ಮೆಟ್ರೋದಲ್ಲಿ 2 ಲಕ್ಷ ರೂ. ವೇತನದ ಉದ್ಯೋಗ; ಅರ್ಜಿ ಸಲ್ಲಿಸುವುದು ಹೇಗೆ?

ಸಾಂದರ್ಭಿಕ ಚಿತ್ರ (PTI)
ಇತ್ತೀಚೆಗೆ ಮೆಟ್ರೋ ನಿಗಮ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು 2025 ಡಿಸೆಂಬರ್ 31ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 2026 ಜನವರಿ 26.
ಹಿರಿಯ ಪದವೀಧರರಿಗೆ ಬೆಂಗಳೂರು ಮೆಟ್ರೋ ಶುಭ ಸುದ್ದಿ ನೀಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು. ಮುಖ್ಯವಾಗಿ ಮೆಟ್ರೋ ನಿಮಗದಲ್ಲಿ ಕಂಪನಿ ಕಾರ್ಯದರ್ಶಿ ಮತ್ತು ಪ್ರಧಾನ ವ್ಯವಸ್ಥಾಪಕರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಇತ್ತೀಚೆಗೆ ಮೆಟ್ರೋ ನಿಗಮ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು 2025 ಡಿಸೆಂಬರ್ 31ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 2026 ಜನವರಿ 26.
ನೇಮಕಾತಿಯ ಪೂರ್ಣ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)
ಹುದ್ದೆಗಳ ಹೆಸರು: ಕಂಪನಿ ಕಾರ್ಯದರ್ಶಿ ಮತ್ತು ಪ್ರಧಾನ ವ್ಯವಸ್ಥಾಪಕ
ಒಟ್ಟು ಹುದ್ದೆ: ಎರಡು
ಪೋಸ್ಟಿಂಗ್: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ಆರಂಭ: ಡಿಸೆಂಬರ್ 31
ಅರ್ಜಿ ಸಲ್ಲಿಕೆ ಕೊನೆ ದಿನ : 2026 ಜನವರಿ 26
ಶೈಕ್ಷಣಿಕ ಅರ್ಹತೆ
ಮೆಟ್ರೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಎಂಬಿಎ ಹಾಗೂ ಸಿಎ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. ಸದರಿ ಮೆಟ್ರೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷದ ಒಳಗಿರಬೇಕು. ಯಾವುದೇ ಜಾತಿ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ. ಎಲ್ಲ ವರ್ಗದ ಅಭ್ಯರ್ಥಿಗಳಿಗೂ ಶುಲ್ಕದಿಂದ ವಿನಾಯಿತಿ ಇದೆ. ಉಚಿತವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳ ಆಯ್ಕೆ ಮತ್ತು ಮಾಸಿಕ ವೇತನ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮವು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆ ಆಗುವವರಿಗೆ ಮಾಸಿಕ 1,64,000 ರೂ.ರಿಂದ 2,06,250 ರೂ. ವೇತನ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಲಿಂಕ್
ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕೃತ ಜಾಲತಾಣ https://www.bmrcl.co.in/ ಕ್ಕೆ ಭೇಟಿ ನೀಡಬೇಕು. ಅಲ್ಲಿ ಕೇಳಲಾದ ವಿವರ ನಮೂದಿಸಿ ಅರ್ಜಿ ಸಲ್ಲಿಸಬಹುದು. ನಂತರ ಅರ್ಜಿಯ ಪ್ರತಿಯನ್ನು ಝರಾಕ್ಸ್ ಪಡೆದು, ಕೇಳಲಾದ ಎಲ್ಲ ಅಗತ್ಯ ದಾಖಲೆಗಳ ಪ್ರತಿ ಜೊತೆಗೆ 'ಜನರಲ್ ಮ್ಯಾನೇಜರ್ (ಎಚ್ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್ ಶಾಂತಿನಗರ, ಬೆಂಗಳೂರು 560027' ಈ ವಿಳಾಸಕ್ಕೆ ಕೊರಿಯರ್ ಮಾಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.







