ಕೊಪ್ಪಳ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ನೇಮಕ

ಕೊಪ್ಪಳ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಎಂ.ಮಲ್ಲಿಕಾರ್ಜುನ ರನ್ನು ನೇಮಕ ಮಾಡಿ ಎಐಸಿಸಿ ಬುಧವಾರ ಆದೇಶ ಹೊರಡಿಸಿದೆ.
AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಸಂಘಟನ್ ಸೃಜನ್ ಅಭಿಯಾನದ ಭಾಗವಾಗಿ ಈ ನೇಮಕಾತಿ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದ ಅವರ ಸೇವೆಯನ್ನು ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ. ಅವರ ಆಯ್ಕೆಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
Next Story




