Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ ಜಿಲ್ಲೆಯಲ್ಲಿ ಲೋಕಾಯುಕ್ತದಿಂದ...

ಕೊಪ್ಪಳ ಜಿಲ್ಲೆಯಲ್ಲಿ ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು : ನ್ಯಾ.ಬಿ.ಎಸ್.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Nov 2026 6:00 PM IST
share
ಕೊಪ್ಪಳ ಜಿಲ್ಲೆಯಲ್ಲಿ ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು : ನ್ಯಾ.ಬಿ.ಎಸ್.ಪಾಟೀಲ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಲೋಕಾಯುಕ್ತ ಸಂಸ್ಥೆ ನಡೆಸಿದ ದಾಳಿಗಳ ವೇಳೆ ಪತ್ತೆಯಾದ ಕೆಲವು ಗಂಭೀರ ಪ್ರಕರಣಗಳನ್ನು ಪರಿಗಣಿಸಿ, ಸಂಸ್ಥೆಯ ವತಿಯಿಂದ ಸ್ವಯಂಪ್ರೇರಿತವಾಗಿ (ಸುಮೋಟೊ) ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದರು.

ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನ. 6ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೈಗೊಂಡ ಪ್ರವಾಸದ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತಹಶೀಲ್ದಾರ್ ಕಚೇರಿ, ಆರ್‌ಟಿಒ ಕಚೇರಿ, ಗ್ರಾಮ ಪಂಚಾಯಿತಿಗಳು, ವಿದ್ಯಾರ್ಥಿನಿಲಯಗಳು ಹಾಗೂ ಶಾಲೆಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಆಕಸ್ಮಿಕ ದಾಳಿ ನಡೆಸಲಾಗಿದೆ. ಇದಕ್ಕಾಗಿ ಸುಮಾರು 65 ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡಗಳನ್ನು ರಚಿಸಿ, ನಾಲ್ಕು ಜಿಲ್ಲೆಗಳಲ್ಲಿ ಸತತ ನಾಲ್ಕು ದಿನಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂದರು.

ಶಾಲೆಗಳ ಮೇಲ್ಛಾವಣಿ ಕುಸಿತ, ಮೂಲಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣಗಳ ವಿಲೇವಾರಿಯಲ್ಲಿ ಆಗುವ ವಿಳಂಬವನ್ನು ತಪ್ಪಿಸಲು ಲೋಕಾಯುಕ್ತ ಸಂಸ್ಥೆಯು ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ. ನಾಗರಿಕರ ಕುಂದುಕೊರತೆಗಳಿಗೆ ಸ್ಪಂದಿಸುವ ಮೂಲಕ ಸಂಸ್ಥೆಯು ಸದಾ ಸಾರ್ವಜನಿಕರ ಪರವಾಗಿ ಕೆಲಸ ಮಾಡುತ್ತಿದೆ ಎಂದರು.

ಲೋಕಾಯುಕ್ತ ಸಂಸ್ಥೆಯಲ್ಲಿ ಸುಮಾರು 30ರಿಂದ 35 ನ್ಯಾಯಾಂಗ ಅಧಿಕಾರಿಗಳು ಹಾಗೂ ಅವರ ಸಿಬ್ಬಂದಿ ಶನಿವಾರ, ಭಾನುವಾರ ಸೇರಿದಂತೆ ರಜಾ ದಿನಗಳಲ್ಲೂ ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಜಾ ದಿನಗಳಲ್ಲೂ ಕೆಲಸ ಮಾಡುವ ಮೂಲಕ ಸಂಸ್ಥೆಯು ಸಾವಿರಾರು ಪ್ರಕರಣಗಳನ್ನು ವಿಲೇವಾರಿ ಮಾಡಿದೆ. ಮಾನವ ಸಂಪನ್ಮೂಲದ ಕೊರತೆಯ ನಡುವೆಯೂ ಲೋಕಾಯುಕ್ತ ಸಂಸ್ಥೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲ್ಲ ಎಂಬ ಕಾರಣಕ್ಕೆ ಕಾರ್ಯಾಚರಣೆಯನ್ನು ನಿಲ್ಲಿಸಿಲ್ಲ, ಮುಂದೆಯೂ ನಿಲ್ಲಿಸುವುದಿಲ್ಲ. ಹೊಸದಾಗಿ ನ್ಯಾಯಾಂಗ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದಕ್ಕೂ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ತಾವು ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ, ಈಗ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ದಿನದಿಂದ ದಿನಕ್ಕೆ ದೂರುಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಜನರು ರೋಸಿಹೋಗಿ ಲೋಕಾಯುಕ್ತ ಸಂಸ್ಥೆಯ ಬಾಗಿಲು ತಟ್ಟುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕ್ರಮ :

ಯಾವುದೇ ಇಲಾಖೆಯಲ್ಲಿ ಕರ್ತವ್ಯಲೋಪ, ದುರಾಡಳಿತ ಹಾಗೂ ಭ್ರಷ್ಟಾಚಾರ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವೈಯಕ್ತಿಕ ಹೊಣೆಗಾರಿಕೆಯನ್ನು ನಿಗದಿಪಡಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಕಾರ್ಯದರ್ಶಿ ಶ್ರೀನಾಥ್, ವಿಚಾರಣಾ ವಿಭಾಗದ ಅಪರ ನಿಬಂಧಕ ಕೃಷ್ಣಯ್ಯ, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ರಾಯಚೂರು ಮತ್ತು ಕೊಪ್ಪಳ ಲೋಕಾಯುಕ್ತ ಎಸ್ಪಿ ಸಿದ್ದರಾಜು, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಹಾಗೂ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಉಪಸ್ಥಿತರಿದ್ದರು.

Tags

KoppalLokayukta
share
ವಾರ್ತಾಭಾರತಿ
ವಾರ್ತಾಭಾರತಿ
Next Story
X