ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ; ಯಾರು ಅರ್ಜಿ ಸಲ್ಲಿಸಬಹುದು?

ಪಂಜಾಬ್ ನ್ಯಾಷನಲ್ ಬ್ಯಾಂಕ್ 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ.
ದೇಶದ ಪ್ರತಿಷ್ಠಿತ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) 545 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆಯು 2026 ಜುಲೈ 20 ರಂದು ಪ್ರಾರಂಭವಾಗಿದ್ದು, ಅಭ್ಯರ್ಥಿಗಳು 2026 ಆಗಸ್ಟ್ 09 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು: https://ibpsreg.ibps.in/pnbjul26/
📌ಪ್ರಮುಖ ದಿನಾಂಕಗಳು:
• ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20 ಜುಲೈ 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಆಗಸ್ಟ್ 2026
• ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 09 ಆಗಸ್ಟ್ 2026
📌ಹುದ್ದೆಯ ವಿವರಗಳು
ಸಂಸ್ಥೆಯ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್
ಹುದ್ದೆಯ ಹೆಸರು: ಲೋಕಲ್ ಬ್ಯಾಂಕ್ ಆಫೀಸರ್ (LBO)
ಒಟ್ಟು ಹುದ್ದೆಗಳು: 545
ಉದ್ಯೋಗ ಸ್ಥಳ: ಅಖಿಲ ಭಾರತ
ಮಾಸಿಕ ಸಂಬಳ: 48,480 ರಿಂದ ರೂ. ರಿಂದ 85,920 ರೂ. ವರೆಗೆ
📌ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Graduate) ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಗಳಿಗೆ 2026 ಜುಲೈ 01 ರಂತೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ವಯೋಮಿತಿ ಸಡಿಲಿಕೆ
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC / ST ಅಭ್ಯರ್ಥಿಗಳಿಗೆ: 5 ವರ್ಷಗಳು
PwBD ಅಭ್ಯರ್ಥಿಗಳಿಗೆ: 10 ವರ್ಷಗಳು
📌ಅರ್ಜಿ ಶುಲ್ಕ ಎಷ್ಟು?
• SC / ST / PwBD ಅಭ್ಯರ್ಥಿಗಳಿಗೆ: ಕೇವಲ 59 ರೂ.
• ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: 1180 ರೂ.
• ಪಾವತಿ ವಿಧಾನ: ಆನ್‌ಲೈನ್ ಮೂಲಕ
📌ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
1. ಆನ್‌ಲೈನ್ ಲಿಖಿತ ಪರೀಕ್ಷೆ
2. ದಾಖಲೆಗಳ ಪರಿಶೀಲನೆ
3. ಭಾಷಾ ಪ್ರಾವೀಣ್ಯತೆ ಪರೀಕ್ಷೆ
4. ವೈಯಕ್ತಿಕ ಸಂದರ್ಶನ
📌ಅರ್ಜಿ ಸಲ್ಲಿಸುವುದು ಹೇಗೆ?
1. ಮೊದಲಿಗೆ ಪಿಎನ್ಬಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಕೆಳಗಿನ ಅಧಿಕೃತ ಲಿಂಕ್ ಬಳಸಿ.
2. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
3. ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್, ವಿದ್ಯಾರ್ಹತೆ ಪ್ರಮಾಣಪತ್ರಗಳು ಮತ್ತು ಪಾಸ್‌ಪೋರ್ಟ್ ಗಾತ್ರದ ಫೋಟೋವನ್ನು ಸಿದ್ಧವಾಗಿಟ್ಟುಕೊಳ್ಳಿ.
4. ಆನ್‌ಲೈನ್ ನಮೂನೆಯಲ್ಲಿ ಅಗತ್ಯವಿರುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
5. ನಿಮ್ಮ ವರ್ಗಕ್ಕೆ ತಕ್ಕಂತೆ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
6. ಕೊನೆಯದಾಗಿ ‘Submit’ ಬಟನ್ ಕ್ಲಿಕ್ ಮಾಡಿ ಮತ್ತು ಭವಿಷ್ಯದ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ಔಟ್ ತೆಗೆದುಕೊಳ್ಳಿ.






