Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. 87ನೇ ಕನ್ನಡ ಸಾಹಿತ್ಯ ಸಮ್ಮೇಳನ:...

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪರಿಂದ 21 ಹಕ್ಕೊತ್ತಾಯ

'10ನೇ ತರಗತಿ ವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಲಿ'

ವಾರ್ತಾಭಾರತಿವಾರ್ತಾಭಾರತಿ20 Dec 2024 3:55 PM IST
share
87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪರಿಂದ 21 ಹಕ್ಕೊತ್ತಾಯ

ಮಂಡ್ಯ: ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಕೂಡದು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಒತ್ತಾಯಿಸಿದ್ದಾರೆ.

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿರುವ ಗೊ.ರು.ಚನ್ನಬಸಪ್ಪ ಸುದೀರ್ಘ ಭಾಷಣ ಮಾಡಿದ್ದು, ಯಾವುದೇ ಕಾರಣಕ್ಕೆ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ. ಅದೇರೀತಿ ಭಾಷೆ ಎದುರಿಸುತ್ತಿರುವ ಬಿಕ್ಕಟ್ಟುಗಳು, ಅಂತರರಾಜ್ಯ ಭಾಷಾ ವಿನಿಮಯ, ತಂತ್ರಜ್ಞಾನದ ಅವಲಂಬನೆ, ಗಡಿನಾಡ ಕನ್ನಡಿಗರ ಬವಣೆ ಇತ್ಯಾದಿ 21 ಹಕ್ಕೊತ್ತಾಯಗಳ ಮೂಲಕ ಗಮನಸೆಳೆದರು.

1. ಪ್ರಾಥಮಿಕ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಕೂಡದು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು.

2. ಅಗತ್ಯವೆನಿಸಿರುವ ಇಂಗ್ಲಿಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ, ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು ಮತ್ತು ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು, ಎಲ್ಲ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವ್ಯಯದಲ್ಲಿ ಕನಿಷ್ಟ ಶೇ.೧೫ರಷ್ಟು ಭಾಗ ಶಿಕ್ಷಣಕ್ಕೆ ಮೀಸಲಿರಬೇಕು.

3. ಕಳೆದ ಅನೇಕ ದಶಕಗಳಿಂದ ನನೆಗುದಿಗೆ ಬಿದ್ದಿರುವ ಸರೋಜಿನ ಮಹಿಷಿ ವರದಿಯನ್ನು ಕೂಡಲೇ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು. ಅನುಷ್ಠಾನದ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವಹಿಸಬೇಕು. ಸಾರ್ವಜನಿಕವಿರಲಿ, ಖಾಸಗಿಯಿರಲಿ ಉದ್ಯೋಗಾವಕಾಶಗಳಲ್ಲಿ ವಿಶೇಷ ಅರ್ಹತೆಯ ಉನ್ನತ ಹುದ್ದೆಗಳ ಹೊರತಾಗಿ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು. ಕಾಲ-ಕಾಲಕ್ಕೆ ಉದ್ಯೋಗ ಮಾಹಿತಿ ದೊರೆಯುವಂತಾಗಬೇಕು.

4. ನಾಡಿನ ವಿಶೇಷ ವ್ಯವಸ್ಥೆಗಳಾದ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಜಾನಪದ ವಿಶ್ವವಿದ್ಯಾನಿಲಯಗಳು ಅನುಭವಿಸುತ್ತಿರುವ ಹಣಕಾಸು ಮತ್ತು ಭೋದನಾ ಸಿಬ್ಬಂದಿ ಕೊರತೆಯನ್ನು ನಿವಾರಿಸಲು ಕೂಡಲೇ ಕ್ರಮಕೈಗೊಳ್ಳಬೇಕು.

5. ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರವನ್ನು ಸ್ವತಂತ್ರ ಸ್ವಾಯತ್ತ ಕೇಂದ್ರವನ್ನಾಗಿ ಬೆಳೆಸಲು ಮತ್ತು ಕೇಂದ್ರದ ನೆರವನ್ನು ಪಡೆಯಲು ಅಗತ್ಯ ವ್ಯವಸ್ಥೆಮಾಡಬೇಕು.

6. ಅಪಾರ ಸಂಭಾವ್ಯ ಸಾಮರ್ಥ್ಯವಿರುವ ಪ್ರವಾಸೋದ್ಯಮವನ್ನು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ದೃಷ್ಟಿಯಿಂದಷ್ಟೇ ಅಲ್ಲದೆ ಆದಾಯ ಮತ್ತು ಉದ್ಯೋಗಾವಕಾಶ ದೃಷ್ಟಿಯಿಂದಲೂ ಅದನ್ನು ವಿಸ್ತರಣೆಯ ವಲಯವನ್ನಾಗಿ ಅಭಿವೃದ್ಧಿಗೊಳಿಸಬೇಕು.

