Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿಯ ವಿವಿಧೆಡೆ ಮೊಹರಂ ಆಚರಣೆ

ಕನಕಗಿರಿಯ ವಿವಿಧೆಡೆ ಮೊಹರಂ ಆಚರಣೆ

ವಾರ್ತಾಭಾರತಿವಾರ್ತಾಭಾರತಿ26 Jun 2026 11:09 PM IST
share
ಕನಕಗಿರಿಯ ವಿವಿಧೆಡೆ ಮೊಹರಂ ಆಚರಣೆ

ಕನಕಗಿರಿ : ತ್ಯಾಗ ಮತ್ತು ಬಲಿದಾನದ ಪ್ರತೀಕವಾಗಿರುವ ಮೊಹರಂ ಹಬ್ಬವನ್ನು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶಾಂತಿಯುತ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.

ಗುರುವಾರ ರಾತ್ರಿ ನಡೆದ ಖತ್ತಲ್‌ರಾತ್ರಿ ಆಚರಣೆಯಲ್ಲಿ ಭಕ್ತರು ಇಡೀ ರಾತ್ರಿ ಅಲಾಯಿ ಕುಣಿಯ ಮುಂದೆ ಹಲಗೆ ಸೇರಿದಂತೆ ವಿವಿಧ ವಾದ್ಯಗಳನ್ನು ನುಡಿಸಿ ಸಂಭ್ರಮಿಸಿದರು. ಶುಕ್ರವಾರ ಸಂಜೆ ಪೀರರ ದೇವರುಗಳು ಪರಸ್ಪರ ಎದುರಾಗುವ ದೃಶ್ಯವನ್ನು ಕಣ್ತುಂಬಿಕೊಳ್ಳಲು ರಾಜಬೀದಿಯಲ್ಲಿ ಜನಸಾಗರವೇ ಹರಿದುಬಂದಿತ್ತು.

ಬೆಳಗಿನ ಜಾವ ಹೊನ್ನುರುಬಾಷ, ಹಟೇಲಬಾಷ ಹಾಗೂ ಹಸೇನಬಾಷ ದೇವರುಗಳು ಹರಕೆ ಹೊತ್ತ ಮನೆಗಳಿಗೆ ಭೇಟಿ ನೀಡಿದ ವೇಳೆ ಭಕ್ತರು ಮುಜಾವರರ ಪಾದಗಳಿಗೆ ನೀರು ಹಾಕಿ ನಮಸ್ಕರಿಸಿ, ಹೂವಿನ ಹಾರ, ನೋಟಿನ ಹಾರ, ಸಕ್ಕರೆ ಸೇರಿದಂತೆ ವಿವಿಧ ಕಾಣಿಕೆಗಳನ್ನು ಸಮರ್ಪಿಸಿ ಭಕ್ತಿಭಾವ ಮೆರೆದರು.

ಪ್ರತಿ ವರ್ಷದ ಸಂಪ್ರದಾಯದಂತೆ ಹೊನ್ನುರುಬಾಷ ದೇವರು ಉಪ ತಹಶೀಲ್ದಾರ್ ಕಚೇರಿಗೆ ಹಾಗೂ ಹಸೇನಬಾಷ ದೇವರು ಕನಕಾಚಲಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಹೆಜ್ಜೆ ಕುಣಿತ, ಅಲಾಯಿ ಕುಣಿತ, ಭಜಂತ್ರಿ, ಯುವಕರ ನೃತ್ಯ, ಬಾಣ ಮತ್ತು ಬಿರುಸು ಪ್ರದರ್ಶನಗಳು ವಿದಾಯ ಮೆರವಣಿಗೆಗೆ ವಿಶೇಷ ಮೆರುಗು ತಂದವು.

ಬೆಂಗಳೂರು, ಹುಬ್ಬಳ್ಳಿ, ಬಳ್ಳಾರಿ, ಸಿಂಧನೂರು, ಕೊಪ್ಪಳ, ಗದಗ, ಗಂಗಾವತಿ, ಬಾಗಲಕೋಟೆ ಹಾಗೂ ಹೊಸಪೇಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

Tags

Muharram
share
ವಾರ್ತಾಭಾರತಿ
ವಾರ್ತಾಭಾರತಿ
Next Story
X