Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Yelburga | 371ಜೆ ಪರಿಣಾಮಕಾರಿ ಜಾರಿ...

Yelburga | 371ಜೆ ಪರಿಣಾಮಕಾರಿ ಜಾರಿ ಮೂಲಕ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ಹನುಮನಗೌಡ

79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿಶೇಷ ಉಪನ್ಯಾಸ; ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಮೂಲಸೌಕರ್ಯ ಬಲವರ್ಧನೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Sept 2026 6:46 PM IST
share
Yelburga | 371ಜೆ ಪರಿಣಾಮಕಾರಿ ಜಾರಿ ಮೂಲಕ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ: ಹನುಮನಗೌಡ

ಯಲಬುರ್ಗಾ: ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಂವಿಧಾನದ 371ಜೆ ಅಡಿಯಲ್ಲಿ ದೊರೆತಿರುವ ವಿಶೇಷ ಸ್ಥಾನಮಾನದ ಸಮರ್ಪಕ ಜಾರಿ ಸೇರಿದಂತೆ ಶಿಕ್ಷಣ, ಉದ್ಯೋಗ, ಆರೋಗ್ಯ, ಪೌಷ್ಟಿಕತೆ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ಹನುಮನಗೌಡ ಆಗ್ರಹಿಸಿದರು.

ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ 79ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶವು ಎಂಟು ದಶಕಗಳ ಹಿಂದೆ ನಿಜಾಮರ ಆಳ್ವಿಕೆಗೆ ಒಳಪಟ್ಟಿತ್ತು. ಆ ಸಂದರ್ಭದಲ್ಲಿ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದ ಈ ಭಾಗ ನಿಜಾಮರ ವಿರುದ್ಧ ನಡೆದ ವಿಮೋಚನಾ ಹೋರಾಟದ ಫಲವಾಗಿ ಭಾರತದ ಒಕ್ಕೂಟದಲ್ಲಿ ವಿಲೀನಗೊಂಡಿತು ಎಂದು ಅವರು ವಿವರಿಸಿದರು.

ವಿಮೋಚನಾ ಹೋರಾಟದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್, ಡಾ. ಬಿ.ಆರ್. ಅಂಬೇಡ್ಕರ್, ಹೈದರಾಬಾದ್‌ನ ಏಜೆಂಟ್ ಜನರಲ್ ಆಗಿದ್ದ ಕೆ.ಎಂ. ಮುನ್ಷಿ ಅವರೊಂದಿಗೆ ಸ್ವಾಮಿ ರಮಾನಂದ ತೀರ್ಥ, ಯಲಬುರ್ಗಾದ ಪ್ರಭುರಾಜ ಪಾಟೀಲ, ಶಂಕರಣ್ಣ ಯರಾಸಿ, ಅಳವಂಡಿಯ ಶಿವಮೂರ್ತಿ ಸ್ವಾಮಿ, ಕುಷ್ಟಗಿಯ ಪುಂಡಲಿಕಪ್ಪ, ಈಶ್ವರಪ್ಪ, ಜ್ಞಾನಮೋಟಿ ಸೇರಿದಂತೆ ಹಲವು ಸ್ಥಳೀಯ ಹೋರಾಟಗಾರರು ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ತ್ಯಾಗ ಮತ್ತು ಹೋರಾಟವನ್ನು ಸ್ಮರಿಸುವುದು ಅಗತ್ಯ ಎಂದರು.

