Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಲಿಂಗಾಯತ ‘ಸ್ವತಂತ್ರ’ ಧರ್ಮ; ಹಿಂದು...

"ಲಿಂಗಾಯತ ‘ಸ್ವತಂತ್ರ’ ಧರ್ಮ; ಹಿಂದು ಧರ್ಮ, ಸನಾತನ ಧರ್ಮದ ಭಾಗವಲ್ಲ"

ವಾರ್ತಾಭಾರತಿವಾರ್ತಾಭಾರತಿ18 Sept 2025 9:30 PM IST
share
ಲಿಂಗಾಯತ ‘ಸ್ವತಂತ್ರ’ ಧರ್ಮ; ಹಿಂದು ಧರ್ಮ, ಸನಾತನ ಧರ್ಮದ ಭಾಗವಲ್ಲ
ವಿದ್ಯಾರ್ಥಿ-ಸಾರ್ವಜನಿಕ ಸಂವಾದದಲ್ಲಿ ಡಾ.ಬಸವಲಿಂಗ ಪಟ್ಟದೇವರು

ಉಡುಪಿ, ಸೆ.18: ವಿಶ್ವಗುರು ಬಸವಣ್ಣ ಸ್ಥಾಪಿಸಿದ ಲಿಂಗಾಯತ ಧರ್ಮ, ಹಿಂದು ಧರ್ಮದ ಒಂದು ಭಾಗವೂ ಅಲ್ಲ, ಸನಾತನ ಧರ್ಮದ ಭಾಗವೂ ಅಲ್ಲ. ಇದೊಂದು ಸ್ವತಂತ್ರ ಧರ್ಮ. ಇಲ್ಲಿ ಬಸವಣ್ಣನೇ ಧರ್ಮಗುರು, ಶರಣರ ವಚನ ಸಾಹಿತ್ಯವೇ ಧರ್ಮಗ್ರಂಥ. ಹೀಗಾಗಿ ಬಸವಣ್ಣ ಸ್ಥಾಪಿಸಿದ ಧರ್ಮವೇ ಲಿಂಗಾಯತ ಧರ್ಮ ಒಂದು ಸ್ವತಂತ್ರ ಧರ್ಮ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು ಹೇಳಿದ್ದಾರೆ.

ಶುದ್ಧ ಬಸವತತ್ವವನ್ನು ಪ್ರಚಾರ, ಪ್ರಸಾರ ಹಾಗೂ ಅನುಷ್ಠಾನ ಮಾಡುವ ಆಶಯದೊಂದಿಗೆ ಲಿಂಗಾಯತ ಮಠಾ ಪತಿಗಳ ಒಕ್ಕೂಟ ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಗುರುವಾರ ಉಡುಪಿಗೆ ಆಗಮಿಸಿ ಪುರಭವನದಲ್ಲಿ ಉಡುಪಿಯ ಕಾಲೇಜು ವಿದಾರ್ಥಿಗಳು ಹಾಗೂ ಸಾರ್ವಜನಿಕ ರೊಂದಿಗೆ ನಡೆಸಿದ ವಚನ ಸಂವಾದ ಕಾರ್ಯಕ್ರಮದಲ್ಲಿ ದಸಂಸದ ಮುಖಂಡ ಸುಂದರ್ ಮಾಸ್ತರ್ ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸುತಿದ್ದರು.

