Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಪ್ರಧಾನಿ, ಗೃಹ ಸಚಿವರು ರಾಜೀನಾಮೆ ನೀಡಲಿ:...

ಪ್ರಧಾನಿ, ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ

ಎಸ್‌ಐಆರ್ ವಿರುದ್ಧ ಕೊಪ್ಪಳದಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2026 7:01 PM IST
share
ಪ್ರಧಾನಿ, ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ

ಕೊಪ್ಪಳ : ವಿಶೇಷ ತೀವ್ರ ಮತದಾರರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ವ್ಯವಸ್ಥೆಯ ಕುರಿತು ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಆಗ್ರಹಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಚುನಾವಣಾ ಆಯುಕ್ತರ ರಾಜೀನಾಮೆ ಮಾತ್ರ ಸಾಕಾಗುವುದಿಲ್ಲ. ಚುನಾವಣಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಆತಂಕವಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಬಿಜೆಪಿ ಶಾಸಕರೊಬ್ಬರು ಕೆಲವು ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಪತ್ರ ಬರೆದಿರುವುದಾಗಿ ಹೇಳಲಾಗಿರುವ ವಿಷಯವೂ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಚಿವರು ಹೇಳಿದರು.

ಚುನಾವಣಾ ಆಯೋಗವು ಸ್ವತಂತ್ರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಇವಿಎಂ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು ಜ್ಞಾನೇಶ್ ಕುಮಾರ್ ಅವರ ಬಗ್ಗೆ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ತಂಗಡಗಿ, “ಹಾಗಾದರೆ ನಾಗೇಂದ್ರ ಅವರು ಏನು? ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದೇಕೆ?” ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರವಾಗಿದೆ ಎಂದು ಹೇಳಿದ ಅವರು, ಬಿಜೆಪಿ ವಿರುದ್ಧವೂ ಟೀಕೆಗಳನ್ನು ಮಾಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Tags

shivaraj tangadagiHome MinisterPrime Minister
share
ವಾರ್ತಾಭಾರತಿ
ವಾರ್ತಾಭಾರತಿ
Next Story
X