Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. Lead news
  3. ಅಮೆಝಾನ್ ಆರ್ಡರ್ ಪಡೆಯಲು ವಿಮಾನದಲ್ಲಿ...

ಅಮೆಝಾನ್ ಆರ್ಡರ್ ಪಡೆಯಲು ವಿಮಾನದಲ್ಲಿ ಬರುತ್ತಿದ್ದ ಆನ್‌ ಲೈನ್‌ ವಂಚಕರು!

ದೇಶದಾದ್ಯಂತ ಸಿಕ್ಕ ಸಿಕ್ಕ ವಿಳಾಸ ನೀಡಿ ಕೋಟ್ಯಂತರ ರೂ. ವಂಚಿಸಿದವರು ಮಂಗಳೂರು ಪೊಲೀಸ್ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ2 Nov 2024 6:57 PM IST
share
ಅಮೆಝಾನ್ ಆರ್ಡರ್ ಪಡೆಯಲು ವಿಮಾನದಲ್ಲಿ ಬರುತ್ತಿದ್ದ ಆನ್‌ ಲೈನ್‌ ವಂಚಕರು!

ಮಂಗಳೂರು : ನಕಲಿ ವಿಳಾಸ ನೀಡುವ ಮೂಲಕ ಭಾರೀ ಮೌಲ್ಯದ ಸೊತ್ತುಗಳನ್ನು ಆರ್ಡರ್ ಮಾಡಿ ಅಮೆಝಾನ್ ಕಂಪೆನಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಉರ್ವ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಾಜಸ್ಥಾನದ ರಾಜ್‌ಕುಮಾರ್ ಮೀನಾ (23) ಮತ್ತು ಸುಭಾಷ್ ಗುರ್ಜರ್ (27) ಎಂದು ಗುರುತಿಸಲಾಗಿದೆ.

ಆರೋಪಿಗಳು ಅಮೆಝಾನ್‌ ನಲ್ಲಿ ವಿವಿಧ ಬೆಲೆಬಾಳುವ ವಸ್ತುಗಳನ್ನು ಆರ್ಡರ್ ಮಾಡುತ್ತಿದ್ದರು. ಈ ವಸ್ತುಗಳನ್ನು ಪಡೆ ಯಲು ಬೇರೆ ಬೇರೆ ಕಡೆಯ ಸ್ಥಳಗಳ ವಿಳಾಸ ನೀಡುತ್ತಿದ್ದರು. ಅದರಂತೆ ಈ ವಸ್ತುಗಳನ್ನು ಪಡೆಯಲು ಆರೋಪಿಗಳು ವಿಮಾನದಲ್ಲೂ ಹೋಗಿ ಬರುವ ಚಾಳಿ ಹೊಂದಿದ್ದರು ಎನ್ನಲಾಗಿದೆ. ಹೀಗೆ ವಸ್ತುಗಳನ್ನು ಪಡೆಯಲು ವಸ್ತು ತುಂಬಿರುವ ಬಾಕ್ಸ್‌ಗಳ ಮೇಲಿನ ಟ್ರ್ಯಾಕಿಂಗ್ ಐಡಿಯನ್ನು ಅದಲು ಬದಲು ಮಾಡಿ, ಅದನ್ನು ಪಡೆಯುವ ಮೂಲಕ ಅಮೆಝಾನ್ ಕಂಪೆನಿಗೆ ಕೋಟ್ಯಂತರ ರೂ. ವಂಚಿಸುತ್ತಿದ್ದರು ಎಂದು ಉರ್ವ ಪೊಲೀಸರು ಮಾಹಿತಿ ನೀಡಿದ್ದಾರೆ.

