Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಕೊಪ್ಪಳ...

ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಕೊಪ್ಪಳ ಜನತೆಯ ಬೇಡಿಕೆಗೆ ಕುಮಾರಸ್ವಾಮಿ ಸ್ಪಂದನೆ: ಜೆಡಿಎಸ್

ವಾರ್ತಾಭಾರತಿವಾರ್ತಾಭಾರತಿ14 Feb 2025 10:15 AM IST
share
ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಕೊಪ್ಪಳ ಜನತೆಯ ಬೇಡಿಕೆಗೆ ಕುಮಾರಸ್ವಾಮಿ ಸ್ಪಂದನೆ: ಜೆಡಿಎಸ್

ಕೊಪ್ಪಳ: ಬಲ್ದೋಟ ಸಮೂಹದ ಉದ್ದೇಶಿತ 54,000 ಕೋಟಿ ರೂಪಾಯಿ ವೆಚ್ಚದ ಉಕ್ಕು ಕೈಗಾರಿಕಾ ಘಟಕದ ಸ್ಥಾಪನೆಯ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಕೊಪ್ಪಳ ಜನತೆಯ ಬೇಡಿಕೆಗೆ ಸ್ಪಂದಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ̤

ಬಲ್ದೋಟ ಸಮೂಹ ಹಾಗೂ ರಾಜ್ಯ ಸರಕಾರ ಉಕ್ಕು ಘಟಕದ ಸ್ಥಾಪನೆಗೆ ಒಪ್ಪಂದ ಮಾಡಿಕೊಂಡ ನಂತರ ಕೊಪ್ಪಳದಲ್ಲಿ ವ್ಯಕ್ತವಾದ ವಿರೋಧವನ್ನು ಗಮನದಲ್ಲಿಟ್ಟುಕೊಂಡು ಶುಕ್ರವಾರ ಬೆಳಿಗ್ಗೆ ಜೆ ಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಅವರು ಕೇಂದ್ರ ಸಚಿವರನ್ನು ಬೆಂಗಳೂರಿನ ಜೆ ಪಿ ನಗರದ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಘಟಕದ ಸ್ಥಾಪನೆಯಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಮಾಹಿತಿ ನೀಡಿ ಮಧ್ಯಪ್ರವೇಶಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು.

ಕೈಗಾರಿಕಾ ಘಟಕಗಳ ಮಾಲಿನ್ಯದಿಂದ ಈಗಾಗಲೇ ನಲುಗಿ ಹೋಗಿರುವ ಕೊಪ್ಪಳದ ಜನತೆಯನ್ನು ರಾಜ್ಯ ಸರಕಾರ ಬೆಂಕಿಯಿಂದ ಬಾಣಲೆಗೆ ನೂಕಿದೆ. ಸಮುದಾಯದ ಆರೋಗ್ಯ ಹಾಗೂ ಕೃಷಿ ಕ್ಷೇತ್ರಗಳ ಮೇಲೆ ಮಾರಕ ಪೆಟ್ಟು ನೀಡುವ ಈ ಯೋಜನೆ ಯಾವುದೇ ಕಾರಣಕ್ಕೂ ಅನುಷ್ಠಾನವಾಗಬಾರದೆಂದು ಹೇಳಿದರು.

ಕ್ರಿಯಾಶೀಲವಾಗಿರುವ ಕೈಗಾರಿಕಾ ಘಟಕಗಳು ನಿಯಮಗಳನ್ನು ಉಲ್ಲಂಘಿಸಿ ಕೊಪ್ಪಳವನ್ನು ನರಕ ಸದೃಶವನ್ನಾಗಿಸಿವೆ. ಅವುಗಳ ವಿರುದ್ಧ ಕೇಂದ್ರ ಸರಕಾರದ ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವರು ತಮಗೆ ಕೊಪ್ಪಳದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಇದೆ. ಅಭಿವೃದ್ಧಿಗೆ ಕೈಗಾರಿಕಾ ಘಟಕಗಳ ಸ್ಥಾಪನೆ ಅಗತ್ಯ. ಆದರೆ ಸಮುದಾಯದ ಆರೋಗ್ಯ, ಪರಿಸರ ಹಾಗೂ ಕೃಷಿ ಕ್ಷೇತ್ರಗಳಿಗೆ ಮಾರಕವಾಗುವ ಯಾವುದೇ ಯೋಜನೆಗಳನ್ನು ಒಪ್ಪಲಾಗದು. ಕೊಪ್ಪಳ ಜನತೆಯ ಬೇಡಿಕೆಗೆ ಸೂಕ್ತವಾಗಿ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಜೆ ಡಿ (ಎಸ್) ಪಕ್ಷದ ಜಿಲ್ಲಾ ಘಟಕದ ಪತ್ರಿಕಾ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X