ಬೆಂಗಳೂರಿನ ಕಾರ್ಮಿಕ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ಲೋಕಾಯುಕ್ತ ದಾಳಿ

ಚಾಮರಾಜನಗರ: ರಾಜ್ಯದಾದ್ಯಂತ ಹಲವೆಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಯುತ್ತಿದ್ದು, ಬೆಂಗಳೂರಿನ ಕಾರ್ಮಿಕ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ರವರ ಮನೆ ಹಾಗೂ ತೋಟದ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದರ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಉಪ್ಪಾರ ಮೋಳೆಯಲ್ಲಿರುವ ಶ್ರೀನಿವಾಸ್ ರವರ ಸಂಬಂಧಿಕರ ಮನೆಯ ಮೇಲೂ ಲೋಕಾಯುಕ್ತರು ದಾಳಿ ನಡೆಸಿದ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಳ್ಳೇಗಾಲ ಪಟ್ಟಣದ ಉಪ್ಪಾರ ಮೋಳೆ ಬಡಾವಣೆಯ ನಿವಾಸಿ ಮಾಜಿ ನಗರಸಭಾ ನಾಮ ನಿರ್ದೇಶನ ಸದಸ್ಯ ನಟರಾಜ್ ರವರ ಮನೆಯ ಮೇಲೂ ಲೋಕಾಯಕ್ತ ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಲೋಕಾಯುಕ್ತರಿಗೆ ನಟರಾಜು ಮತ್ತು ಕುಟುಂಬದವರು ಸಹಕಾರ ನೀಡಿದರು. ಇದಲ್ಲದೆ ಸತ್ತೇಗಾಲದಲ್ಲಿರುವ ತೋಟದ ಮನೆಯ ಮೇಲೂ ಸಹ ಲೋಕಾಯುಕ್ತರು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
Next Story





