Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ನರೇಗಾ, ಸ್ವಚ್ಛ ಭಾರತ...

Kuknoor | ನರೇಗಾ, ಸ್ವಚ್ಛ ಭಾರತ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಯೋಜನಾ ನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ15 Jun 2026 6:47 PM IST
share
Kuknoor | ನರೇಗಾ, ಸ್ವಚ್ಛ ಭಾರತ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಪಂ ಯೋಜನಾ ನಿರ್ದೇಶಕ

ಕುಕನೂರು : ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಎಸ್.ಎಂ. ಕಾಂಬ್ಳೆ ಅವರು ಸೋಮವಾರ ತಳಕಲ್ ಹಾಗೂ ಭಾನಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಮತ್ತು ಸ್ವಚ್ಛ ಭಾರತ ಮಿಷನ್ ಕಾಮಗಾರಿಗಳನ್ನು ಪರಿಶೀಲಿಸಿದರು.

ತಳಕಲ್ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಅವರು, ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಕಸ ಸಂಗ್ರಹ ವಾಹನದ ಕಾರ್ಯಾಚರಣೆ, ಘನ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಹಾಗೂ ನರೇಗಾ ಯೋಜನೆಯ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

ಬಳಿಕ ಭಾನಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಮಲಾಪುರ ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ನಾಲೆ ಸುಧಾರಣೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೂಲಿಕಾರರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದರು.

ರೋಜ್ಗಾರ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯಡಿ ಕಾರ್ಮಿಕರಿಗೆ ದೊರೆಯುವ ಹಕ್ಕುಗಳು ಮತ್ತು ಸೌಲಭ್ಯಗಳ ಕುರಿತು ಅರಿವು ಮೂಡಿಸಿದರು. ಯೋಜನೆಯ ಪ್ರಯೋಜನಗಳನ್ನು ಸಮರ್ಪಕವಾಗಿ ಪಡೆಯಲು ನಿಗದಿತ ಪ್ರಮಾಣದ ಕೆಲಸ ನಿರ್ವಹಿಸುವಂತೆ ಸಲಹೆ ನೀಡಿದ ಅವರು, ಎಲ್ಲ ಕೂಲಿಕಾರರು ಕಡ್ಡಾಯವಾಗಿ ಎನ್‌ಎಂಎಂಎಸ್ (NMMS) ಮೂಲಕ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದರು.

ನಂತರ ತಳಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಶೌಚಾಲಯ, ತಳಬಾಳ ಗ್ರಾಮದ ಎಫ್‌ಎಚ್‌ಟಿಸಿ (FHTC) ಕಾಮಗಾರಿ ಹಾಗೂ ಘನ ತ್ಯಾಜ್ಯ ನಿರ್ವಹಣೆ (SWM) ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಳಕಲ್ ಗ್ರಾಮ ಪಂಚಾಯತ್‌ ಪಿಡಿಒ ವೀರನಗೌಡ್ರ ಚೆನ್ನವೀರಗೌಡ್ರ, ಭಾನಾಪೂರ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ತಿಮ್ಮಾರಡ್ಡಿ, ಜಿಲ್ಲಾ ಪಂಚಾಯತ್‌ ಸ್ವಚ್ಛ ಭಾರತ ಮಿಷನ್ ಸಮಾಲೋಚಕಿ ಬಸಮ್ಮ ಹುಡೇದ್, ತಾಂತ್ರಿಕ ಸಂಯೋಜಕ ಸುರೇಶ್ ದೇಸಾಯಿ, ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ, ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Tags

Kuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X