Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Yelburga | ಶಾಲಾ ಮಕ್ಕಳಿಗೆ ಕಳಪೆ...

Yelburga | ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ ಆರೋಪ: ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Sept 2026 3:34 PM IST
share
Yelburga | ಶಾಲಾ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂ ವಿತರಣೆ ಆರೋಪ: ಕ್ರಮಕ್ಕೆ ಆಗ್ರಹ

ಯಲಬುರ್ಗಾ: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾದ ಶೂಗಳ ಕಳಪೆ ಗುಣಮಟ್ಟ ಹಾಗೂ ಗಾತ್ರದ ವ್ಯತ್ಯಾಸದ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ ಮತ್ತು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಆಕ್ಷೇಪ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಸರ್ಕಾರದಿಂದ ವಿತರಿಸಲಾಗುವ ಶೈಕ್ಷಣಿಕ ಸೌಲಭ್ಯಗಳು ಗುಣಮಟ್ಟದಿಂದ ಕೂಡಿರಬೇಕು. ಆದರೆ, ಮಕ್ಕಳಿಗೆ ವಿತರಿಸಲಾದ ಶೂಗಳು ನಿರೀಕ್ಷಿತ ಗುಣಮಟ್ಟ ಹೊಂದಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಕೆಲವು ಶೂಗಳ ಗಾತ್ರ ಮಕ್ಕಳ ಕಾಲುಗಳಿಗೆ ಸರಿಹೊಂದದಿರುವುದರಿಂದ ಅವುಗಳನ್ನು ಬಳಸಲು ತೊಂದರೆಯಾಗುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ.

ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ ಸರ್ಕಾರ ಒದಗಿಸುವ ಸೌಲಭ್ಯಗಳು ಸಮರ್ಪಕವಾಗಿ ತಲುಪುವುದು ಅಗತ್ಯ. ಶೂಗಳ ವಿತರಣೆಯಲ್ಲಿ ಗುಣಮಟ್ಟದ ಮಾನದಂಡಗಳನ್ನು ಪಾಲಿಸದಿದ್ದರೆ, ಮಕ್ಕಳಿಗೆ ಅನುಕೂಲವಾಗಬೇಕಾದ ಯೋಜನೆಯ ಉದ್ದೇಶವೇ ವಿಫಲವಾಗಲಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸದೆ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.

ಈ ಹಿನ್ನೆಲೆಯಲ್ಲಿ ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗಳಿಗೆ ವಿತರಿಸಲಾದ ಶೂಗಳ ಗುಣಮಟ್ಟ, ಗಾತ್ರ ಹಾಗೂ ವಿತರಣಾ ಪ್ರಕ್ರಿಯೆಯ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ. ಕಳಪೆ ಗುಣಮಟ್ಟದ ಶೂಗಳನ್ನು ಪೂರೈಸಿರುವುದು ದೃಢಪಟ್ಟಲ್ಲಿ ಸಂಬಂಧಪಟ್ಟ ಪೂರೈಕೆದಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಜೊತೆಗೆ ಮಕ್ಕಳಿಗೆ ಸೂಕ್ತ ಗಾತ್ರದ ಹಾಗೂ ಗುಣಮಟ್ಟದ ಶೂಗಳನ್ನು ಮರು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕ ಮತ್ತು ಎಸ್‌ಡಿಎಂಸಿ ಸಮಿತಿ ಒತ್ತಾಯಿಸಿವೆ.

ಸರ್ಕಾರದ ಮಕ್ಕಳ ಕಲ್ಯಾಣ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು. ಮಕ್ಕಳಿಗೆ ವಿತರಿಸುವ ಶೈಕ್ಷಣಿಕ ಪರಿಕರಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಈ ಕುರಿತು ಶಿಕ್ಷಣ ಇಲಾಖೆ ತಕ್ಷಣ ಸ್ಪಂದಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು ಎಂಬುದು ಸಂಘಟನೆಗಳ ಆಗ್ರಹವಾಗಿದೆ.

ಈ ಸಂದರ್ಭದಲ್ಲಿ ಭಿಮೇಶ ಬಂಡಿವಡ್ಡರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಳಕನಗೌಡ ನಾಗನಗೌಡ್ರು ,ಪ್ರಕಾಶ ಮೇಟಿ ,ಉಮೇಶ ಹರಿಜನ್, ಬಸವರಾಜ್ ಹರಿಜನ್ ,ವಂದ್ರು ರಾಜೂರು,ನಾಗರಾಜ್ ಎಚ್, ಶಂಕರಗೌಡ್ರು, ಬಸವರಾಜ್ ,ಪವನಕುಮಾರ ಹಡಗಲಿ,ಮಹೇಶ ಜಿರಗಿ,ಶರಣಯ್ಯ ಹಿರಮಠ , ಅನಿಲ ಹಡಪದ್ ಉಪಸ್ಥಿತರಿದ್ದರು.

Tags

childrenschoolYelburga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X