Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Yelburga | ಆರೋಗ್ಯವೇ ಮಾನವನ ನಿಜವಾದ...

Yelburga | ಆರೋಗ್ಯವೇ ಮಾನವನ ನಿಜವಾದ ಸಂಪತ್ತು : ಮಮತಾ ರಾಯರಡ್ಡಿ

5 ಕಿ.ಮೀ. ಮ್ಯಾರಥಾನ್ ; ಸಾವಿರಾರು ಮಂದಿ ಭಾಗಿ

ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ22 Nov 2026 4:43 PM IST
share
Yelburga | ಆರೋಗ್ಯವೇ ಮಾನವನ ನಿಜವಾದ ಸಂಪತ್ತು : ಮಮತಾ ರಾಯರಡ್ಡಿ

ಯಲಬುರ್ಗಾ: ಆರೋಗ್ಯವೇ ಮಾನವನ ನಿಜವಾದ ಸಂಪತ್ತು. ಅದರಲ್ಲೂ ಯುವಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಆರಾಮ್ ಫೌಂಡೇಶನ್ ಸಂಸ್ಥಾಪಕಿ ಮಮತಾ ರಾಯರಡ್ಡಿ ಹೇಳಿದರು.

ಯುವ ಸಮುದಾಯದಲ್ಲಿ ಆರೋಗ್ಯದ ಮಹತ್ವ, ದೈಹಿಕ ಸಾಮರ್ಥ್ಯ ಹಾಗೂ ಕ್ರೀಡಾಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಆರಾಮ್ ಫೌಂಡೇಶನ್ ಮತ್ತು ರಾಯಲ್ ಅಸೋಸಿಯೇಷನ್ ಕ್ಲಬ್ ಸಹಯೋಗದಲ್ಲಿ ಭಾನುವಾರ ಯಲಬುರ್ಗಾ ಪಟ್ಟಣದಲ್ಲಿ ಮೊದಲ ಬಾರಿಗೆ ಆಯೋಜಿಸಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕ-ಯುವತಿಯರು ಸೇರಿದಂತೆ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು.

ಆರಾಮ್ ಫೌಂಡೇಶನ್ ಸಂಸ್ಥಾಪಕಿ ಮಮತಾ ರಾಯರಡ್ಡಿ ಅವರ ನೇತೃತ್ವದಲ್ಲಿ ನಡೆದ ಈ ಕ್ರೀಡಾಕೂಟ ಪಟ್ಟಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿತು. ಅಕ್ಷಯ್ ಪಬ್ಲಿಕ್ ಶಾಲೆಯ ಆವರಣದಿಂದ ಆರಂಭಗೊಂಡ ಮ್ಯಾರಥಾನ್ ಕನಕದಾಸರ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಮೊಗ್ಗಿಬಸವೇಶ್ವರ ದೇವಸ್ಥಾನ, ಡಾ. ಬಾಬು ಜಗಜೀವನರಾಂ ವೃತ್ತ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಸಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕು ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು.

