Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮುಡಾ ಪ್ರಕರಣ | ಕೋರ್ಟ್ ತೀರ್ಮಾನದ ಮೇಲೆ...

ಮುಡಾ ಪ್ರಕರಣ | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ : ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 Sept 2024 4:43 PM IST
share
ಮುಡಾ ಪ್ರಕರಣ | ಕೋರ್ಟ್ ತೀರ್ಮಾನದ ಮೇಲೆ ಸಿಎಂ ಭವಿಷ್ಯ ನಿರ್ಧಾರವಾಗಲಿದೆ : ಬಸವರಾಜ ಬೊಮ್ಮಾಯಿ

ಮಂಡ್ಯ : ಮುಡಾ ಹಗರಣದ ವಿಚಾರ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ ಆದೇಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯುತ್ತಾರೆಯೋ ಇಲ್ಲವೋ ಎನ್ನುವುದು ತೀರ್ಮಾನ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, "ಒಂದು ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವುದು ಇದೇ ಮೊದಲ ಅಲ್ಲ. ಹಲವಾರು ರಾಜ್ಯಗಳಲ್ಲಿ ಹಲವಾರು ಪ್ರಕರಣಗಳು ಆಗಿವೆ. ರಾಜ್ಯದಲ್ಲಿಯೂ ಆಗಿದ್ದು, ಇದೊಂದು ಸ್ಥಾಪಿತ ವ್ಯವಸ್ಥೆಯಾಗಿದೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ಇವೆ. 2018 ರಲ್ಲಿ ಒಂದು ತಿದ್ದುಪಡಿ ಆಗಿದೆ. ಸಂವಿಧಾನದ ಕಲಂ 17/2 ತಿದ್ದುಪಡಿ ಆದ ನಂತರ ಏನು ಬದಲಾವಣೆ ಆಗಿದೆ ಎನ್ನುವುದನ್ನು ಗಮನಿಸಬೇಕು" ಎಂದರು.

ʼಕಾಂಗ್ರೆಸ್ ಮಿತ್ರರು ಯಾಕೆ ಅಷ್ಟೊಂದು ಆತಂಕಕ್ಕೆ ಒಳಗಾಗಿದ್ದಾರೊ ಗೊತ್ತಿಲ್ಲ. ರಾಜ್ಯಪಾಲರು ಒಂದು ತನಿಖೆ ನಡೆಸುವಂತೆ ಆದೇಶ ಮಾಡಿದ್ದಾರೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಹಾಗೆ ಆಗಿರಲಿಲ್ಲ. ತನಿಖೆ ಅಂತ ಇರಲಿಲ್ಲ. ಪ್ರಾಸಿಕ್ಯೂಷನ್ ಮಾಡಿ ಅಂಥ ಹೇಳಿದ್ದರು. ಎಫ್‌ಐಆರ್ ಆಗಿ ತನಿಖೆಯಾಗಿ, ಚಾರ್ಜ್‌ ಶೀಟ್ ಆದ ನಂತರ ಪ್ರಾಸಿಕ್ಯೂಷನ್ ಮಾಡಲಾಗುತ್ತದೆ. ಅದು ಯಾವುದನ್ನೂ ಮಾಡದೇ ನೇರವಾಗಿ ಸೆಷನ್ಸ್ ಕೋರ್ಟ್‌ಗೆ ಸಮನ್ಸ್ ಮಾಡುವ ಅಧಿಕಾರವನ್ನು ನೀಡಲಾಗಿತ್ತು. ಅವತ್ತಿನ ರಾಜ್ಯಪಾಲರ ಆದೇಶದ ಬಗ್ಗೆ ಹಲವಾರು ಕೋರ್ಟ್‌ಗಳಲ್ಲಿ ಟೀಕೆ ಟಿಪ್ಪಣಿ ಆಗಿ, ಆದೇಶಗಳೂ ಆಗಿವೆ. ಇವತ್ತು ರಾಜ್ಯಪಾಲರು ಕೇವಲ ತನಿಖೆ ನಡೆಸಲು ