Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳದ ತೊಗಲುಗೊಂಬೆಯಾಟ ಕಲಾವಿದೆ...

ಕೊಪ್ಪಳದ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರಗೆ ʼಪದ್ಮಶ್ರೀʼ

ವಾರ್ತಾಭಾರತಿವಾರ್ತಾಭಾರತಿ25 Jan 2025 8:46 PM IST
share
ಕೊಪ್ಪಳದ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ಶಿಳ್ಳೆಕ್ಯಾತರಗೆ ʼಪದ್ಮಶ್ರೀʼ

ಕೊಪ್ಪಳ : ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದ ತೊಗಲುಗೊಂಬೆ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿ‍ಳ್ಳೇಕ್ಯಾತರ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ.

ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ 1929ರಲ್ಲಿ ಜನಿಸಿದ ಭೀಮವ್ವ ಶಿಳ್ಳೆಕ್ಯಾತರ, ತೊಗಲುಗೊಂಬೆಯಾಟದಲ್ಲಿ ಅಂತರಾಷ್ಟ್ರೀಯ ಖ್ಯಾತಿಯನ್ನು ಪಡೆದಿದ್ದಾರೆ. ತಮ್ಮ14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲಕಸುಬಾಗಿ ಮಾಡುತ್ತಾ ಕಲೆಯಲ್ಲಿ ಮಹತ್ತರ ಸಾಧನೆ ಮಾಡಿದ್ದಾರೆ.

ಅಮೇರಿಕ, ಪ್ಯಾರಿಸ್, ಇಟಲಿ, ಇರಾನ್, ಇರಾಕ್, ಸ್ವಿಟ್ಜರ್ಲೆಂಡ್, ಹಾಲೆಂಡ್ ಮುಂತಾದ ದೇಶಗಳಲ್ಲಿ ರಾಮಾಯಣ ಮಹಾಭಾರತದಂತಹ ಮಹಾಕಾವ್ಯಗಳನ್ನು ಹಾಗೂ ಪ್ರಸ್ತುತ ವಿದ್ಯಮಾನಗಳನ್ನು ತೊಗಲುಗೊಂಬೆಯಾಟದ ಮೂಲಕ ಪ್ರದರ್ಶನ ನೀಡಿ ಮೆಚ್ಚುಗೆ ಪಡೆದಿದ್ದಾರೆ.

ಭೀಮವ್ವ ಶಿಳ್ಳೆಕ್ಯಾತರ ಅನಕ್ಷರಸ್ಥೆಯಾದರೂ ವಂಶಪಾರಂಪರ್ಯವಾಗಿ ಬಂದ ತೊಗಲುಗೊಂಬೆಯಾಟ ಕಲೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಇಡೀ ಜಿಲ್ಲೆಯಲ್ಲಿ ಇದೊಂದೇ ಕುಟುಂಬ ನೂರಾರು ವರ್ಷಗಳಿಂದ ತೊಗಲುಗೊಂಬೆಯಾಟವನ್ನು ಪ್ರದರ್ಶಿಸುತ್ತಾ ಬಂದಿದೆ.

ಇವರ ಮನೆಯಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಅಜ್ಜಿ ಭೀಮವ್ವ ಸಹ ಗೊಂಬೆಯಾಟ ಪ್ರದರ್ಶನಕ್ಕೆ ಜೀವನವನ್ನು ಮುಡಿಪಾಗಿಟ್ಟಿದ್ದಾರೆ.

ಭೀಮವ್ವ ಶಿಳ್ಳೆಕ್ಯಾತರ ಹೆಚ್ಚು ಪೌರಾಣಿಕ ಕಥೆ ಆಧಾರಿತ ರಾಮಾಯಣ, ಕುರುಕ್ಷೇತ್ರ, ವಿರಾಟ ಪರ್ವ, ಲವಕುಶ ಕಾಳಗ, ಕರ್ಣಪರ್ವ, ದ್ರೌಪದಿ ವಸ್ತ್ರಾಪಹರಣ, ಆದಿಪರ್ವ ಸೇರಿ ಮಹಾಭಾರತದ 18 ಪರ್ವಗಳನ್ನು ಪ್ರದರ್ಶಿಸುತ್ತಾರೆ. ತಮ್ಮ ಕುಟುಂಬದವರಿಗೆ ಇಂದಿಗೂ ಗೊಂಬೆಯಾಟ ತರಬೇತಿ ನೀಡುತ್ತಿದ್ದಾರೆ.

ಭೀಮವ್ವ ಶಿಳ್ಳೆಕ್ಯಾತರ ಅವರ ಸೇವೆ ಗುರುತಿಸಿ ಸಂಘ-ಸಂಸ್ಥೆಗಳು ಅನೇಕ ಗೌರವ ಪ್ರಶಸ್ತಿ ನೀಡಿವೆ. ಭೀಮವ್ವನವರ ಮಗ ಕೇಶಪ್ಪ ಶಿಳ್ಳೆಕ್ಯಾತರ ಹಾಗೂ ಇವರ ಮಕ್ಕಳು ಸೇರಿ ಒಟ್ಟು 6 ಜನರು ಗೊಂಬೆಯಾಟದಲ್ಲಿ ತೊಡಗಿಸಿಕೊಂಡಿದ್ದಾರೆ.

ಭೀಮವ್ವ ಶಿಳ್ಳೆಕ್ಯಾತರ ಸಾಧನೆಯನ್ನು ಕಂಡು ಸರಕಾರವು ಅನೇಕ ಪ್ರಶಸ್ತಿ ನೀಡಿ ಗೌರವಿಸಿದೆ. 1993ರಲ್ಲಿ ತೆಹರಾನ್‌ನಲ್ಲಿ ಬೊಂಬೆ ಉತ್ಸವ ಪ್ರಶಸ್ತಿ, 63ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪ್ರಾದೇಶಿಕ ರಂಗ ಕಲೆಗಳ ಅಧ್ಯಯನ ಪ್ರಶಸ್ತಿ, 2005-06ನೇ ಸಾಲಿನಲ್ಲಿ ಜಾನಪದ ಮತ್ತು ಬಯಲಾಟ ಅಕಾಡೆಮಿ ಪ್ರಶಸ್ತಿ, 2010ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2014ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2020-21ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿ, 2022ರಲ್ಲಿ ಹಿರಿಯ ನಾಗರೀಕ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಇವರಿಗೆ ಲಭಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X