ಯಲಬುರ್ಗಾ | ಸಾಮೂಹಿಕ ಅತ್ಯಾಚಾರ ಪ್ರಕರಣ: ವೈದ್ಯಾಧಿಕಾರಿಯ ವಿರುದ್ಧ ಕಾನೂನು ಕ್ರಮಕ್ಕೆ ಮಲ್ಲನಗೌಡ ಒತ್ತಾಯ

ಯಲಬುರ್ಗಾ: ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ನಾಶ ಮಾಡುವಲ್ಲಿ ಭಾಗಿಯಾಗಿರುವ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶಿವಕುಮಾರ ಬಿ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಮಲ್ಲನಗೌಡ ಎಸ್ ಮತ್ತು ಕೋನನಗೌಡ್ರು ಒತ್ತಾಯಿಸಿದ್ದಾರೆ.
ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಕೂಡ ಇಂತಹ ವ್ಯಕ್ತಿಯನ್ನು ವೈದ್ಯಕೀಯ ಕ್ಷೇತ್ರದಿಂದ ವಜಾ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಬೇಕೆಂದು ತಿಳಿಸಿದ್ದಾರೆ.
“ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಪ್ರಕರಣಗಳಲ್ಲಿ ಸಾಕ್ಷಿಯನ್ನು ನಾಶ ಮಾಡುವ ಮೂಲಕ ಸಮಾಜ, ವೈದ್ಯಕೀಯ ಕ್ಷೇತ್ರ ಮತ್ತು ಕ್ಷೇತ್ರದ ಜನರಿಗೆ ಕಪ್ಪು ಚುಕ್ಕೆ ಹಾಕುತ್ತಿದ್ದಾರೆ. ಕಾನೂನು ಪಾಲನೆಯಿಂದಲೇ ಇಂತವರನ್ನು ಎದುರಿಸಬೇಕು” ಎಂದು ಅವರು ಹೇಳಿದರು.
Next Story





