ಕನಕದಾಸರ ತತ್ವ ಸಂದೇಶಗಳನ್ನು ಜನರಿಗೆ ತಲುಪಿಸುವ ಅವಶ್ಯಕತೆ ಇದೆ : ಪ್ರೊ. ಬಿ.ಕೆ ರವಿ

ಕೊಪ್ಪಳ, 08: ಕನಕದಾಸರ ತತ್ವ ಸಂದೇಶಗಳನ್ನು ಜನ ಸಮುದಾಯಕ್ಕೆ ತಲುಪಿಸುವ ಅವಶ್ಯಕತೆ ಇದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ರವಿ ಅಭಿಪ್ರಾಯಪಟ್ಟರು.
ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಕನಕದಾಸರ ಜಯಂತಿ ಆಚರಣೆ ನಂತರ ಮಾತನಾಡಿದ ಪ್ರೊ. ಬಿ.ಕೆ ರವಿ, ಕನ್ನಡ ಸಾಹಿತ್ಯದಲ್ಲಿ ದಾಸ ಸಾಹಿತ್ಯ ಹಾಗೂ ವಚನ ಸಾಹಿತ್ಯ ಅಪೂರ್ವವಾದ ಸಂಪತ್ತಾಗಿದೆ. ಯುವ ಜನಾಂಗಕ್ಕೆ ಇವು ದಾರಿದೀಪವಾಗಲಿವೆ ಎಂದು ತಿಳಿಸಿದರು.
ಇದಕ್ಕೂ ಮೊದಲು ಶ್ರದ್ದಾ ಭಕ್ತಗಳಿಂದ ಕನಕದಾಸರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
ಈ ವೇಳೆ ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ.ತಿಮ್ಮಾರಡ್ಡಿ ಮೇಟಿ, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
Next Story





