Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಶಕ್ತಿ ಯೋಜನೆ| ಕೊಪ್ಪಳ ಜಿಲ್ಲೆಯಲ್ಲಿ 10...

ಶಕ್ತಿ ಯೋಜನೆ| ಕೊಪ್ಪಳ ಜಿಲ್ಲೆಯಲ್ಲಿ 10 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ: ರೆಡ್ಡಿ ಶ್ರೀನಿವಾಸ್‌

ವಾರ್ತಾಭಾರತಿವಾರ್ತಾಭಾರತಿ23 Dec 2025 6:06 PM IST
share
ಶಕ್ತಿ ಯೋಜನೆ| ಕೊಪ್ಪಳ ಜಿಲ್ಲೆಯಲ್ಲಿ 10 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ: ರೆಡ್ಡಿ ಶ್ರೀನಿವಾಸ್‌

ಕೊಪ್ಪಳ.ಡಿ.23: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಈ ತಿಂಗಳ ಡಿಸೆಂಬರ್ ವರೆಗೆ 10 ಕೋಟಿ ಮಹಿಳೆಯರು ಉಚಿವಾಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ಇದಕ್ಕಾಗಿ ಅಂದಾಜು 375 ಕೋಟಿ ಹಣವನ್ನು ವೆಚ್ಚ ಮಾಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಮಂಗಳವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರೆಡ್ಡಿ ಶ್ರೀನಿವಾಸ್‌, ಗ್ಯಾರಂಟಿ ಯೋಜನೆಗಳು ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿದ್ದು, ಜನ ಸಾಮಾನ್ಯರ ಏಳಿಗಾಗಿ ರಾಜ್ಯ ಸರಕಾರ ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿಯಂತಹ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯದಲ್ಲಿಯೇ ಉತ್ತಮ ಪ್ರಗತಿ ಸಾಧಿಸಿದೆ. ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಮೂಲಕ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆ ಹತ್ತು ಕೋಟಿ ದಾಟಿದ್ದು ಇದರಿಂದ ಬಡ ಮತ್ತು ಸಾಮಾನ್ಯ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.

ಪಂಚ ಗ್ಯಾರಂಟಿ ಕುರಿತು ಕಾಲೇಜು ಹಂತದಲ್ಲಿ ಮತ್ತು ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ ಸರಕಾರ ಈ ಮಹತ್ವದ ಯೋಜನೆಗಳ ಬಗ್ಗೆ ಮತ್ತಷ್ಟು ಜನ ಸಾಮಾನ್ಯರಲ್ಲಿ ಪ್ರಚಾರ ಆಗುವಂತೆ ಕ್ರಮವಹಿಸಿ ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ನ್ಯಾಯ ಬೆಲೆ ಅಂಗಡಿಗಳಿಗೆ ಹೋಗಿ ಅಕ್ಕಿ ತರಲು ಸಾದ್ಯವಿಲ್ಲದ ಹಿರಿಯ ನಾಗರಿಕರ ಮನೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ತಲುಪಿಸಲು ನ್ಯಾಯ ಬೆಲೆ ಅಂಗಡಿಗಳ ಮಾಲಕರಿಗೆ ತಿಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿವಿಧ ಕಾರಣಗಳಿಂದಾಗಿ ಗೃಹ ಲಕ್ಷ್ಮೀ ಹಣ ಜಮೆಯಾಗದೆ ಇರುವವರನ್ನು ಗುರುತಿಸಿ ಸಮಸ್ಯೆ ಪರಿಹರಿಸಿ, ಆದಷ್ಟು ಬೇಗ ಅರ್ಹ ಫಲಾನುಭವಿಗೆ ಹಣ ತಲುಪುವಂತೆ ಕ್ರಮ ವಹಿಸಿ, ಇದರ ಜತೆಗೆ ಸರಕಾರದ ಯಾವುದೇ ಯೋಜನೆ ಇರಲಿ ಅದು ಅರ್ಹ ಫಲಾನುಭವಿಗಳೆಗೆ ತಲುಪಬೇಕು. ಸರಕಾರದ ಯೋಜನೆಗಳು ದುರುಪಯೋಗ ಆಗದಂತೆ ನಿಗವಹಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. 2025ನೇ ಸಾಲಿನ ಸೆಪ್ಟೆಂಬರ್ ತಿಂಗಳ ಗೃಹಲಕ್ಷಿಯ ಹಣ 63 ಕೋಟಿ, 90 ಲಕ್ಷ, 34 ಸಾವಿರ ರೂ. ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಹಂತದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳಿಂದಲೇ ಈ ಯೋಜನೆಯಿಂದ ಆದ ಲಾಭದ ಮಾಹಿತಿ ಪಡೆಯುವ ಕೆಲಸ ಮಾಡಬೇಕು. ಈ ಯೋಜನೆಯ ಹಣವನ್ನು ಅವರು ಯಾವ ರೀತಿ ಸದುಪಯೋಗ ಮಾಡಿಕೊಳ್ಳಬೇಕು ಎನ್ನುವುದರ ಜತೆಗೆ ಸರಕಾರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧಿಕಾರಿಗಳಿಗೆ ತಿಳಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್‌ ಸಿ ಇ ಒ ವರ್ಣಿತ್ ನೇಗಿ ಹೇಳಿದರು.

ಗೃಹಲಕ್ಷ್ಮೀ ಯೋಜನೆಯಡಿ ಕೊಪ್ಪಳ ಜಿಲ್ಲೆಯ 3,19,665 ಫಲಾನುಭವಿಗಳಿಗೆ ಆಗಸ್ಟ್-2025ರ ಅಂತ್ಯದವರೆಗೆ ಡಿಬಿಟಿ ಮೂಲಕ 63,93,30,000 ರೂ.ಗಳನ್ನು ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ನವೆಂಬರ್-2025ರ ಅಂತ್ಯದವರೆಗೆ 2,96,448 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು, ಇದಕ್ಕಾಗಿ 326.02 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 36,002 ಅಂತ್ಯೋದಯ (ಎಎವೈ), 38,337 ಎನ್.ಪಿ.ಹೆಚ್.ಹೆಚ್ (ಬಿಪಿಎಲ್) ಮತ್ತು 2,81,886 ಪಿ.ಹೆಚ್.ಹೆಚ್ (ಬಿಪಿಎಲ್) ಕಾರ್ಡ್ಗಳಿದ್ದು, ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ 2025ರ ಡಿಸೆಂಬರ್ ಮಾಹೆಯಿಂದ ಇಲ್ಲಿಯವರೆಗೂ ಹೆಚ್ಚುವರಿ 5 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತಿದೆ.

ಯುವನಿಧಿ ಯೋಜನೆಯಡಿ ಪ್ರಸ್ತುತ 11,945 ಫಲಾನುಭವಿಗಳು ನೋಂದಣಿಯಾಗಿದ್ದು, ಜುಲೈ ಅಂತ್ಯದವರೆಗೆ ಒಟ್ಟು ಮೊತ್ತ ರೂ. 19,25,97,000 ಕೋಟಿಗಳನ್ನು ಪಾವತಿಸಲಾಗಿರುತ್ತದೆ. ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಈಗಾಗಲೆ 34 ಅಭ್ಯರ್ಥಿಗಳಿಗೆ 30ದಿನದ ಡಾಟಾ ಎಂಟ್ರಿ ಆಪರೇಟರ್ ತರಬೇತಿ ನೀಡಲಾಗಿದೆ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್, ಎಸ್.ಬಿ.ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ ಮತ್ತು ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

Shakti Yojana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X