Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Yelburga | ಅಧಿಕ ದರ, ಸ್ವಚ್ಛತೆ...

Yelburga | ಅಧಿಕ ದರ, ಸ್ವಚ್ಛತೆ ನಿರ್ಲಕ್ಷ್ಯ ಆರೋಪ: ಅಂಗಡಿ ಮಾಲಕರಿಗೆ ಪಿಡಿಓ ನೋಟಿಸ್ ಜಾರಿ!

ವಾರ್ತಾಭಾರತಿವಾರ್ತಾಭಾರತಿ28 July 2026 6:59 PM IST
share
Yelburga | ಅಧಿಕ ದರ, ಸ್ವಚ್ಛತೆ ನಿರ್ಲಕ್ಷ್ಯ ಆರೋಪ: ಅಂಗಡಿ ಮಾಲಕರಿಗೆ ಪಿಡಿಓ ನೋಟಿಸ್ ಜಾರಿ!

ಯಲಬುರ್ಗಾ : ಬೇವೂರು ಗ್ರಾಮದಲ್ಲಿನ ಕೆಲವು ಚಿಕನ್ ಸೆಂಟರ್, ಎಗ್ ರೈಸ್ ಹಾಗೂ ಇತರೆ ಆಹಾರ ಮಾರಾಟ ಮಳಿಗೆಗಳಲ್ಲಿ ಅಧಿಕ ದರ ವಸೂಲಿ, ಬೆಲೆಪಟ್ಟಿ ಪ್ರದರ್ಶಿಸದಿರುವುದು ಹಾಗೂ ಸ್ವಚ್ಛತೆ ನಿರ್ಲಕ್ಷ್ಯದ ಕುರಿತು ಗ್ರಾಮಸ್ಥರು ನೀಡಿದ ದೂರಿಗೆ ಸ್ಪಂದಿಸಿರುವ ಗ್ರಾಮ ಪಂಚಾಯಿತಿ, ಸಂಬಂಧಪಟ್ಟ ಅಂಗಡಿ ಮಾಲೀಕರಿಗೆ ಸೂಚನಾ ಪತ್ರ ಜಾರಿಗೊಳಿಸಿದೆ.

ಪಿಡಿಓ ಅಬ್ದುಲ್ ಗಫಾರ್ ಅವರ ಸೂಚನೆಯಂತೆ, ಕೊಪ್ಪಳ–ಯಲಬುರ್ಗಾ ರಸ್ತೆಯಲ್ಲಿರುವ ಡಾಬಾಗಳು, ಚಿಕನ್ ಸೆಂಟರ್‌ಗಳು, ಎಗ್ ರೈಸ್ ಅಂಗಡಿಗಳು, ಟೀ ಸ್ಟಾಲ್‌ಗಳು, ಹೋಟೆಲ್‌ಗಳು ಹಾಗೂ ಇತರೆ ಆಹಾರ ಮಾರಾಟ ಮಳಿಗೆಗಳ ಮಾಲೀಕರಿಗೆ ಬೆಲೆಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸೂಚಿಸಲಾಗಿದೆ.

ಗ್ರಾಮಸ್ಥರ ಪ್ರಕಾರ, ಸಮೀಪದ ಯಲಬುರ್ಗಾ, ಕೊಪ್ಪಳ ಹಾಗೂ ಕುಷ್ಟಗಿ ಪಟ್ಟಣಗಳಲ್ಲಿ ಒಂದು ಕೆಜಿ ಚಿಕನ್ 250 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದ್ದರೆ, ಬೇವೂರಿನ ಕೆಲವು ಅಂಗಡಿಗಳಲ್ಲಿ 300 ರೂ. ರವರೆಗೆ ದರ ವಸೂಲಿ ಮಾಡಲಾಗುತ್ತಿದೆ. ಎಗ್ ರೈಸ್ ಸೇರಿದಂತೆ ಇತರೆ ಆಹಾರ ಪದಾರ್ಥಗಳಿಗೂ ಅಧಿಕ ದರ ವಿಧಿಸಲಾಗುತ್ತಿದ್ದು, ಬೆಲೆಪಟ್ಟಿ ಪ್ರದರ್ಶಿಸದ ಕಾರಣ ಗ್ರಾಹಕರು ಹೆಚ್ಚುವರಿ ಹಣ ಪಾವತಿಸುವಂತಾಗಿದೆ ಎಂದು ಆರೋಪಿಸಲಾಗಿದೆ.

ಗ್ರಾಮದ ಯುವ ಮುಖಂಡ ಕರಿಯಪ್ಪ ಮಣ್ಣಿನವರ್ ಮಾತನಾಡಿ, ಅಂಗಡಿ ಮಾಲೀಕರು ಮನಬಂದಂತೆ ದರ ನಿಗದಿಪಡಿಸಿ ಗ್ರಾಹಕರನ್ನು ಶೋಷಿಸುತ್ತಿದ್ದಾರೆ. ಬೆಲೆಪಟ್ಟಿ ಪ್ರದರ್ಶಿಸದಿರುವುದು ಗ್ರಾಹಕರ ಹಕ್ಕಿನ ಉಲ್ಲಂಘನೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ, ಆಹಾರ ಮಾರಾಟ ಮಳಿಗೆಗಳ ಸುತ್ತ ತ್ಯಾಜ್ಯ, ಪ್ಲಾಸ್ಟಿಕ್, ಖಾಲಿ ಬಾಟಲಿಗಳು ಹಾಗೂ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಪಂಚಾಯಿತಿ ತಿಳಿಸಿದೆ. ಈ ಹಿಂದೆ ಹಲವು ಬಾರಿ ಮೌಖಿಕ ಹಾಗೂ ಲಿಖಿತ ಸೂಚನೆ ನೀಡಿದ್ದರೂ ಸುಧಾರಣೆ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗಡಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶವನ್ನು ಪ್ರತಿದಿನ ಸ್ವಚ್ಛವಾಗಿಟ್ಟುಕೊಳ್ಳಬೇಕು. ತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕು. ಸೂಚನೆಗಳನ್ನು ಪಾಲಿಸದಿದ್ದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ–1993ರ ಅನ್ವಯ ಕಾನೂನು ಕ್ರಮ ಜರುಗಿಸುವುದರ ಜೊತೆಗೆ ಅಗತ್ಯವಿದ್ದಲ್ಲಿ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿಸುವ ಕ್ರಮವೂ ಕೈಗೊಳ್ಳಲಾಗುವುದು ಎಂದು ಪಿಡಿಓ ಅಬ್ದುಲ್ ಗಫಾರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕರಿಯಪ್ಪ ಮಣ್ಣಿನವರ, ಶೇಖಪ್ಪ ಮರಗಪ್ಪನವರ, ಮುದಕಪ್ಪ ಪೂಜಾರ, ಈರಪ್ಪ ಹಿರೇಮನಿ, ಮುದ್ದಪ್ಪ ಮಣ್ಣಿನವರ, ಉಮೇಶ್ ಓಜೀನಳ್ಳಿ, ಲಕ್ಷ್ಮಣ್ಣ ಹಿರೇಮನಿ ಹಾಗೂ ಅರಳಯ್ಯ ಜಾಲಿಗಿಡದ ಉಪಸ್ಥಿತರಿದ್ದರು.

Tags

PDOYelburga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X