ಕೊಪ್ಪಳ: ಧರ್ಮಸ್ಥಳ ವಿರುದ್ಧ ಸುಳ್ಳು ಅರೋಪ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ

ಕೊಪ್ಪಳ: ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ವಿರುದ್ಧ ಸಮಾಜಿಕ ಜಾಲತಾಣಗಳಲ್ಲಿ ಸುಳ್ಳು ಅರೋಪ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಪ್ಪಳ ಜೈನ ದಿಗಂಬರ ಸಮಾಜ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಧರ್ಮಸ್ಥಳವು ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ "ದಕ್ಷಿಣ ಕಾಶಿ"ಎಂದೇ ನಾಮಾಂಕಿತವಾಗಿದೆ. ನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಕಳೆದ ಕೆಲವು ವರ್ಷಗಳಿಂದ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರ ಹೆಸರಿಗೆ ಕಳಕಂಕ ತರುವ ವೀಡಿಯೋಗಳ ತುಣುಕುಗಳನ್ನು ತಯಾರಿಸಿ ಅದನ್ನು ಸಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುಲಾಗುತ್ತಿದೆ. ಇಂತಹವರ ವಿರುದ್ದ ಕ್ರಮ ಕೈಗೊಳ್ಳ ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅನಾಮಿಕ ವ್ಯಕ್ತಿಯೋರ್ವ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರಕಾರವು ’ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ಯೂಟ್ಯೂಬ್, ಫೇಸ್ಟುಕ್, ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಭಕ್ತರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಲವರು ಷಡ್ಯಂತ್ರ ಹಾಗೂ ಅಪಪ್ರಚಾರ ಮಾಡುತ್ತಿರುವುದರ ಹಿನ್ನೆಲೆ ಏನು? ಸುಳ್ಳು ಆರೋಪ ಮಾಡಲು ಪ್ರಚೋರಿಸುತ್ತಿರುವವರು ಯಾರು? ಈ ತಂಡಕ್ಕೆ ಹಣಕಾಸಿನ ನೆರವು ಎಲ್ಲಿಂದ ಬರುತ್ತಿದೆ? ಎಂಬುದನ್ನು ತಿಳಿಯಲು ಸೂಕ್ತ ತನಿಖೆ ನಡೆಸಬೇಕಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಸಮೀರ್ ಎಂ.ಡಿ.. ಜಯಂತ್ ಟಿ. ಸಂತೋಷ್ ಶೆಟ್ಟಿ ಇವರುಗಳನ್ನು ವಿಚಾರಣೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ಬಯಲಿಗೆ ಎಳೆಯಬೇಕಾಗಿದೆ ಎಂದು ಕೊಪ್ಪಳ ಜೈನ ದಿಗಂಬರ ಸಮಾಜ ಸಂಘ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ನೀಡಿದ ಮನವಿ ಪತ್ರದಲ್ಲಿ ಆಗ್ರಹಿಸಿದೆ.