7. ಕೈಗಾರಿಕೋದ್ಯಮಗಳ ಸ್ಥಾಪನೆ ಎಲ್ಲ ಜಿಲ್ಲೆಗಳಿಗೂ ಹಂಚಿಕೆಯಾಗಬೇಕು. ಯಾವುದೇ ಉದ್ಯಮವಿರಲಿ, ಅಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶದ ಕಟ್ಟುನಿಟ್ಟಿನ ಷರತ್ತು ವಿಧಿಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.

8. ಸರ್ಕಾರದ ಸಚಿವಾಲಯ ಕಛೇರಿಗಳ ಹೊರತಾಗಿ, ಉಳಿದ ಇಲಾಖೆಗಳ ನಿರ್ದೇಶನಾಲಯ ಕಛೇರಿಗಳನ್ನು ಬೇರೆ ಬೇರೆ ಜಿಲ್ಲಾ ಕೇಂದ್ರಗಳಿಗೆ ವರ್ಗಾಯಿಸಿ ಬೆಂಗಳೂರಿನ ಒತ್ತಡವನ್ನು ತಪ್ಪಿಸಬೇಕು.

9. ಶಿಕ್ಷಣ ಮಾಧ್ಯಮ ಅಂತಾರಾಜ್ಯ ಗಡಿ, ಜಲ ಮತ್ತು ವಲಸೆ ಸಮಸ್ಯೆಗಳನ್ನು ಪರಿಹರಿಸಲು ಒಂದು ರಾಷ್ಟ್ರೀಯ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು.

10. ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸುವ ದಿಸೆಯಲ್ಲಿ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗದ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಕಾಲಬದ್ಧ ಕ್ರಮಕೈಗೊಳ್ಳಬೇಕು.

11. ಬಸವಣ್ಣನವರನ್ನು ರಾಜ್ಯದ 'ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿರುವ ಮತ್ತು ಬಸವ ಕಲ್ಯಾಣದಲ್ಲಿ ನೂತನ ಅನುಭವ ಮಂಟಪವನ್ನು ನಿರ್ಮಿಸುತ್ತಿರುವ ರಾಜ್ಯ ಸರ್ಕಾರ, ಹನ್ನೆರಡನೇ ಶತಮಾನದ ಶರಣರ ಕ್ಷೇತ್ರಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಕ್ಕಾಗಿ ಒಂದು ಸ್ವಾಯತ್ತ ಪ್ರಾಧಿಕಾರ ರಚಿಸಬೇಕು. ಈಗಾಗಲೇ ಆಶ್ವಾಸನೆ ನೀಡಿರುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸಬೇಕು.

12. ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಕೈಗಾರಿಕೆಗಳು, ಕಚೇರಿಗಳು, ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಕನ್ನಡದಲ್ಲಿರುವುದು ಕಡ್ಡಾಯವಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.

13. ಪರಿಸರದ, ವಿಶೇಷವಾಗಿ, ಪಶ್ಚಿಮಘಟ್ಟಗಳ ರಕ್ಷಣೆಗೆ ಕಟ್ಟುನಿಟ್ಟಾದ ಕ್ರಮಕೈಗೊಳ್ಳಬೇಕು. ಅಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು.

14. ಜ್ಞಾನಪ್ರಸಾರದ ಕೇಂದ್ರದಂತಿರುವ ಗ್ರಂಥಾಲಯ ಪೋಷಣೆಯ ಬಗೆಗೆ ಪೂರ್ಣ ಗಮನಕೊಡಬೇಕು. ಗ್ರಂಥಗಳ ಸಗಟು ಕೊಳ್ಳಿಕೆ ಪ್ರತಿವರ್ಷ ತಪ್ಪದೇ ನಡೆಯಬೇಕು. ಗ್ರಂಥಾಲಯ ತೆರಿಗೆಯಿಂದ ಸಂಗ್ರಹವಾದ ಹಣವನ್ನು ಗ್ರಂಥಾಲಯಗಳ ಅಭಿವೃದ್ಧಿಗೇ ಬಳಸಬೇಕು.

15. ಹಿರಿಯ ಸಾಹಿತಿಗಳ ಸಮಗ್ರ ಸಾಹಿತ್ಯ ಪ್ರಕಟಣೆ ಒಂದು ಒಳ್ಳೆಯ ಯೋಜನೆಯಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕು.

