Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ನಮ್ಮ ‌ಸರಕಾರ ಬಡವರ ಪರವಾದ ಸರಕಾರ : ಸಚಿವ...

ನಮ್ಮ ‌ಸರಕಾರ ಬಡವರ ಪರವಾದ ಸರಕಾರ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ19 Dec 2025 9:54 PM IST
share
ನಮ್ಮ ‌ಸರಕಾರ ಬಡವರ ಪರವಾದ ಸರಕಾರ : ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಕೊಪ್ಪಳ : ನಮ್ಮ ‌ಸರಕಾರ ಬಡವರ ಪರವಾದ ಸರಕಾರವಾಗಿದ್ದು, ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಹೇಳಿದರು.

ಅವರು ಶುಕ್ರವಾರ ಯಲಬುರ್ಗಾ ಪಟ್ಟಣದಲ್ಲಿ ಬಿ.ಎಸ್.ಸಿ. ನರ್ಸಿಂಗ್ ಕಾಲೇಜು ಪ್ರಾರಂಭೋತ್ಸವ ಮತ್ತು ಅಡಿಗಲ್ಲು ಸಮಾರಂಭ, ತಾಲ್ಲೂಕು ಪಂಚಾಯತ್ ಆಡಳಿತ ಭವನದ ಅಡಿಗಲ್ಲು ಸಮಾರಂಭ ಹಾಗೂ ಶಿಕ್ಷಕರ ತರಬೇತಿ ಕೇಂದ್ರ (ಬಿ.ಇ.ಓ) ಕಚೇರಿ ಶಂಕುಸ್ಥಾಪನೆ, ಯಲಬುರ್ಗಾ- ಕುಕನೂರ ಪಟ್ಟಣ ಪಂಚಾಯತಿಯಿಂದ ಮಲ ಕೆಸರು ಸಂಸ್ಕರಣಾ ಘಟಕ ( ಎಫ್.ಎಸ್.ಟಿ.ಸಿ) ಶಂಕುಸ್ಥಾಪನೆ ಮತ್ತು ಬಾಲ ಭವನ ಅಂಗನವಾಡಿ ತರಬೇತಿ ಕೇಂದ್ರ( ಸಿ.ಡಿ.ಪಿ.ಓ) ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ನಂತರ ಯಲಬುರ್ಗಾ ಪಟ್ಟಣ ಪಂಚಾಯತ್‌ ಬಯಲು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಮುಖ್ಯಮಂತ್ರಿಗಳು ಬಡವರ ಪರ ಕೆಲಸ ಮಾಡುವವರಾಗಿದ್ದು, ಅವರು ಬಡವರಿಗಾಗಿ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ನಮ್ಮ ಪ್ರಣಾಳಿಕೆಯಲ್ಲಿ ಹೇಳಿದಂತೆ ಅವುಗಳನ್ನು ಪಾಲಿಸಿಕೊಂಡು ಬರುತ್ತಿದ್ದೆವೆ. ನಮ್ಮ ರಾಜ್ಯದ ಜಿಡಿಪಿ ಇಡೀ ದೇಶದಲ್ಲಿ ಹೆಚ್ಚಿದೆ. ಬಡವರ ಅನುಕೂಲಕ್ಕಾಗಿ ಹೆಚ್ಚು ಬಿಪಿಎಲ್ ಕಾರ್ಡಗಳನ್ನು ನಾವು ನೀಡಿದ್ದೆವೆ. ಯಲಬುರ್ಗಾ ಕ್ಷೇತ್ರದ ಶಾಲಾ- ಕಾಲೇಜುಗಳು ಮತ್ತು ಹಾಸ್ಟೆಲ್‌ ಗಳನ್ನು ಬೇರೆ ಕ್ಷೇತ್ರಗಳಿಗೆ ಹೋಲಿಸಿದರೆ ಇದು ಅಭಿವೃದ್ಧಿಯ ಮತಕ್ಷೇತ್ರವಾಗಿದೆ. ಬಸವರಾಜ ರಾಯರಡ್ಡಿ ಅವರು ಜನಪರ ಕಾಳಜಿಯ ನಾಯಕರಾಗಿದ್ದಾರೆ ಎಂದು ಹೇಳಿದರು.