ಯಾವುದೇ ಧರ್ಮ, ಧರ್ಮ ಅನಿಸಿಕೊಳ್ಳಲು ತನ್ನದೇ ಆದ ಸಿದ್ಧಾಂತ, ಸಾಧನೆ, ಧರ್ಮಗುರು, ಧರ್ಮಗಂಥ, ನೀತಿ ನಿಯಮಗಳನ್ನು ಹೊಂದಿರುತ್ತದೆ. ಹೀಗಾಗಿಯೇ ಲಿಂಗಾಯತ ಧರ್ಮ ಒಂದು ಸ್ವತಂತ್ರ ಧರ್ಮ. ಬುದ್ಧ ಸ್ಥಾಪಿಸಿದ್ದು ಬೌದ್ಧ ಧರ್ಮವಾದರೆ, ಮಹಾವೀರನದು ಜೈನ. ಗುರುನಾನಕ್ ಪ್ರಾರಂಭಿಸಿದ್ದು ಸಿಖ್ ಧರ್ಮವಾಗಿದ್ದು, ಏಸು ಕ್ರಿಸ್ತರದ್ದು ಕ್ರೈಸ್ತ ಧರ್ಮ. ಅದೇ ರೀತಿ ಬಸವಣ್ಣ ಕೊಟ್ಟಿದ್ದು ಬಸವ ಧರ್ಮ. ಅದನ್ನು ನಾವಿಂದು ಲಿಂಗಾಯತ ಧರ್ಮ ಎಂದು ಕರೆಯುತ್ತೇವೆ ಎಂದರು.

ಇದು ಹಿಂದು ಧರ್ಮವಾಗಲೀ, ಸನಾತನ ಧರ್ಮದ ಭಾಗವೇ ಅಲ್ಲ. ಇದನ್ನು ಸ್ವತಂತ್ರ ಧರ್ಮ ಎಂದೇ ತಿಳಿದು ಕೊಳ್ಳಬೇಕು ಎಂದವರು ಉತ್ತರಿಸಿದರು.

ಬಿಲ್ಲವ ಮಹಾಮಂಡಳಿಯ ಮಹಿಳಾ ಅಧ್ಯಕ್ಷೆಯಾಗಿರುವ ಗೀತಾಂಜಲಿ ಸುವರ್ಣ ಕೇಳಿದ ಲಿಂಗಾಯತ- ವೀರಶೈವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ಇದೊಂದು ಸೂಕ್ಷ್ಮ ವಿಷಯವಾಗಿದ್ದು ಆದರೂ ತಾನು ಉತ್ತರಿಸು ವುದಾಗಿ ತಿಳಿಸಿದರು. ಬಸವಣ್ಣನ ಕಾಲದಲ್ಲಿ ಅನೇಕರು ಬಸವಣ್ಣನವರಲ್ಲಿ ವಿಲೀನರಾದರು. ಅವರಲ್ಲಿ ವೀರಶೈವವೂ ಒಂದು. ಬಸವ ಧರ್ಮದಲ್ಲಿ ವಿಲೀನಗೊಂಡ ವೀರಶೈವರು ಇಷ್ಟಲಿಂಗ ಉಪಾಸನೆ ತೆಗೆದು ಕೊಂಡು ತತ್ವವನ್ನು ಪಾಲಿಸುತಿದ್ದರು. ವೀರಶೈವ ಎಂಬುದು ಶೈವದ ಒಂದು ಭಾಗ ಎಂದವರು ವಿವರಿಸಿದರು.

ಶೈವರೂ ಇದರಲ್ಲಿ ಬಂದು ವಿಲೀನವಾದರು. ಆದರೆ ಅವರು ನಾವು ಲಿಂಗಾಯತರು ಎಂದು ಹೇಳಬೇಕಾಗಿತ್ತು. ಆದರೆ ಅವರು ತಾವು ವೀರಶೈವರು ಎಂದು ಹೇಳುತಿದ್ದಾರೆ. ಅಲ್ಲದೇ ಈಗವರು ಬಸವಣ್ಣರನ್ನು ಗುರುಗಳೆಂದು ಒಪ್ಪಿಕೊಳ್ಳುವುದಿಲ್ಲ. ವಚನ ಸಾಹಿತ್ಯವನ್ನು ಧರ್ಮಗ್ರಂಥ ಎಂದು ಹೇಳುವುದಿಲ್ಲ. ಒಪ್ಪಿಕೊಳ್ಳದ ಕಾರಣ ಅವರ ಮತ್ತು ನಮ್ಮ ನಡುವೆ ಸ್ವಲ್ಪ ವ್ಯತ್ಯಾಸವಿದೆ. ಬಹಳ ವ್ಯತ್ಯಾಸವಿಲ್ಲದಿದ್ದರೂ ವ್ಯತ್ಯಾಸವಂತೂ ಉಳಿದು ಕೊಂಡಿದೆ. ಬಸವಣ್ಣರನ್ನು ಹಾಗೂ ವಚನ ಸಾಹಿತ್ಯವನ್ನು ಅವರು ಒಪ್ಪಿಕೊಂಡರೆ ಅವರೂ ನಮ್ಮವರೇ. ನಾವೆಲ್ಲರೂ ಒಂದೇ. ನಮ್ಮಲ್ಲಿ ಏನೂ ಬೇಧಭಾವ ಇಲ್ಲ ಎಂದರು.

