ಉಚಿತ ಭಾರೀ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಪಿಎಂ-ಎಜೆಎವೈ ಯೋಜನೆ ಅಡಿ ಕೆಎಸ್ಸಾರ್ಟಿಸಿಯ ಮಾಲೂರು, ಮಳವಳ್ಳಿ, ಹಾಸನ, ಚಿಕ್ಕಮಗಳೂರು ಹಾಗೂ ಹೊಳಲ್ಕೆರೆ ತರಬೇತಿ ಕೇಂದ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ ಆಯೋಜಿಸಲಾಗಿದ್ದು, ತರಬೇತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಹತ್ತಿರದ ತರಬೇತಿ ಕೇಂದ್ರದಲ್ಲಿ ನೇರವಾಗಿ ಅಥವಾ ksrtcjobs.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದೊಂದಿಗೆ ಭಾರೀ ವಾಹನ ತರಬೇತಿ ನೀಡಲಾಗುತ್ತದೆ. ಒಂದು ತಿಂಗಳ ತರಬೇತಿ ಇದಾಗಿದ್ದು, ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಉಚಿತ ಪರವಾನಗಿಯನ್ನೂ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಳವಳ್ಳಿ(77609 90137), ಹಾಸನ (77609 90533), ಹೊಳಲ್ಕೆರೆ (70190 72560), ಮಾಲೂರು (77609 94432) ಮತ್ತು ಚಿಕ್ಕಮಗಳೂರು(96060 37746) ಕೆಎಸ್ಸಾರ್ಟಿಸಿ ಘಟಕಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