ಯಲಬುರ್ಗಾದಲ್ಲಿ ಇಂದು ನರ್ಸಿಂಗ್ ಕಾಲೇಜಿನ ಉದ್ಘಾಟನೆ ಮತ್ತು ಅಡಿಗಲ್ಲು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಮಾಡಿದ್ದೆನೆ. ನಮ್ಮ ರಾಜ್ಯ ದೇಶದಲ್ಲಿ ಅತಿ ಹೆಚ್ಚು ನರ್ಸಿಂಗ್ ಕಾಲೇಜುಗಳನ್ನು ಹೊಂದಿದೆ. 800 ಬಿಎಸ್ಸಿ ನರ್ಸಿಂಗ್, 600 ಬಿಎಸ್ಸಿ ಡಿಪ್ಲೊಮಾ ನರ್ಸಿಂಗ್ ಕಾಲೇಜುಗಳಿದ್ದು, ಬೇರೆ ರಾಜ್ಯಗಳಿಂದ ಇಲ್ಲಿಗೆ ವಿದ್ಯಾರ್ಥಿಗಳು ಕಲಿಯಲು ಬರುತ್ತಾರೆ. ಇದು ನಮ್ಮ ನಾಯಕರ ದೂರ ದೃಷ್ಟಿಯಾಗಿದೆ. ನರ್ಸಿಂಗ್ ಕೋರ್ಸ್ ಮಾಡಿದವರಿಗೆ ಶೇ.100 ಪ್ರತಿಶತ ಉದ್ಯೋಗ ದೊರೆಯುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಲಿದೆ. ಜಿಟಿಟಿಸಿ ಕೋರ್ಸ್ ಮಾಡಿದವರಿಗೂ ಶೇ. 100 ಉದ್ಯೋಗ ದೊರೆಯುತ್ತದೆ. ಯುವಕರಿಗೆ ಉದ್ಯೋಗ ಆಧಾರಿತ ಸರಿಯಾದ ಶಿಕ್ಷಣ ನೀಡಬೇಕಿದೆ. ತಳಕಲನಲ್ಲಿ ಮಲ್ಟಿಸ್ಕಿಲ್ ಕೇಂದ್ರವನ್ನು ಮಾಡುತ್ತಿದ್ದೆವೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಮಾತನಾಡಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಜಾರಿ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಒತ್ತು ನೀಡುತ್ತಿದೆ. ಈ ದಿಶೆಯಲ್ಲಿ ಇಂದು ಯಲಬುರ್ಗಾ ಪಟ್ಟಣದಲ್ಲಿ ಬಿ.ಎಸ್.ಸಿ. ನರ್ಸಿಂಗ್ ಕಾಲೇಜು ಪ್ರಾರಂಭೋತ್ಸವ ಮತ್ತು ಅಡಿಗಲ್ಲು ಸಮಾರಂಭ, ತಾಲೂಕು ಪಂಚಾಯತ್ ಆಡಳಿತ ಭವನದ ಅಡಿಗಲ್ಲು ಸಮಾರಂಭ ಹಾಗೂ ಶಿಕ್ಷಕರ ತರಬೇತಿ ಕೇಂದ್ರ (ಬಿ.ಇ.ಓ) ಕಚೇರಿ ಶಂಕುಸ್ಥಾಪನೆ ಮತ್ತು ಯಲಬುರ್ಗಾ-ಕುಕನೂರ ಪಟ್ಟಣ ಪಂಚಾಯತಿಯಿಂದ ಮಲ ಕೆಸರು ಸಂಸ್ಕರಣಾ ಘಟಕ (ಎಫ್.ಎಸ್.ಟಿ.ಪಿ.) ಶಂಕುಸ್ಥಾಪನೆ, ಬಾಲ ಭವನ, ಅಂಗನವಾಡಿ ತರಬೇತಿ ಕೇಂದ್ರ (ಸಿ.ಡಿ.ಪಿ.ಓ.) ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾರಂಭದಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಇದರಿಂದ‌ ವಿದ್ಯಾರ್ಥಿಗಳ ಡೊನೆಶನ ಮೊತ್ತವು ಉಳಿದಿದೆ. ನಮ್ಮ ಸರ್ಕಾರವು ಜನಪರವಾದ ಮತ್ತು ಅತ್ಯುತ್ತಮವಾದ ಕೆಲಸಗಳನ್ನು ಮಾಡುತ್ತಿದ್ದು, ದೇಶದಲ್ಲಿ ಅತೀ ಹೆಚ್ಚು ಜಿಡಿಪಿ ಹೊಂದಿದೆ. ಇದಲ್ಲದೆ ದೇಶದಲ್ಲೇ ಹೆಚ್ಚಿನ ಸಂಖ್ಯೆಯ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಿದೆ ಎಂದರು.

ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಯಲಬುರ್ಗಾದ ಸರ್ಕಾರಿ ನರ್ಸಿಂಗ್ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರದಿಂದ 10 ಎಕರೆ ಭೂಮಿಯನ್ನು ಉಚಿತವಾಗಿ ನೀಡಿದ್ದು, 9.85 ಕೋಟಿ ರೂ.ಗಳನ್ನು ಕಾಲೇಜಿನ ಸಿಬ್ಬಂದಿಗಳ ಮತ್ತು ಪ್ರಯೋಗಾಲಯ ಮತ್ತು ಇತರೆ ಕಟ್ಟಡಗಳ ನಿರ್ಮಾಣಕ್ಕೆ ನೀಡಲಾಗಿದೆ. ಇಂದು ಈ ಕಾಲೇಜಿನ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಉದ್ಘಾಟನೆಯನ್ನು ಮಾಡಿದರು. ಈ ಸರ್ಕಾರಿ ನರ್ಸಿಂಗ್ ಕಾಲೇಜಿಗೆ ಮುಂದಿನ ಮೂರು ವರ್ಷಗಳ ಅವದಿಗೆ ಕಾಲೇಜಿಗೆ ಬೇಕಾದ ಸಿಬ್ಬಂದಿಗಳ ವೇತನ ಮತ್ತು ಮೂಲ ಸೌಕರ್ಯಗಳಿಗೆ ಬೇಕಾದ ಹಣವನ್ನು ಸಹ ಕೆ.ಕೆ.ಆರ್.ಡಿ.ಬಿ ಯಿಂದ ಒದಗಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪಂಚಾಯತ್‌ ‌ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಹೇಮಂತಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪಿ. ವೈ. ಶೆಟ್ಟೆಪ್ಪನವರ್, ಶಾಲಾ- ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರಾದ ಸೋಮಶೇಖರಗೌಡ ಪಾಟೀಲ್‌ ಸೇರಿದಂತೆ ಇತರೆ ಜಿಲ್ಲಾ ‌ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X