ಸಮಾಜದಲ್ಲಿ ಸಾಮರಸ್ಯ ಮೂಡಲು ಮೊದಲು ಧರ್ಮದ ಗುರುಗಳಲ್ಲಿ ಸಾಮರಸ್ಯ ಮೂಡಬೇಕು ಎಂದು ಕಾಂಗ್ರೆಸ್ ನಾಯಕ ರಮೇಶ್ ಕಾಂಚನ್‌ರ ಪ್ರಶ್ನೆಗೆ ಹಂದಿಗುಂದ ಮಠದ ಶ್ರೀಶಿವಾನಂದ ಮಹಾಸ್ವಾಮಿಗಳು ಉತ್ತರಿಸಿದರು. ತಾತ್ವಿಕ ಭಿನ್ನಾಭಿಪ್ರಾಯಗಳು ತಾತ್ವಿಕವಾಗಿರಬೇಕು. ತಾನು ಹೇಳಿದ್ದೇ ಸತ್ಯ ಎಂದು ಹಠ ಹಿಡಿಯಬಾರದು. ಎಲ್ಲರೂ ಸತ್ಯವನ್ನು ನಂಬಿದರೆ, ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯ ಎಂದರು.

ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿಯೊಬ್ಬರ ಲಿಂಗಾಯತ ಧರ್ಮದ ಮಾನ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ಜೈನ ಧರ್ಮ, ಇಸ್ಲಾಂ ಧರ್ಮ, ಕ್ರೈಸ್ತ ಧರ್ಮದಂತೆ ಲಿಂಗಾಯತ ಧರ್ಮವೂ ಪ್ರತ್ಯೇಕವಾದ ಧರ್ಮ ವಾಗಿದೆ. ಇದಕ್ಕೆ ಸಂವಿಧಾನಬದ್ಧವಾಗಿ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗಬೇಕಾಗಿದೆ. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಹಕ್ಕಿನ ಮಾನ್ಯತೆಯನ್ನು ನಾವು ಕೇಳುತಿದ್ದೇವೆ ಎಂದು ಉತ್ತರಿಸಿದರು.

ಉಡುಪಿ ಆಸುಪಾಸಿನ ಎಂಟಕ್ಕೂ ಅಧಿಕ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಇಂದಿನ ಸಂವಾದದಲ್ಲಿ ಉತ್ಸಾಹದಿಂದ ಭಾಗವಹಿಸಿ, ಧರ್ಮವೂ ಸೇರಿದಂತೆ ಹಲವು ವಿಷಯಗಳ ಕುರಿತು ಕೆಲವು ದಿಟ್ಟ, ನೇರ ಪ್ರಶ್ನೆ ಗಳನ್ನು ಕೇಳಿದರೆ, ಡಾ.ಪಟ್ಟದೇವರು ಹಾಗೂ ಶಿವಾನಂದ ಮಹಾಸ್ವಾಮಿಗಳು ಅತ್ಯಂತ ಜಾಣ್ಮೆಯಿಂದ ಉತ್ತರಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X