ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಇಲ್ಲ : ಸಚಿವ ಶಿವರಾಜ ತಂಗಡಗಿ

ಶಿವರಾಜ ತಂಗಡಗಿ
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಪ್ರಶಸ್ತಿಗೆ ಅರ್ಹ ವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
Next Story





