Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುರಿ ಕಳ್ಳತನ ತಡೆಯುವಂತೆ ಆಗ್ರಹಿಸಿ...

ಕುರಿ ಕಳ್ಳತನ ತಡೆಯುವಂತೆ ಆಗ್ರಹಿಸಿ ಯಲಬುರ್ಗಾದಲ್ಲಿ ಕುರಿಗಾರರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ23 Dec 2025 10:02 PM IST
share
ಕುರಿ ಕಳ್ಳತನ ತಡೆಯುವಂತೆ ಆಗ್ರಹಿಸಿ ಯಲಬುರ್ಗಾದಲ್ಲಿ ಕುರಿಗಾರರಿಂದ ಪ್ರತಿಭಟನೆ

ಯಲಬುರ್ಗಾ: ತಾಲೂಕಿನ ತುಮ್ಮರಗುದ್ದಿ ಗ್ರಾಮದಲ್ಲಿ ಕುರಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಕಳ್ಳತನ ಮಾಡುವ ಸಂಘಟಿತ ಜಾಲವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕುರಿಗಾರರು ಯಲಬುರ್ಗಾ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಡಿ. 12ರಂದು ಮಧ್ಯರಾತ್ರಿ ಸುಮಾರು ಒಂದು ಗಂಟೆಯ ವೇಳೆಗೆ ಗ್ರಾಮ ಹೊರವಲಯದಲ್ಲಿ ಕುರಿ ಹಟ್ಟಿಗೆ ನುಗ್ಗಿದ ಕಳ್ಳರು, ಕುರಿಗಳ ಬಾಯಿಮುಚ್ಚಿ ಕೈ–ಕಾಲು ಕಟ್ಟಿ ಕಳ್ಳತನ ಮಾಡುವ ಪ್ರಯತ್ನ ನಡೆಸಿದ್ದಾರೆ. ಕಳ್ಳರನ್ನು ಬೆನ್ನುತ್ತಿದ ವೇಳೆ ಅವರು ಚಾಕು ಚೂರಿ ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ಬೋಲೊರೋ ಗಾಡಿ ಹಾಗೂ ಮೊಬೈಲ್ ಫೋನ್‌ಗಳನ್ನು ಬಿಟ್ಟು ಕಳ್ಳರು ಪರಾರಿಯಾಗಿದ್ದರೂ, ಇದುವರೆಗೂ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಬೀರಲಿಂಗೇಶ್ವರ ಕುರಿ ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಶ್ರೀಭಕ್ತ ಕನಕದಾಸ ವೃತ್ತದಿಂದ ರಾಣಿ ಕಿತ್ತೂರ ಚೆನ್ನಮ್ಮ ವೃತ್ತದವರೆಗೆ ಶಾಂತಿಯುತ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಹಾಗೂ ಸಿಪಿಐ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಸವರಾಜ ಭಜಂತ್ರಿ, ಉಪಾಧ್ಯಕ್ಷ ಶಿವಪ್ಪ ದಂಡಿನ, ಕಾರ್ಯದರ್ಶಿ ದ್ಯಾಮಣ್ಣ ಪರಂಗಿ, ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ರಾಜಶೇಖರ ಶ್ಯಾಗೋಟಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ಅಧ್ಯಕ್ಷ ಶರಣಬಸಪ್ಪ ದಾನಕೈ, ಶೇಖರ ಗುರಾಣಿ, ಬಸವರಾಜ ಗುಳಗುಳಿ, ದೊಡ್ಡಯ್ಯ ಗುರುವಿನ, ಶಿವು ರಾಜೂರ, ದೇವಪ್ಪ ಬನಪ್ಪನವರ, ದೇವಪ್ಪ ಪರಂಗಿ, ರೇವಣಪ್ಪ ಹಿರೇಕುರಬರ, ನೀಲನಗೌಡ ತಳವಗೇರಿ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X