Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ ಕನ್ನಡ ಸಾಹಿತ್ಯ ಸಮ್ಮೇಳನ...

ಕನಕಗಿರಿ ಕನ್ನಡ ಸಾಹಿತ್ಯ ಸಮ್ಮೇಳನ ಐತಿಹಾಸಿಕ ದಾಖಲೆಯಾಗಲಿ: ಮುಖಂಡರ ಕರೆ

ವಾರ್ತಾಭಾರತಿವಾರ್ತಾಭಾರತಿ28 Oct 2026 11:54 PM IST
share
ಕನಕಗಿರಿ ಕನ್ನಡ ಸಾಹಿತ್ಯ ಸಮ್ಮೇಳನ ಐತಿಹಾಸಿಕ ದಾಖಲೆಯಾಗಲಿ: ಮುಖಂಡರ ಕರೆ

ಕನಕಗಿರಿ: ತಾಲ್ಲೂಕು ಮಟ್ಟದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನವು ಜಿಲ್ಲೆಯಲ್ಲಿಯೇ ಐತಿಹಾಸಿಕ ದಾಖಲೆಯಾಗಿ ಉಳಿಯುವಂತಾಗಲು ಪ್ರತಿಯೊಬ್ಬರೂ ಸಹಾಯ-ಸಹಕಾರ ನೀಡಬೇಕು ಎಂದು ಮುಖಂಡರು ಕರೆ ನೀಡಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 7ರಂದು ಪಟ್ಟಣದಲ್ಲಿ ಆಯೋಜಿಸಿರುವ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ವೆಂಕಟೇಶ ಕೆ. ಜನಾದ್ರಿ ಅವರ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಲೆಮರೆ ಕಾಯಿಯಂತಿದ್ದ ಪ್ರತಿಭೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಗುರುತಿಸಿ, ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಶ್ಲಾಘನೀಯ. ಸರ್ಕಾರಿ ವೃತ್ತಿಯ ಜತೆಗೆ ವೆಂಕಟೇಶ ಜನಾದ್ರಿ ಅವರು 21 ಪುಸ್ತಕಗಳನ್ನು ಹೊರತಂದಿದ್ದಾರೆ. ಸಣ್ಣಪುಟ್ಟ ದೋಷಗಳಿಗೆ ಮಹತ್ವ ನೀಡದೆ, ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಲು ಆದ್ಯತೆ ನೀಡಬೇಕು ಎಂದು ಮುಖಂಡರು ಹೇಳಿದರು.

ಸಮ್ಮೇಳನದ ಸ್ವಾಗತ ಸಮಿತಿಯ ಕೋಶಾಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರೇಶ ಸಮಗಂಡಿ, ಪ್ರಮುಖರಾದ ಶರಣಬಸಪ್ಪ ಭತ್ತದ, ಮಹಾಂತೇಶ ಸಜ್ಜನ್ ಹಾಗೂ ವಾಗೀಶ ಹಿರೇಮಠ ಮಾತನಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶರಣೆಗೌಡ ಪೊಲೀಸ್ ಪಾಟೀಲ ಮಾತನಾಡಿ, ಕನ್ನಡ ಭಾಷೆಗೆ ಜಾತಿ, ಧರ್ಮ ಹಾಗೂ ಮತದ ಸೋಂಕಿಲ್ಲ. ಸಮ್ಮೇಳನದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಸಮ್ಮೇಳನದ ಸರ್ವಾಧ್ಯಕ್ಷ ವೆಂಕಟೇಶ ಜನಾದ್ರಿ ಮಾತನಾಡಿ, ಉದ್ಯೋಗಕ್ಕಾಗಿ ಮಾತ್ರ ಇಂಗ್ಲಿಷ್ ಭಾಷೆಯನ್ನು ಬಳಸಿಕೊಳ್ಳಬೇಕು. ಮಾತೃಭಾಷೆ ಕನ್ನಡವನ್ನು ಸದಾ ಗೌರವಿಸುವ ಮತ್ತು ಆರಾಧಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತನುಶ್ರೀ ಟಿ.ಜೆ. ರಾಮಚಂದ್ರ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಸಂತಸ ತಂದಿದೆ. ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಪ್ರಮುಖರಾದ ಎಸ್.ಐ. ಪಾಟೀಲ, ಸಣ್ಣ ಕನಕಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಅನಿಲಕುಮಾರ ಬಿಜ್ಜಳ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮೆಹಬೂಬಹುಸೇನ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಕಂಠಿರಂಗ ನಾಯಕ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ ರಮೇಶ ಕುಲಕರ್ಣಿ, ಗಂಗಾವತಿ ಕಸಾಪ ಅಧ್ಯಕ್ಷ ರುದ್ರೇಶ ಮಡಿವಾಳರ, ಕಸಾಪ ಪದಾಧಿಕಾರಿಗಳಾದ ಕನಕರೆಡ್ಡಿ ಕೆರಿ, ರವಿ ಬಲಿಜ, ತಿಪ್ಪಣ್ಣ ಮಡಿವಾಳರ, ಅಂಬರೇಶ ಪಟ್ಟಣಶೆಟ್ಟಿ, ಮಹ್ಮದಷರೀಫ್ ವಟಪರ್ವಿ, ಆನಂದ ಭತ್ತದ, ನಿಂಗಪ್ಪ ಪೂಜಾರ, ಕನಕಪ್ಪ ದಂಡೀನ್ ಹಾಗೂ ಪಾಂಡುರಂಗ ಜನಾದ್ರಿ ಉಪಸ್ಥಿತರಿದ್ದರು.

ವಿವಿಧ ನಿಗಮ ಮಂಡಳಿಗಳ ಸದಸ್ಯರಾದ ವೆಂಕಟೇಶ ಕುಲಕರ್ಣಿ, ಮಲ್ಲಿಕಾರ್ಜುನಗೌಡ ಹಾಗೂ ನಾಗೇಶ ಬಡಿಗೇರ, ಪಟ್ಟಣ ಪಂಚಾಯಿತಿ ಸದಸ್ಯರಾದ ಶರಣೆಗೌಡ ಪಾಟೀಲ, ಶೇಷಪ್ಪ ಪೂಜಾರ, ಗಂಗಾಧರ ಚೌಡ್ಕಿ, ಶಾಂತಪ್ಪ ಬಸರಿಗಿಡ, ಹನುಮೇಶ ಹಡಪದ, ವಿವಿಧ ಸಂಘಟನೆಗಳ ಪ್ರಮುಖರಾದ ಮಹಾಂತೇಶ ತಾಡಪತ್ರಿ, ಪಾಮಣ್ಣ ಅರಳಿಗನೂರು, ಶರಣಪ್ಪ ಬಜಾರದ, ಹರೀಶ ಪೂಜಾರ, ಶರಣಪ್ಪ ಸಜ್ಜನ್, ಬಸವರಾಜ ಕೋರಿ, ಟಿ.ಜೆ. ರಾಮಚಂದ್ರ, ನೀಲಕಂಠಗೌಡ, ಕೆ.ಎಚ್. ಕುಲಕರ್ಣಿ, ಪ್ರಕಾಶ ಹಾದಿಮನಿ, ಶಿವಕುಮಾರ ಕೋರಿ ಹಾಗೂ ಕನಕಪ್ಪ ಯಾದವ ಸೇರಿದಂತೆ ಕಸಾಪ ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

Tags

KannadaKanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X