ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲಬುರಗಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2026-27ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು https://shp.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2026ರ ಜೂನ್ 8 ರೊಳಗಾಗಿ ಅರ್ಜಿ ಸಲ್ಲಿಸಬೇಕು. ತಾಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್‍ಸೈಟ್‍ನ್ನು, ಸಹಾಯವಾಣಿ ಸಂಖ್ಯೆ 8050770004, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕಾ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಕೋರಲಾಗಿದೆ.




