Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮರ್ಪಕವಾಗಿ...

ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಸಿ: ಸಚಿವ ಟಿ ರಘುಮೂರ್ತಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Nov 2026 8:41 PM IST
share
ಎಸ್‌ಸಿಪಿ ಟಿಎಸ್‌ಪಿ ಅನುದಾನ ಸಮರ್ಪಕವಾಗಿ ಬಳಸಿ: ಸಚಿವ ಟಿ ರಘುಮೂರ್ತಿ ಸೂಚನೆ

ಕೊಪ್ಪಳ: ಎಸ್‌ಸಿಪಿ-ಟಿಎಸ್‌ಪಿ ಅನುದಾನವು ದುರ್ಬಲ ವರ್ಗದವರ ಅಭಿವೃದ್ಧಿಗಾಗಿ ಮೀಸಲಾಗಿದ್ದು, ಅದನ್ನು ಅರ್ಹ ಫಲಾನುಭವಿಗೆ ತಲುಪಿಸುವ ಮೂಲಕ ಅನುದಾನವನ್ನು ಸಮರ್ಪಕವಾಗಿ ಬಳಸಿ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ ರಘುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನವೆಂಬರ್ 13ರಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗಿದ್ದ ಕರ್ನಾಟಕ ಅನುಸುಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ 2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ/ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಅಕ್ಟೋಬರ್ -2026ರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಂದು ಇಲಾಖೆಯಲ್ಲಿಯೂ ಎಸ್‌ಸಿಪಿ-ಟಿಎಸ್‌ಪಿ ಕಾರ್ಯಕ್ರಮದಡಿ ನಿರ್ದಿಷ್ಟ ಅನುದಾನವನ್ನು ಸರ್ಕಾರ ಮೀಸಲಿಡುತ್ತದೆ. ಅದರಂತೆ ಇಲಾಖಾ ಅಧಿಕಾರಿಗಳು ಅರ್ಹ ಎಲ್ಲ ಫಲಾನುಭವಿಗಳಿಗೆ ಕಾರ್ಯಕ್ರಮದ ಸೌಲಭ್ಯ ಒದಗಿಸಬೇಕು. ಒಬ್ಬರಿಗೆ ಪದೇ ಪದೇ ಅವಕಾಶ ಕೊಡುವುದಕ್ಕಿಂತ ಬೇರೆ ಫಲಾನುಭವಿಗಳಿಗೂ ಅವಕಾಶ ನೀಡಬೇಕು. ಆದ್ದರಿಂದ ಪ್ರತಿ ಆರ್ಥಿಕ ವರ್ಷದಲ್ಲಿ ಕಾರ್ಯಕ್ರಮದ ಕ್ರಿಯಾ ಯೋಜನೆ ತಯಾರಿಸಿ, ಕಳೆದ ಸಾಲಿನ ಫಲಾನುಭವಿಗಳ ಪಟ್ಟಿಯೊಂದಿಗೆ ತಾಳೆ ನೋಡಿ, ಸೌಲಭ್ಯ ವಂಚಿತರಾದವರಿಗೆ ಅವಕಾಶ ನೀಡಬೇಕು. ಇಲಾಖಾ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಸಂಖ್ಯೆ, ನೀಡುವ ಸೌಲಭ್ಯದ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಎಲ್ಲ ಮಾಹಿತಿ ಇರಬೇಕು ಎಂದು ತಿಳಿಸಿದರು.

ಎಸ್‌ಸಿ-ಎಸ್‌ಟಿ ವಸತಿ ನಿಲಯಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆ ಇರುವೆಡೆ ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಮೂಲಸೌಕರ್ಯ ನೀಡುವುದು ಸವಾಲಾಗಿ ಪರಿಣಮಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಬಾಡಿಗೆ ಕಟ್ಟಡಗಳನ್ನು ಪಡೆದು ಸ್ವಚ್ಛತೆ, ಶುದ್ಧ ಆಹಾರ, ಕುಡಿಯುವ ನೀರು ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಬೇಕು. ಸರ್ಕಾರದಿಂದ ನೀಡಲಾಗುವ ಅನುದಾನವನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಿ ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

2023ರಿಂದ ಇದುವರೆಗೆ ಆಯಾ ಇಲಾಖೆಗಳಲ್ಲಿ ಕಾರ್ಯ ಅನುಷ್ಠಾನಗೊಂಡ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಗಳ ಪ್ರಗತಿ ಮಾಹಿತಿಯನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ಮುತುವರ್ಜಿ ವಹಿಸಿ ಚಿತ್ರ ಸಮೇತ ವೆಬ್‌ಸೈಟ್ ನಲ್ಲಿ ಅಪ್ ಲೋಡ್ ಮಾಡಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತದೆ ಎಂಬುದರ ಬಗ್ಗೆ ಜನತೆಗೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಡಿಎಫ್‌ಒ ನಿರ್ಮಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

MinisterT Raghumurthy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X