Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ: ಮೂರು ದಿನ ಪೆಂಕಾಕ್ ಸಿಲತ್...

ಕೊಪ್ಪಳ: ಮೂರು ದಿನ ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಮುಕ್ತಾಯ

ವಾರ್ತಾಭಾರತಿವಾರ್ತಾಭಾರತಿ29 Sept 2025 7:58 PM IST
share
ಕೊಪ್ಪಳ: ಮೂರು ದಿನ ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಮುಕ್ತಾಯ
ಸಿಲತ್ ಕ್ರೀಡೆಗೆ ರಾಜ್ಯ ಸರಕಾರ ಮಾನ್ಯತೆ: ಸಚಿವ ತಂಗಡಗಿ ಭರವಸೆ

ಕೊಪ್ಪಳ: ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಸಂಸ್ಥೆಯನ್ನು ಹೊಂದಿರುವ ಪೆಂಕಾಕ್ ಸಿಲತ್ ಕ್ರೀಡೆಗೆ ಸಿಎಂ ಅವರ ಹಂತದಲ್ಲಿ ಬಾಕಿ ಇರುವ ಮಾನ್ಯತೆಯನ್ನು ಜಿಲ್ಲೆಯ ಶಾಸಕರೊಂದಿಗೆ ಸಿಎಂ ಬಳಿ ವಿವರಿಸಿ ಮಾನ್ಯತೆ ಕೊಡಿಸುವುದಾಗಿ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ಭರವಸೆ ನೀಡಿದರು.

ನಗರದಲ್ಲಿ ನಡೆದ 13ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಸಚಿವ ತಂಗಡಗಿ, ಬರುವ ದಿನಗಳಲ್ಲಿ ಕ್ರೀಡೆಗೆ ಇನ್ನಷ್ಟು ಒತ್ತು ನೀಡಿ ಸಹಕಾರ ಕೊಡುವದಾಗಿ ಮತ್ತು ಕ್ರೀಡೆಯಿಂದ ಮನುಷ್ಯ ಹೆಚ್ಚು ಬೆಳಗುತ್ತಾನೆ, ಆರೋಗ್ಯಕ್ಕೂ ಒಳ್ಳೆಯದು ಮತ್ತು ಅವಕಾಶಕ್ಕೂ ಒಳ್ಳೆಯದು, ಜಿಲ್ಲೆಯ ಕ್ರೀಡಾಪಟುಗಳು ಇನ್ನಷ್ಟು ಸಾಧನೆ ಮಾಡಲಿ ಎಂದರು.

ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಅವರು ಮಾತನಾಡಿ, ರಾಷ್ಟ್ರದ 33 ರಾಜ್ಯಗಳ 1500 ಜನರು ಕೊಪ್ಪಳಕ್ಕೆ ಬಂದಿರುವದು ವಿಸ್ಮಯ ತಂದಿದೆ. ನಮ್ಮೂರಲ್ಲಿ ಇಂತಹ ಕಾರ್ಯಕ್ರಮ ಸಂಘಟಿಸುವ ಶಕ್ತಿ ಇರುವ ಯುವಕರು ಇರುವುದು ನೋಡಿ ಸಂತೋಷವಾಯಿತು. ಮುಂದಿನ ದಿನಗಳಲ್ಲಿ ಇಂತಹ ಅನೇಕ ಕಾರ್ಯಕ್ರಮಗಳು ಇಲ್ಲಿ ನಡೆಯಲಿ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮಾತನಾಡಿ, ಇಡೀ ದೇಶವೇ ಇಂದು ಕೊಪ್ಪಳದಲ್ಲಿ ನಿಂತ ಹಾಗೆ ಭಾಸವಾಗುತ್ತಿದೆ, ಇಷ್ಟು ಜನರನ್ನು ಕರೆಸಿ ಕ್ರೀಡಾಕೂಟ ನಡೆಸಿರುವದು ಸಾಮಾನ್ಯವಲ್ಲ. ಬಹುಭಾಷೆ ಬಹುಸಂಸ್ಕೃತಿ ಬಹು ಆಯಾಮದ ಭಾರತಕ್ಕೆ ಕೊಪ್ಪಳವನ್ನು ಪರಿಚಯಿಸಿದ ಸಂಘಟಕರು ಅಭಿನಂದನಾರ್ಹರು ಎಂದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ವಿರೇಶ ಮಹಾಂತಯ್ಯನಮಠ ಮಾತನಾಡಿ, ಸ್ನೇಹಿತರೆಲ್ಲ ಸೇರಿ ಜಿಲ್ಲೆಯಲ್ಲಿ ಕ್ರೀಡೆಯನ್ನು ಬೆಳೆಸುತ್ತಿದ್ದಾರೆ. ನಮ್ಮ ಮಕ್ಕಳೂ ಸಾಧನೆ ಮಾಡಬೇಕು. ಕ್ರೀಡೆಯಲ್ಲಿ ಮುಂದೆ ಬರಬೇಕು ಆ ನಿಟ್ಟಿನಲ್ಲಿ ಜಿಲ್ಲಾ ಅಥ್ಲೆಟಿಕ್ಸ್ ಅಸೊಸಿಯೇಷನ್ ಸಂಸದ ರಾಜಶೇಖರ ಹಿಟ್ನಾಳ ಅವರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಕ್ರೀಡಾಕೂಟವನ್ನು ಭಾರತೀಯ ಪೆಂಕಾಕ್ ಸಿಲತ್ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯ ಪೆಂಕಾಕ್ ಸಿಲತ್ ಅಸೊಸಿಯೇಷನ್, ಜಿಲ್ಲಾ ಅಥ್ಲೆಟಿಕ್ ಅಸೊಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದಿಂದ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಸಚಿವರು ಪೆಂಕಾಕ್ ಸಿಲತ್ ರಾಜ್ಯ ಗೌರವ ಅಧ್ಯಕ್ಷ ಅಮರೇಗೌಡ ಬಯ್ಯಾಪೂರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ರಡ್ಡಿ ಶ್ರೀನಿವಾಸ, ಸಾಯಿ ಸಂಸ್ಥೆಯ ಕುಸ್ತಿ ತರಬೇತುದಾರರು ಸಿಲತ್ ರಾಷ್ಟ್ರೀಯ ಕ್ರೀಡಾಕೂಟದ ವೀಕ್ಷಕ ರಾಮ್ ಎಸ್. ಬುಡಕಿ, ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ ವಿಠ್ಠಲ ಚೌಗಲಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಮತ್ತು ರಾಜ್ಯ ಸಿಲತ್ ಸಂಸ್ಥೆ ಜಂಟಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಸಿಲತ್ ಸಂಸ್ಥೆ ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷೆ ಫಿಲಿಯಾ ಥಾಮಸ್, ರಾಷ್ಟ್ರೀಯ ಪೆಂಕಾಕ್ ಸಿಲತ್ ಫೆಡರೇಷನ್ ತಾಂತ್ರಿಕ ನಿರ್ದೇಶಕ ಅಬ್ದುಲ್ ರಝಾಕ್ ಟೈಲರ್, ರಾಷ್ಟ್ರೀಯ ಖಜಾಂಚಿ ತಾರಿಖ್ ಅಹ್ಮದ್ ಜರ್ಗಾರ್, ಕರ್ನಾಟಕ ರಾಜ್ಯ ಪಂಕಾಕ್ ಸಿಲತ್ ಸಂಸ್ಥೆಯ ಅಧ್ಯಕ್ಷ ಜಗನ್ನಾಥ ಅಲಂಪಲ್ಲಿ, ಜಿಲ್ಲಾ ಅಧ್ಯಕ್ಷ ಮೌನೇಶ ವಡ್ಡಟ್ಟಿ, ಪ್ರಧಾನ ಕಾರ್ಯದರ್ಶಿ ಈರಣ್ಣ ಬದಾಮಿ, ಹನುಮಸಾಗರ್ ಅರ್ಬನ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಾಚಲಾಪೂರ, ಯುವ ಸಬಲೀಕರಣ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ, ಮುಖಂಡರಾದ ಪ್ರಲ್ಹಾದರಾವ್ ದೇಸಾಯಿ, ಬಿ. ಎಫ್. ಇಬ್ರಾಹಿಂ, ಮಹಮ್ಮದ್ ಅಬ್ದುಲ್ ಕರಿಮ್ ವಂಟೆಳಿ, ವಿಶ್ವನಾಥ್ ಕನ್ನೂರ, ಪ್ರಹ್ಲಾದ್ ಅಗಳಿ, ಕಾಂಗ್ರೆಸ್ ಮುಖಂಡರಾದ ರವಿ ಕುರಗೋಡ ಯಾದವ, ಗಂಗಾಧರಸ್ವಾಮಿ ಕನಕಗಿರಿ, ಜ್ಯೋತಿ ಎಂ. ಗೊಂಡಬಾಳ, ವಿಶಾಲಾಕ್ಷಿ ತಾವರಗೇರಿ, ಸಲೀಂ ಅಳವಂಡಿ, ಸುಮಂಗಲಾ ನಾಯಕ್, ಮಲ್ಲಿಕಾರ್ಜುನ ಪೂಜಾರ, ಅಥ್ಲೆಟಿಕ್ ಸಂಸ್ಥೆಯ ಶರಣಬಸವ ಬಂಡಿಹಾಳ, ರಿಯಾಝ್ ಮಂಗಲೂರ ಇತರರು ಇದ್ದರು.

ಸಾಹಿತ್ಯ ಎಂ. ಗೊಂಡಬಾಳ ಪ್ರಾರ್ಥಿಸಿದರು, ಜಗನ್ನಾಥ ಅಲಂಪಲ್ಲಿ ಸ್ವಾಗತಿಸಿದರು, ಮಂಜುನಾಥ ಜಿ. ಗೊಂಡಬಾಳ ನಿರ್ವಹಿಸಿದರು, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ಹಂಚಿನಾಳ ವಂದಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X