ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ

ನರೇಂದ್ರ ಮೋದಿ , ವ್ಲಾಡಿಮಿರ್ ಪುಟಿನ್ | PC : ANI
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಅನ್ನು ಪ್ರದಾನ ಮಾಡಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು ಎಕ್ಸ್ ನಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ಗೌರವವಿದೆ. ನಾನು ಈ ಪ್ರಶಸ್ತಿಯನ್ನು ಭಾರತದ ಜನತೆಗೆ ಅರ್ಪಿಸುತ್ತೇನೆ ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
#WATCH | Russian President Vladimir Putin confers Russia's highest civilian honour, Order of St Andrew the Apostle on Prime Minister Narendra Modi. pic.twitter.com/aBBJ2QAINF
— ANI (@ANI) July 9, 2024
Honoured to receive the Order of St. Andrew the Apostle. I dedicate it to the people of India. https://t.co/62BXBsg1Ii
— Narendra Modi (@narendramodi) July 9, 2024