Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ...

ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು : ಡಾ.ಜಿ.ಪರಮೇಶ್ವರ್‌

ಕೊಪ್ಪಳ, ರಾಯಚೂರು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ; ಬರ ಪರಿಸ್ಥಿತಿಯ ಅವಲೋಕನ

ವಾರ್ತಾಭಾರತಿವಾರ್ತಾಭಾರತಿ8 Oct 2026 7:11 PM IST
share
ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು : ಡಾ.ಜಿ.ಪರಮೇಶ್ವರ್‌

ಕೊಪ್ಪಳ: ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬರದಿಂದ ಉಂಟಾದ ಬೆಳೆಹಾನಿಯನ್ನು ಪರಿಶೀಲಿಸಲು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ರೈತರ ಜಮೀನುಗಳಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಜಿಲ್ಲಾ ಪಂಚಾಯತ್‌ ಕಚೇರಿ ಸಭಾಂಗಣದಲ್ಲಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿಯ ಕುರಿತು ಸಮೀಕ್ಷಾ ಸಭೆ ನಡೆಸಿ, ಕೈಗೊಳ್ಳಬೇಕಾದ ತುರ್ತು ಪರಿಹಾರ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೆ ನಿಯಮಿತವಾಗಿ ಕ್ಷೇತ್ರ ಭೇಟಿ ನಡೆಸಿ ಜನರಿಗೆ ಸ್ಪಂದಿಸಬೇಕು. ರಾಜ್ಯದಲ್ಲಿ ಎದುರಾಗಿರುವ ಬರದ ಸವಾಲನ್ನು ಅಧಿಕಾರಿಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಎದುರಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗದ ಸಮನ್ವಯತೆ ಅತ್ಯಂತ ಮುಖ್ಯವಾಗಿದೆ. ಅಧಿಕಾರಿಗಳು ಅಸಡ್ಡೆಯಿಂದ ವರ್ತಿಸಿ ಕ್ಷೇತ್ರ ಭೇಟಿ ನಡೆಸದೆ, ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹವರ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಜಾನುವಾರುಗಳಿಗೆ ಅನುಕೂಲವಾಗುವಂತೆ ಹಾಗೂ ನೀರಾವರಿ ಸೌಲಭ್ಯ ಹೊಂದಿರುವ ಅರ್ಹ ರೈತರಿಗೆ ಮೇವಿನ ಬೀಜಗಳ ಮಿನಿಕಿಟ್‌ಗಳನ್ನು ಸಮರ್ಪಕವಾಗಿ ವಿತರಿಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒಗಳು ವಿಶೇಷ ಮುತುವರ್ಜಿ ವಹಿಸಿ ಕೂಲಿ ಕೆಲಸ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ಜನರಿಗೆ ಉದ್ಯೋಗ ಲಭ್ಯವಾಗಿ ಗುಳೆ ಹೋಗುವುದನ್ನು ತಪ್ಪಿಸಬಹುದು. ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ಕೂಲಿ ಹಣ ಪಾವತಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ ರೈತರಿಗೆ ಸಮರ್ಪಕವಾಗಿ ಬೆಳೆ ವಿಮೆ ಹಣ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ಬಹುತೇಕ ರೈತರು ವಿದ್ಯುತ್ ಸಮಸ್ಯೆಯ ಕುರಿತು ಅಹವಾಲು ಸಲ್ಲಿಸಿದ್ದಾರೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತು ನೀಡಬೇಕು ಎಂದು ಉಪ ಮುಖ್ಯಮಂತ್ರಿ ಅವರು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ಕೊರತೆ ಮುಂದುವರಿದು ಬಿಸಿಲಿನ ತೀವ್ರತೆ ಹೆಚ್ಚಾದಂತೆ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಟ್ಯಾಂಕರ್‌ಗಳ ಮೂಲಕ ಪೂರೈಸುವ ನೀರನ್ನು ಪರೀಕ್ಷಿಸಿ ಬಳಿಕ ಜನರಿಗೆ ವಿತರಿಸಬೇಕು. ಜನರ ಆರೋಗ್ಯದ ಮೇಲ್ವಿಚಾರಣೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಯಮಿತವಾಗಿ ಸಭೆ ನಡೆಸಬೇಕು ಎಂದು ತಿಳಿಸಿದರು.

ಕಿರು ಸಾಲ ಅಥವಾ ಸಣ್ಣ ಸಾಲ ನೀಡುವ ಸಂಸ್ಥೆಗಳಿಂದ ಬಡ ಜನರ ಮೇಲೆ ನಡೆಯುವ ಬಲವಂತದ ವಸೂಲಿ ಹಾಗೂ ಮಾನಸಿಕ ಕಿರುಕುಳವನ್ನು ಸರ್ಕಾರ ಖಂಡಿಸುತ್ತದೆ. ಬರದ ಪರಿಸ್ಥಿತಿಯಲ್ಲಿ ಸಾಲ ವಸೂಲಾತಿ ಕಿರುಕುಳದ ಪ್ರಕರಣಗಳು ಮರುಕಳಿಸಿದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಎಚ್ಚರಿಕೆ ನೀಡಿದರು.

