ತುಂಗಭದ್ರಾ ಕ್ರಸ್ಟ್ ಗೇಟ್ ಲೋಕಾರ್ಪಣೆ| ಐಆರ್‌ಬಿ ಹೆಲಿಪ್ಯಾಡ್‌ಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂ. 25: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಹಿನ್ನೆಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 25ರಂದು ಐಆರ್‌ಬಿ ಹೆಲಿಪ್ಯಾಡ್‌ಗೆ ಆಗಮಿಸಿದರು.
ಶಾಸಕ ಶಿವರಾಜ್ ತಂಗಡಗಿ, ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ಜಿಲ್ಲೆಯ ವಿವಿಧ ಮುಖಂಡರು ಸೇರಿದಂತೆ ಗಣ್ಯರು ಸ್ವಾಗತ ಕೋರಿದರು.
ಈ ವೇಳೆ ಸಂಸದ ರಾಜಶೇಖರ ಹಿಟ್ನಾಳ್, ರಾಜ್ಯಸಭಾ ಸಂಸದ ಡಾ.ಸೈಯದ್ ನಾಸಿರ್ ಹುಸೇನ್, ಶಾಸಕರಾದ ಹೆಚ್.ಕೆ.ಪಾಟೀಲ್, ಕೆ.ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ, ಜಿ.ಎನ್.ಗಣೇಶ್, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಪಿ.ಎಸ್. ಹರ್ಷ, ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ ರ್ವಣೀತ್ ನೇಗಿ ಸೇರಿದಂತೆ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story