16. ಆಡಳಿತದಲ್ಲಿ ಕನ್ನಡ ಬಳಕೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ಕನ್ನಡ ಲಿಪಿಯನ್ನು ಆಧುನಿಕ ತಂತ್ರ ವಿಧಾನಗಳಿಗೆ ಹೊಂದಿಸುವ ಕೆಲಸ ತ್ವರಿತವಾಗಿ ನಡೆಯಬೇಕು. ಯಾಂತ್ರಿಕ ಬುದ್ಧಿಮತ್ತೆ ತಂತ್ರದ ಬಳಕೆ ಹೆಚ್ಚಾಗಬೇಕು.

17. ಸಾಹಿತ್ಯ-ಸಂಸ್ಕೃತಿ ಸಂಬಂಧದ ಸಂಘ-ಸಂಸ್ಥೆಗಳಿಗೆ ಉದಾರ ಧನ ಸಹಾಯ ದೊರಕಿಸಬೇಕು.

18. ಯಾವುದೇ ಕಾರಣಕ್ಕೆ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಗೆ ಅವಕಾಶ ಕೊಡಬಾರದು.

19. ಕನ್ನಡದ ಕೃತಿಗಳನ್ನು ಅನ್ಯಭಾಷೆಗೆ ಅನುವಾದಿಸಿ ಪ್ರಕಟಿಸುವ ಕೆಲಸ ದೊಡ್ಡ ಪ್ರಮಾಣದಲ್ಲಿ ನಡೆಯಬೇಕು. ಇದಕ್ಕಾಗಿ ಭಾಷಾ ಪ್ರಾಧಿಕಾರಕ್ಕೆ ಅಗತ್ಯ ನೆರವು ಒದಗಿಸಬೇಕು.

20. ಕನ್ನಡ ಸಾಹಿತ್ಯ ಪರಿಷತ್ತು ಒಂದು ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಅದು ನಡೆಸುವ ಇಂತಹ ಸಮ್ಮೇಳನಗಳಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ವಿಳಂಬ ಮಾಡದೆ ಅದನ್ನು ಅನುಷ್ಠಾನಗೊಳಿಸಬೇಕು.

21. ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಕರಿಗೆ ಸಾಹಿತ್ಯ-ಸಂಸ್ಕೃತಿಗಳ ಬಗೆಗೆ ನಿಯತಕಾಲಿಕ ಶಿಬಿರಗಳನ್ನು ನಡೆಸಿ, ಅವರಲ್ಲಿ ಸಾಹಿತ್ಯದ ಅಧ್ಯಯನಾಸಕ್ತಿ ಬೆಳೆಸಬೇಕು.

ಕನ್ನಡ ಬಂಧುಗಳೆ, ಇದುವರೆಗೆ ನಾನೂ ಸೇರಿ ೮೭ ಸಮ್ಮೇಳನಾಧ್ಯಕ್ಷರ ಭಾಷಣಗಳನ್ನು ಕೇಳಿದ್ದೀರಿ. ಸಾಮಾನ್ಯವಾಗಿ ಇರುವ ಅಭಿಪ್ರಾಯವೆಂದರೆ, ಸಮ್ಮೇಳನಾಧ್ಯಕ್ಷರ ಭಾಷಣಗಳನ್ನು ಎಲ್ಲರೂ ಕೇಳುತ್ತಾರೆ. ನಂತರ ಮರೆಯುತ್ತಾರೆ ಎನ್ನುವುದು. ಸರ್ಕಾರವಂತೂ ಇದಕ್ಕೆ ಕಿವಿಯೇ ಕೊಡುವುದಿಲ್ಲ ಎಂಬ ಅಭಿಪ್ರಾಯವೂ ಇದೆ. ಈ ಧೋರಣೆ ಬದಲಾಗಬೇಕು. ನನ್ನ ಭಾಷಣದಲ್ಲಿ ಇರುವ ಆಶಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕಾರ್ಯಗತಗೊಳಿಸಲು ತೊಡಗಬೇಕು. ಹಾಗೆ ತೊಡಗುವಂತೆ ಮಾಡಲು ನಾವು ನೀವು ಎಲ್ಲರೂ ಸರ್ಕಾರದ ಮೇಲೆ ಅಗತ್ಯವಾದ ಒತ್ತಡವನ್ನು ತಂದು ಕಾರ್ಯೋನ್ಮುಖವಾಗುವಂತೆ ಮಾಡಬೇಕು. ಕನ್ನಡ ನಾಡಿನ ಜನ ಈ ಬಗ್ಗೆ ಸದಾ ಜಾಗೃತರಾಗಿ ಇರುತ್ತಾರೆ ಎಂಬ ಭರವಸೆ ನನಗಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X