ಕೊಪ್ಪಳ ಜಿಲ್ಲೆಯಲ್ಲಿ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ :

ಕೊಪ್ಪಳ ಜಿಲ್ಲೆಯಲ್ಲಿ 152 ಗ್ರಾಮ ಪಂಚಾಯಿತಿಗಳ ಪೈಕಿ 45 ಗ್ರಾಮಗಳಿಗೆ 55 ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಪಿಡಿ ಖಾತೆಯಲ್ಲಿ ಲಭ್ಯವಿರುವ 4 ಕೋಟಿ ರೂ. ಅನುದಾನದಲ್ಲಿ ಈಗಾಗಲೇ 3.20 ಕೋಟಿ ರೂ. ಬಳಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಮತ್ತೆ 1 ಕೋಟಿ ರೂ. ಗೆ ಕ್ರಿಯಾಯೋಜನೆ ರೂಪಿಸಲಾಗಿದೆ. ನಗರ ಪ್ರದೇಶಗಳಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಅಂದಾಜು 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ತಿಳಿಸಿದರು.

ಗ್ರಾಮೀಣ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು:

ಎಲ್ಲ ಜಿಲ್ಲೆಗಳಿಗೂ ತಲಾ 1 ಕೋಟಿ ರೂ. ಕುಡಿಯುವ ನೀರಿನ ವ್ಯವಸ್ಥೆಗಾಗಿ ನೀಡುವ ಯೋಚನೆಯಿದೆ. ಯಾವುದೇ ರೀತಿಯಲ್ಲೂ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.

ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬೆಳೆಹಾನಿ‌ :

ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3.49 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ 3.14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನ ವಾಡಿಕೆ ಮಳೆ 383 ಮಿ.ಮೀ. ಇದ್ದು, ವಾಸ್ತವವಾಗಿ 207 ಮಿ.ಮೀ. ಮಳೆಯಾಗಿದೆ. ಶೇ.45ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 44,000 ಹೆಕ್ಟೇರ್ ಪ್ರದೇಶವು ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟು 15,000 ಹೆಕ್ಟೇರ್ ಪ್ರದೇಶದ ಗುರಿಯ ಪೈಕಿ ಇದುವರೆಗೆ 12,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ 2.94 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಹಾಗೂ 8,300 ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಸೇರಿ ಇದುವರೆಗೆ ಒಟ್ಟು 3.02 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಒಟ್ಟು 5,72,375 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ ಇದುವರೆಗೆ 4,82,498 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನ ವಾಡಿಕೆ ಮಳೆ 440 ಮಿ.ಮೀ. ಇದ್ದು, ವಾಸ್ತವವಾಗಿ 197 ಮಿ.ಮೀ. ಮಳೆಯಾಗಿದೆ. ಶೇ.48ರಷ್ಟು ಮಳೆ ಕೊರತೆಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಒಟ್ಟು 26,000 ಹೆಕ್ಟೇರ್ ಪ್ರದೇಶವು ತೋಟಗಾರಿಕಾ ಬೆಳೆಗಳ ವಿಸ್ತೀರ್ಣ ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ಒಟ್ಟು 19,808 ಹೆಕ್ಟೇರ್ ಪ್ರದೇಶದ ಗುರಿಯ ಪೈಕಿ ಇದುವರೆಗೆ 7,604 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ 2,80,665 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಹಾಗೂ 680.09 ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಹಾನಿಯಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.

ಸಭೆಯಲ್ಲಿ ಅಟಲ್ ಜನಸ್ನೇಹಿ ಕೇಂದ್ರದ ರಾಜ್ಯ ನಿರ್ದೇಶಕ ಎಂ.ಎಸ್. ದಿವಾಕರ, ಕೊಪ್ಪಳ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ರಾಯಚೂರು ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಕೊಪ್ಪಳ ಜಿ.ಪಂ. ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ರಾಯಚೂರು ಜಿ.ಪಂ. ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಕೃಷ್ಣಮೂರ್ತಿ, ಜಂಟಿ ತೋಟಗಾರಿಕಾ ನಿರ್ದೇಶಕ ಕೃಷ್ಣ ಉಕ್ಕುಂದ, ರಾಯಚೂರು ಜಂಟಿ ಕೃಷಿ ನಿರ್ದೇಶಕ ಪ್ರಕಾಶ ಚವ್ಹಾಣ, ತೋಟಗಾರಿಕಾ ಜಂಟಿ ನಿರ್ದೇಶಕ ಮಹಮ್ಮದ್ ಅಲಿ, ಕೊಪ್ಪಳ ಹಾಗೂ ರಾಯಚೂರು ತಾಲೂಕಿನ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕಂದಾಯ, ಪಶುಪಾಲನೆ, ರೇಷ್ಮೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Dr.G.Parameshwara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X