ವಸ್ತುಗಳು ಡೆಲಿವರಿಯಾದ ಬಳಿಕ ಅದರ ಮೇಲಿನ ಟ್ರ್ಯಾಕಿಂಗ್ ಲೇಬಲ್‌ಗಳನ್ನು ಕಡಿಮೆ ಬೆಲೆಯ ವಸ್ತುಗಳು ತುಂಬಿದ ಬಾಕ್ಸ್‌ಗಳ ಮೇಲೆ ಹಚ್ಚುತ್ತಿದ್ದರು. ಹಾಗೇ ದುಬಾರಿ ಬೆಲೆಯ ವಸ್ತುಗಳನ್ನು ತಮ್ಮಲ್ಲೇ ಇರಿಸಿಕೊಳ್ಳುತ್ತಿದ್ದರು. ಬಳಿಕ ಅದನ್ನು ಮಾರಾಟ ಮಾಡುತ್ತಿದ್ದರು. ಹೀಗೆ ದೇಶದ ನಾನಾ ಕಡೆಯ ನಗರಗಳ ವಿಳಾಸ ನೀಡಿ ಅಮೆಝಾನ್ ಕಂಪೆನಿಂದ 30 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ಪಡೆದು ಬಳಿಕ ವಂಚಿಸಿರುವುದಾಗಿ ತಿಳಿದು ಬಂದಿದೆ.

ಈ ಆರೋಪಿಗಳು ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ವಿಳಾಸದಲ್ಲಿ ʼಅಮಿತ್ʼ ಎಂಬ ಹೆಸರಿನಲ್ಲಿ ಎರಡು ದುಬಾರಿ ಮೌಲ್ಯದ ಸೋನಿ ಕ್ಯಾಮೆರಾಗಳು ಮತ್ತು ಇತರ 10 ವಸ್ತುಗಳಿಗೆ ನಕಲಿ ವಿಳಾಸ ನೀಡಿ ಆರ್ಡರ್ ಮಾಡಿದ್ದರು. ಹೀಗೆ ಬಂದ ಸಾಮಗ್ರಿಗಳನ್ನು ಸ್ವೀಕರಿಸಿ ಬಳಿಕ ರಿಟರ್ನ್ ಮಾಡುವ ಸಂದರ್ಭ ತಪ್ಪು ಒಟಿಪಿ ಸಂಖ್ಯೆ ನೀಡಿದ ಕಾರಣ ಡೆಲಿವರಿ ದೃಢೀಕರಣದಲ್ಲಿ ವಿಳಂಬವಾಯಿತು. ಹಾಗಾಗಿ ಮರುದಿನ ಕ್ಯಾಮೆರಾಗಳನ್ನು ಪಡೆಯುವಂತೆ ರಾಜ್‌ ಕುಮಾರ್ ಮೀನಾ ಹೇಳಿದ್ದರಿಂದ ಅಮೆಝಾನ್ ಡೆಲಿವರಿ ಸಿಬ್ಬಂದಿಯು ವಾಪಸ್ ಮರಳಿದರು. ಅದಾದ ಬಳಿಕ ಆರೋಪಿಗಳು ಸೋನಿ ಕ್ಯಾಮೆರಾಗಳ ಆರ್ಡರ್ ರದ್ದುಗೊಳಿಸಿದಾಗ ಅನುಮಾನ ವ್ಯಕ್ತವಾಯಿತು. ಅಲ್ಲದೆ ಬಾಕ್ಸ್‌ಗಳನ್ನು ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಆರೋಪಿಗಳು ನಿಜವಾದ ಸೋನಿ ಕ್ಯಾಮೆರಾಗಳನ್ನು ತೆಗೆದು, ಬೇರೆ ವಸ್ತುಗಳನ್ನು ಬಾಕ್ಸ್‌ ನಲ್ಲಿಟ್ಟು ವಾಪಸ್ ನೀಡಿರುವುದು ತನಿಖೆಯಿಂದ ದೃಢಪಟ್ಟಿದೆ. ಉರ್ವ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆರೋಪಿಗಳು ವಂಚಿಸಿ ಪಡೆದ ಸೊತ್ತುಗಳನ್ನು ಮಾರಾಟ ಮಾಡಿ ಲಭಿಸಿದ 11,45,000 ರೂ. ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X