ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಭಾರತದ ಪ್ರತಿಷ್ಠಿತ ರಕ್ಷಣಾ ವಲಯದ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ರೇಡಿಯೋಗ್ರಾಫರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 2 ಹುದ್ದೆಗಳಿದ್ದು, ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಸ್ಎಸ್ಎಲ್ಸಿ/ಪಿಯುಸಿ ಜೊತೆಗೆ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಕಳುಹಿಸಬಹುದು:
📌 ಅರ್ಜಿ ಕಳುಹಿಸಬೇಕಾದ ವಿಳಾಸ:
ದಿ ಜನರಲ್ ಮ್ಯಾನೇಜರ್ (HR),
ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್,
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್,
ಸುರಂಜನ್‌ದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ),
ಬೆಂಗಳೂರು – 560017.
📌 ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 29 ಜೂನ್ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 ಜುಲೈ 2026
📌 ಪ್ರಮುಖ ವಿವರಗಳು
ಸಂಸ್ಥೆಯ ಹೆಸರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ಇಂಡಿಯಾ)
ಹುದ್ದೆಯ ಹೆಸರು: ರೇಡಿಯೋಗ್ರಾಫರ್
ಒಟ್ಟು ಹುದ್ದೆಗಳು: 02
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
📌 ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಎಸ್ಎಸ್ಎಲ್ಸಿ/ಪಿಯುಸಿ ಜೊತೆಗೆ ಪದವಿ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
📌 ವಯೋಮಿತಿ
ಅಭ್ಯರ್ಥಿಯ ಗರಿಷ್ಠ ವಯಸ್ಸು 01 ಜನವರಿ 2026ರ ಅನ್ವಯ 40 ವರ್ಷಗಳನ್ನು ಮೀರಿರಬಾರದು.
►ಅರ್ಜಿ ಶುಲ್ಕ
ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
📌 ಅರ್ಜಿ ಸಲ್ಲಿಸುವುದು ಹೇಗೆ?
* ಮೊದಲು HAL ಅಧಿಕೃತ ವೆಬ್‌ಸೈಟ್‌ನಿಂದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ. ಈ ಕೆಳಗಿನ ಲಿಂಕ್‌ನಲ್ಲಿ ಅಧಿಸೂಚನೆಯನ್ನು ಪಡೆಯಬಹುದು: HAL ನೇಮಕಾತಿ ಅಧಿಸೂಚನೆ
* ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು (Application Form) ಡೌನ್‌ಲೋಡ್ ಮಾಡಿಕೊಳ್ಳಿ.
* ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
* ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ರೆಸ್ಯೂಮ್, ಶೈಕ್ಷಣಿಕ ದಾಖಲೆಗಳು ಮತ್ತು ವಯಸ್ಸಿನ ಪುರಾವೆಗಳ ಸ್ವಯಂ ದೃಢೀಕೃತ (Self-Attested) ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ.
* ಕೊನೆಯ ದಿನಾಂಕದೊಳಗೆ ಮೇಲಿನ ವಿಳಾಸಕ್ಕೆ ತಲುಪುವಂತೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಿ.






