Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ವಾಹನಗಳ ಸುಸ್ಥಿತಿ ಕಾಪಾಡಿ ವಾಯು ಮಾಲಿನ್ಯ...

ವಾಹನಗಳ ಸುಸ್ಥಿತಿ ಕಾಪಾಡಿ ವಾಯು ಮಾಲಿನ್ಯ ತಡೆಗಟ್ಟಿ : ಪ್ರಭುಸ್ವಾಮಿ ಹಿರೇಮಠ

ವಾರ್ತಾಭಾರತಿವಾರ್ತಾಭಾರತಿ9 Dec 2025 6:10 PM IST
share
ವಾಹನಗಳ ಸುಸ್ಥಿತಿ ಕಾಪಾಡಿ ವಾಯು ಮಾಲಿನ್ಯ ತಡೆಗಟ್ಟಿ : ಪ್ರಭುಸ್ವಾಮಿ ಹಿರೇಮಠ

ಕೊಪ್ಪಳ.ಡಿ09: ಸಾರ್ವಜನಿಕರು ತಮ್ಮ ವಾಹನಗಳಿಗೆ ಯಾವುದೇ ಕಲಬೆರಿಕೆಯಿಲ್ಲದ ಇಂಧನವನ್ನು ಉಪಯೋಗಿಸಿ ಅವುಗಳ ಸುಸ್ಥಿತಿಯನ್ನು ಕಾಪಾಡಿಕೊಂಡು ವಾಯು ಮಾಲಿನ್ಯವನ್ನು ತಡೆಗಟ್ಟಿಕೊಳ್ಳಬೇಕೆಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಹೇಳಿದರು.

ಅವರು ಇತ್ತೀಚೆಗೆ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಭುಸ್ವಾಮಿ ಹಿರೇಮಠ, ವಾಹನಗಳು ಹೊರಸೂಸುವ ಹೊಗೆಯಿಂದ ಗಾಳಿಯು ವಿಷಕಾರಿಯಾಗುತ್ತದೆ. ಕಾರ್ಬನ್ ಮಾನಾಕ್ಸೈಡ್, ಕಾರ್ಬನ್ ಡೈ ಆಕ್ಸೈಡ್, ಹೈಡ್ರೋಕಾರ್ಬನ್, ಆಕ್ಸೈಡ್ ಆಫ್ ನೈಟ್ರೋಜನ್, ಸಲ್ಫರ್ ಡೈ ಆಕ್ಸೈಡ್ ಮತ್ತು ಸಸ್ಪೆಂಡೆಡ್ ಪಾರ್ಟಿಕುಲೇಟ್ ಮ್ಯಾರ್‌ಗಳಿಂದ ಮಾನವನ ಆರೋಗ್ಯದ ಮೇಲೆ ಬಹಳಷ್ಟು ಕೆಟ್ಟ ಪರಿಣಾಮಗಳು ಆಗುತ್ತವೆ. ಹಾಗಾಗಿ ಹೆಚ್ಚು ಹೊಗೆ ಬಿಡುವ ವಾಹನಗಳ ಬಳಕೆಯನ್ನು ಮಾಡಬಾರದು. ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ವಾಹನಗಳ ಹೊಗೆ ಸೂಸುವ ಪ್ರಮಾಣ ನಿಯಂತ್ರಣದಲ್ಲಿಡಲು ವಾಹನಗಳನ್ನು ಸದಾ ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳಿಗೆ ವಾಯು ಮಾಲಿನ್ಯ ತಪಾಸಣೆ ಮಾಡಿಸಬೇಕು. ವಾಹನದ ಏರ್ ಫಿಲ್ಟರ್ ಮತ್ತು ಸ್ಪಾರ್ಕ್ ಪ್ಲಗ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ವಾಹನಗಳಿಗೆ ಕಲಬೆರಕೆ ಇಂಧನವನ್ನು ಮತ್ತು ಕಡಿಮೆ ದರ್ಜೆಯ ಕಳಪೆ ಇಂಜಿನ್ ಆಯಿಲ್ ಉಪಯೋಗಿಸಬಾರದು. ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ವಾಯು ಮಾಲಿನ್ಯ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಾದ್ಯಂತ ವಾಯು ಮಾಲಿನ್ಯ ನಿಯಂತ್ರಣಾ ಜಾಗೃತಿ ಮಾಸಾಚರಣೆಯನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯ ನಿಯಂತ್ರಣ ಕುರಿತಾಗಿ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಂಡು ಅವರಿಗೂ ಸಹ ಪರಿಸರ ಸಂರಕ್ಷಣೆಯ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.

ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಅಮರ್ ಅವರು ವಿವಿಧ ಬಗೆಯ ಮಾಲಿನ್ಯದ ಬಗ್ಗೆ ವಿವರಿಸಿ ಅದರಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುತ್ತಾ ವಾಯುಮಾಲಿನ್ಯವನ್ನು ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕ್ಷಕ ಉಮೇಶ್ ಇಟಗಿ ಅವರು ಮಾತನಾಡಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಅನುಸರಿಸುವ ವಿಧಾನಗಳ ಬಗ್ಗೆ ವಿವರಣೆ ನೀಡಿದರು.

ಈ ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಹಿರಿಯ ಮೊಟಾರು ವಾಹನ ನಿರೀಕ್ಷಕ ಜಿ.ಎಂ ಸುರೇಶ್, ಮೋಟಾರು ವಾಹನ ನಿರೀಕ್ಷಕ ವಿಜೇಂದ್ರ ಡವಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X