Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ನಿಗದಿತ ಕಾಲಮಿತಿಯಲ್ಲಿ ತುಂಗಭದ್ರಾ...

ನಿಗದಿತ ಕಾಲಮಿತಿಯಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Dec 2025 7:02 PM IST
share
ನಿಗದಿತ ಕಾಲಮಿತಿಯಲ್ಲಿ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಚಿವ ಶಿವರಾಜ ತಂಗಡಗಿ ಸೂಚನೆ

ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ ಗೇಟ್ ಅಳವಡಿಸುವ ಕಾರ್ಯ ಡಿಸೆಂಬರ್ 20ರಿಂದ ಆರಂಭಿಸಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ.

ಶನಿವಾರ ಮುನಿರಾಬಾದ್ ನಲ್ಲಿ‌ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟಗೇಟ್ ಅಳವಡಿಸುವ ಕುರಿತು ಕೆಎನ್‌ಎನ್ಎಲ್ ಅಧಿಕಾರಿಗಳು ಹಾಗೂ ತುಂಗಭದ್ರಾ ಮಂಡಳಿಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಶಿವರಾಜ ಎಸ್.ತಂಗಡಗಿ, ತುಂಗಭದ್ರಾ ಜಲಾಶಯವು ನಮ್ಮ ಭಾಗದ ಲಕ್ಷಾಂತರ ರೈತರ ಜೀವನಾಡಿಯಾಗಿದೆ. ಪ್ರಸ್ತುತ ಹಳೆಯದಾಗಿರುವ ಜಲಾಶಯದ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಬದಲಾಯಿಸಲು 52 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಅದರಂತೆ ಪ್ರಸ್ತುತ ಕ್ರಸ್ಟ್ ಗೇಟ್ ಗಳ ಡಿಸ್ ಮೆಟಲಿಂಗ್ ಮತ್ತು ಇತರೆ ಕೆಲ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಇದಕ್ಕಾಗಿ ಗುತ್ತಿಗೆದಾರರು ಎರಡು ತಂಡಗಳನ್ನು ರಚಿಸಿ ಶೀಘ್ರವೇ ಕೆಲಸ ಮಾಡಿಸಬೇಕು. ನೂತನ ಕ್ರಸ್ಟ್‌ ಗೇಟ್ ಅಳವಡಿಸುವ ಕಾರ್ಯ ಡಿಸೆಂಬರ್ 20ರಿಂದ ಆರಂಭಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ಕಾಮಗಾರಿಯು ಕಡ್ಡಾಯವಾಗಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕೆಂದು ಸೂಚನೆ ನೀಡಿದರು.

ನಮ್ಮ ರೈತರು ಎರಡನೇ ಬೆಳೆಗೆ ನೀರನ್ನು ತ್ಯಾಗ ಮಾಡಿದ್ದಾರೆ. ಇದನ್ನು ನಾವೆಲ್ಲರೂ ಅರಿತುಕೊಂಡು ಕೆಲಸ ಮಾಡಬೇಕು. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಸೇರಿ ಎಲ್ಲಾ 33 ಕ್ರಸ್ಟ್ ಗೇಟ್ ಗಳನ್ನು ಬದಲಾಯಿಸುವುದಾಗಿ ರೈತರಿಗೆ ಮಾತು ನೀಡಿದ್ದು, ಅದನ್ನು ಉಳಿಸಿಕೊಳ್ಳಬೇಕಿದೆ. 2026ರ ಮುಂಗಾರು ವೇಳೆ ಜಲಾಶಯದಲ್ಲಿ ನೀರು ಸಂಗ್ರಹವಾಗುತ್ತದೆ. ಮುಂಗಾರು ಬೆಳೆಗಳಿಗೆ ನೀರು ಒದಗಿಸಲು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಕೂಡ ನಮ್ಮ ಕರ್ತವ್ಯವಾಗಿದೆ. ಹಾಗಾಗಿ ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ ಗೇಟ್ ಅಳವಡಿಸುವ ಕಾರ್ಯ ಮೇ ತಿಂಗಳೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಲು ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಳ್ಳಬೇಕು. ನೂತನ ಕ್ರಸ್ಟ್‌ ಗೇಟ್ ಅಳವಡಿಸುವ ಕಾರ್ಯ ನಡೆಯುವ ಸ್ಥಳಕ್ಕೆ ಯಾರನ್ನು ಬಿಡಬಾರದು. ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಗಳಾಗದಂತೆ ಕುಡಿಯುವ ನೀರು ಪೂರೈಕೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ನಿರ್ದೇಶನ‌ ನೀಡಿದರು.

ಮೆ.ಹಾರ್ಡ್ ವೇರ್ ಟೂಲ್ಸ್ ಮತ್ತು ಮಷಿನರಿ ಪ್ರೇಜಕ್ಟ್ ಪ್ರೈ. ಲಿಮಿಟೆಡ್ ಕಂಪೆನಿಯ ಪ್ರತಿನಿಧಿಗಳು ಮಾತನಾಡಿ, ತಮ್ಮ ಸಂಸ್ಥೆಯಿಂದ ಪಶ್ಚಿಮ ಬಂಗಾಳದ ಪರಾಕ್ ಬ್ಯಾರೇಜ್ ಜಲಾಶಯದಲ್ಲಿ 124 ಗೇಟ್ ಗಳನ್ನು ಅಳವಡಿಸಿದ್ದು, ಇವುಗಳು ತುಂಗಭದ್ರಾ ಜಲಾಶಯದ ಗೇಟ್ ಗಳ ಗಾತ್ರದ್ದೆ ಆಗಿವೆ. ಇದಲ್ಲದೆ ಕೆ.ಆರ್.ಎಸ್. ಜಲಾಶಯ ಮತ್ತು ನಾರಾಯಣಪುರ ಡ್ಯಾಮಿನ ಗೇಟ್ ಗಳ ಅಳವಡಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಂಡಿದ್ದೇವೆ ಎಂದು ಹೇಳೀದ್ದಾರೆ.

ಸಭೆಯಲ್ಲಿ ಮುನಿರಾಬಾದ್ ಕೇಂದ್ರ ವಲಯದ ಕಾರ್ಯಪಾಲಕ ಅಭಿಯಂತರರು ಪ್ರೀತಿ ಪತ್ತಾರ, ಟಿಬಿ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಚಂದ್ರಶೇಖರ್‌, ವಡ್ಡರ ಹಟ್ಟಿ ವಿಭಾಗದ ಕಾರ್ಯಪಾಲಕ ಅಭಿಯಂತರ ಎಂ.ಎಸ್ ಗೋಡೆಕರ್, ಮುನಿರಾಬಾದ್ ವಲಯದ ತಾಂತಿಕ್ರ ಸಹಾಕಯಕರಾದ ಯಲ್ಲಪ್ಪ, ವಿನಾಯಕ ಬಿ., ಬಸಪ್ಪ ಜಾನಕರ್, ಲಿಂಗರಾಜ್ ಹಾಗೂ ರಾಘವೇಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರಂರಾಜ್, ಸಹಾಯಕ ಇಂಜಿನಿಯರ್ ಹುಲಿರಾಜ್ ಮತ್ತು ಕಿರಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X