ವಿಮೋಚನೆಯ ಬಳಿಕವೂ ಶೈಕ್ಷಣಿಕ ಹಾಗೂ ಔದ್ಯೋಗಿಕ ಹಿಂದುಳಿದಿರುವಿಕೆ ಮುಂದುವರಿದ ಹಿನ್ನೆಲೆಯಲ್ಲಿ ನಡೆದ ನಿರಂತರ ಹೋರಾಟದ ಫಲವಾಗಿ 371ಜೆ ವಿಶೇಷ ಸ್ಥಾನಮಾನ ದೊರೆತಿದೆ. ಇದರ ಆಶಯ ಈಡೇರಬೇಕಾದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನವಾಗಬೇಕು. ಅರ್ಹರಿಗೆ ಅದರ ಸಂಪೂರ್ಣ ಪ್ರಯೋಜನ ದೊರೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಕೇವಲ ಅನುದಾನಕ್ಕೆ ಸೀಮಿತಗೊಳಿಸದೆ, ಇಲ್ಲಿನ ನಿರ್ದಿಷ್ಟ ಸಮಸ್ಯೆಗಳನ್ನು ಗುರುತಿಸಿ ದೀರ್ಘಕಾಲೀನ ಯೋಜನೆ ರೂಪಿಸುವ ಅಗತ್ಯವಿದೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಹಾಗೂ ಗ್ರಾಮೀಣ ಜನರ ಆರೋಗ್ಯ ಮತ್ತು ಪೌಷ್ಟಿಕತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಪ್ರತಿ ವರ್ಷ ಈ ಭಾಗದ ಹೆಣ್ಣುಮಕ್ಕಳು ಹಾಗೂ ಗರ್ಭಿಣಿಯರ ಪೌಷ್ಟಿಕಾಂಶದ ಮಟ್ಟವನ್ನು ವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡಿ ಗಣತಿ ನಡೆಸಬೇಕು. ವರದಿಯ ಆಧಾರದಲ್ಲಿ ಪೌಷ್ಟಿಕಾಂಶ ಕೊರತೆ ಇರುವ ಪ್ರದೇಶಗಳಿಗೆ ವಿಶೇಷ ಕಾರ್ಯಕ್ರಮ ರೂಪಿಸಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ 24×7 ಗ್ರಂಥಾಲಯಗಳನ್ನು ಸ್ಥಾಪಿಸಬೇಕು. ಯುವಕರ ಕ್ರೀಡಾ ಪ್ರತಿಭೆ ಬೆಳೆಸಲು ಸುಸಜ್ಜಿತ ಕ್ರೀಡಾಂಗಣಗಳನ್ನು ನಿರ್ಮಿಸಬೇಕು. ಗ್ರಾಮೀಣ ಆರೋಗ್ಯ ಸೇವೆ ಬಲಪಡಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು (CHC) ಅತ್ಯಾಧುನಿಕ ಸೌಲಭ್ಯ ಮತ್ತು ಅಗತ್ಯ ಸಿಬ್ಬಂದಿಯೊಂದಿಗೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಗಮನ ಸೆಳೆಯಲು ವಿಶೇಷ ಅಧಿವೇಶನಗಳನ್ನು ನಡೆಸಬೇಕು. ಭಾರತ ಸರ್ಕಾರ ವರ್ಷಕ್ಕೊಮ್ಮೆ ಹಾಗೂ ರಾಜ್ಯ ಸರ್ಕಾರ ವರ್ಷಕ್ಕೆ ಎರಡು ಬಾರಿ, ಕನಿಷ್ಠ ಐದು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಬೇಕು. ಈ ಮೂಲಕ ಶಿಕ್ಷಣ, ಉದ್ಯೋಗ, ಆರೋಗ್ಯ, ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಸಮಗ್ರ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ಪ್ರತಿವರ್ಷ ಈ ಭಾಗಕ್ಕೆ ವಿಶೇಷ ಅನುದಾನ ನೀಡಬೇಕು. ಕೇಂದ್ರ ಸರ್ಕಾರದ ವಿವಿಧ ಅರ್ಹತಾ ಹಾಗೂ ಔದ್ಯೋಗಿಕ ಪರೀಕ್ಷೆಗಳಲ್ಲಿ 371ಜೆ ಸ್ಥಾನಮಾನದ ಸೌಲಭ್ಯವನ್ನು ಸೂಕ್ತವಾಗಿ ಪರಿಗಣಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಹಕ್ಕೊತ್ತಾಯ ಮಂಡಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಿತಿ ಅಧ್ಯಕ್ಷ ಪ್ರಕಾಶ ಎಂ. ನಾಶಿ ಧ್ವಜಾರೋಹಣ ನೆರವೇರಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ನೀಲಗಂಗಾ ಬಬಲಾದಿ, ಆರಕ್ಷಕ ವೃತ್ತ ನಿರೀಕ್ಷಕ ಮೌನೇಶ ಬನಿಗೋಳ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಿ. ನಾಗೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ ಬನಿಗೋಳ ವೇದಿಕೆಯಲ್ಲಿದ್ದರು.

ಚಿಕ್ಕಬನಿಗೋಳ ತಾಂಡಾದ ಸಹಶಿಕ್ಷಕ ಮಹೇಬೂಬ ಬಾದಷಾಹ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಮೋಚನಾ ಹೋರಾಟದ ಇತಿಹಾಸವನ್ನು ಸ್ಮರಿಸುವುದರ ಜತೆಗೆ 371ಜೆ ಪರಿಣಾಮಕಾರಿ ಜಾರಿ ಹಾಗೂ ಶಿಕ್ಷಣ, ಉದ್ಯೋಗ, ಆರೋಗ್ಯ ಮತ್ತು ಮೂಲಸೌಕರ್ಯ ಕ್ಷೇತ್ರಗಳ ಬಲವರ್ಧನೆಗೆ ಆದ್ಯತೆ ನೀಡಬೇಕೆಂಬ ಹಕ್ಕೊತ್ತಾಯದೊಂದಿಗೆ ಕಾರ್ಯಕ್ರಮ ಗಮನ ಸೆಳೆಯಿತು.

Tags

Article 371(J)Kalyana KarnatakaYelburga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X