ಸುಮಾರು ಐದು ಕಿಲೋಮೀಟರ್ ಉದ್ದದ ಓಟದಲ್ಲಿ ಯುವಕರು, ಯುವತಿಯರು ಸೇರಿದಂತೆ ವಿವಿಧ ವಯೋಮಾನದವರು ಉತ್ಸಾಹದಿಂದ ಪಾಲ್ಗೊಂಡು ಆರೋಗ್ಯದ ಸಂದೇಶ ಸಾರಿದರು. ವಿಶೇಷವೆಂದರೆ, ಮಮತಾ ರಾಯರಡ್ಡಿ ಅವರೂ ಸ್ವತಃ ಮ್ಯಾರಥಾನ್‌ನಲ್ಲಿ ಭಾಗವಹಿಸುವ ಮೂಲಕ ಯುವಜನರಿಗೆ ಮಾದರಿಯಾದರು. ಕೊಪ್ಪಳ ಜಿಲ್ಲೆಯ ವಿವಿಧ ಭಾಗಗಳಲ್ಲದೆ ಗದಗ, ವಿಜಯನಗರ ಜಿಲ್ಲೆಯ ಹೊಸಪೇಟೆ ಹಾಗೂ ಇಲಕಲ್ಲ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಕ್ರೀಡಾಭಿಮಾನಿಗಳು ಆಗಮಿಸಿ ಓಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮ್ಯಾರಥಾನ್‌ನಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಟಿ-ಶರ್ಟ್, ಪ್ರಶಸ್ತಿ ಪ್ರಮಾಣಪತ್ರ ಹಾಗೂ ಪದಕಗಳನ್ನು ವಿತರಿಸುವ ಮೂಲಕ ಆಯೋಜಕರು ಪ್ರೋತ್ಸಾಹಿಸಿದರು. ಯುವಜನರಲ್ಲಿ ಕ್ರೀಡಾ ಮನೋಭಾವ ಬೆಳೆಸುವುದರ ಜೊತೆಗೆ ಆರೋಗ್ಯದ ಕುರಿತು ನಿರಂತರ ಜಾಗೃತಿ ಮೂಡಿಸುವ ವೇದಿಕೆಯಾಗಿ ಈ ಕಾರ್ಯಕ್ರಮ ಗಮನ ಸೆಳೆಯಿತು.

ಮ್ಯಾರಥಾನ್ ಸುಗಮವಾಗಿ ನಡೆಯಲು ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕಲ್ಪಿಸಿತ್ತು. ಸಿಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್‌ಐ ಕಾಳಿಂಗ ಹಾಗೂ ಮೌನೇಶ್ ರಾಥೋಡ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಭದ್ರತಾ ವ್ಯವಸ್ಥೆ ನಿರ್ವಹಿಸಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಅವರ ಮಾರ್ಗದರ್ಶನದಲ್ಲಿ ಓಟದ ಹಾದಿಯಲ್ಲಿ ನೀರು ಸಿಂಪಡಿಸಿ ಧೂಳಿನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಇದರಿಂದ ಓಟಗಾರರಿಗೆ ಅನುಕೂಲವಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಮತಾ ರಾಯರಡ್ಡಿ, ಯುವಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇಂದಿನ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಚಟುವಟಿಕೆಗಳಿಗೆ ಆದ್ಯತೆ ನೀಡುವುದು ಅತ್ಯಗತ್ಯ. ಪ್ರತಿನಿತ್ಯ ಓಟ, ನಡಿಗೆ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೇಹದ ಕ್ಷಮತೆ ಹೆಚ್ಚುವುದರ ಜೊತೆಗೆ ಆರೋಗ್ಯವೂ ಸುಧಾರಿಸುತ್ತದೆ ಎಂದರು.

ಯುವಜನರೇ ದೇಶದ ಬಹುದೊಡ್ಡ ಸಂಪತ್ತು. ಅವರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಯಲಬುರ್ಗಾದಲ್ಲಿ ಮೊದಲ ಬಾರಿಗೆ ಮ್ಯಾರಥಾನ್ ಆಯೋಜಿಸಲಾಗಿದೆ. ಸಾವಿರಾರು ಜನರು ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸ ತಂದಿದೆ. ಆರಾಮ್ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಇಂತಹ ಜನಪರ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಶಾ ಬಸವರಾಜ ರಾಯರಡ್ಡಿ, ಸುಧೀರ್ ಕೊರ್ಲಳ್ಳಿ, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರಡ್ಡಿ, ಹಂಪಯ್ಯಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ಜಕ್ಕಲಿ, ಸಂಗಮೇಶ ಗುತ್ತಿ, ಸಾವಿತ್ರಿ ಗೊಲ್ಲರ್, ಡಾ. ನಂದಿತಾ ದಾನರಡ್ಡಿ, ಫರೀದಾಂಬೇಗಂ, ಸವಿತಾ ಓಜನಹಳ್ಳಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಮುಖಂಡರು, ಸಂಘಟಕರು ಹಾಗೂ ಅಪಾರ ಸಂಖ್ಯೆಯ ಯುವಕ-ಯುವತಿಯರು ಉಪಸ್ಥಿತರಿದ್ದರು.

Tags

YelburgaHealthHuman
share
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ

Next Story
X