'ತಿಥಿ’ ಸಿನೆಮಾ ಖ್ಯಾತಿಯ ನಟ ಗಡ್ಡಪ್ಪ ನಿಧನ

ಮಂಡ್ಯ: ರಾಷ್ಟ್ರಪ್ರಶಸ್ತಿ ವಿಜೇತ ‘ತಿಥಿ’ ಕನ್ನಡ ಸಿನೆಮಾ ಖ್ಯಾತಿಯ ಗಡ್ಡಪ್ಪ ಅಲಿಯಾಸ್ ಚನ್ನೇಗೌಡ (89) ಬುಧವಾರ ನಿಧನರಾಗಿದ್ದಾರೆ.
ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ನಿವಾಸಿಯಾಗಿರುವ ಗಡ್ಡಪ್ಪ ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಂದು ಮುಂಜಾನೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ 'ತಿಥಿ' ಸಿನೆಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ಚನ್ನೇಗೌಡ, ಆ ಸಿನಿಮಾದ ಮೂಲಕ ಗಡ್ಡಪ್ಪ ಅಂತಾನೇ ಖ್ಯಾತರಾಗಿದ್ದರು.
ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ 10ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅವರು ನಟಿಸಿದ್ದರು.
Next Story





