ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾದ ಪೋಲಿಯೋ ಲಸಿಕಾ ಅಭಿಯಾನ

ಯಲಬುರ್ಗಾ : ಯಲಬುರ್ಗಾ ತಾಲೂಕಿನಾದ್ಯಂತ ಪೋಲಿಯೋ ನಿರ್ಮೂಲನೆಗೆ ಸಂಬಂಧಿಸಿದಂತೆ ಭಾನುವಾರ ವಿಶೇಷ ಲಸಿಕಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ತಾಲೂಕಿನ ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರಗಳು ಹಾಗೂ ಜನಸಂಚಾರ ಹೆಚ್ಚು ಇರುವ ಕೇಂದ್ರಿತ ಸ್ಥಳಗಳಲ್ಲಿ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಕಾರ್ಯ ನಡೆಯಿತು.
ಅಭಿಯಾನದಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಪಾರಮೆಡಿಕಲ್ ಮತ್ತು ಜಿ.ಎನ್.ಎಂ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಮನೆಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಿದರು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ತಾಲೂಕು ವ್ಯಾಪ್ತಿಯ ಬಹುತೇಕ ಎಲ್ಲಾ ಗ್ರಾಮಗಳು ಹಾಗೂ ನಗರ ಪ್ರದೇಶಗಳಲ್ಲಿ ಸಮರ್ಪಕ ವ್ಯವಸ್ಥೆ ಮಾಡಲಾಗಿತ್ತು.
ಪೋಷಕರಲ್ಲಿ ಪೋಲಿಯೋ ಲಸಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕಾರ್ಯಕೆ ಒತ್ತು ನೀಡಲಾಗಿತ್ತು. ಈ ಸಮನ್ವಯದ ಪ್ರಯತ್ನದಿಂದ ಯಲಬುರ್ಗಾ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.







