ಪ ಕೊಪ್ಪದ, ಐ.ಎಸ್. ಗಿರೆಡ್ಡಿ, ಚನ್ನಬಸಪ್ಪ ತಳವಾರ, ಶರಣಪ್ಪ ಹೊಸಮನಿ, ಯಮನೂರಪ್ಪ ಗೊರ್ಲೆಕೊಪ್ಪ, ಸಿದ್ದಯ್ಯ ಕಳ್ಳಿಮಠ, ಸಿದ್ದಯ್ಯ ಉಳ್ಳಾಗಡ್ಡಿ ಸೇರಿದಂತೆ ವಾಕಿಂಗ್ ಗೆಳೆಯರ ಬಳಗದ ಸದಸ್ಯರು, ಅಭಿಮಾನಿಗಳು, ವಿದ್ಯಾರ್ಥಿಗಳು, ಮಹಿಳೆಯರು, ರೈತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ವೀರಭದ್ರಪ್ಪ ಅವರ ಮೂರ್ತಿ ಪ್ರತಿಷ್ಠಾಪನೆಗೆ ಹಲವು ತೊಂದರೆಗಳು ಹಾಗೂ ಕೆಲವರ ಅಸಹಕಾರ ಎದುರಾದರೂ, ಎಲ್ಲ ಅಡೆತಡೆಗಳನ್ನು ಮೀರಿ ಪಟ್ಟಣದಲ್ಲಿ ಮೂರ್ತಿ ಪ್ರತಿಷ್ಠಾಪಿಸಿರುವುದು ಸಂತಸ ತಂದಿದೆ. ಅವರ ಹೋರಾಟ, ಜನಪರ ಸೇವೆ ಹಾಗೂ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಉದ್ದೇಶ. ಪ್ರತಿಯೊಬ್ಬರೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಆತ್ಮಸಾಕ್ಷಿಗೆ ಬದ್ಧರಾಗಿ ಬದುಕಬೇಕು.

-ಸತ್ಯನಾರಾಯಣಪ್ಪ ಹರಪನಹಳ್ಳಿ, ಅಧ್ಯಕ್ಷ, ಶಿರೂರು ವೀರಭದ್ರಪ್ಪ ಅಭಿಮಾನಿ ಬಳಗ



Tags

Kuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X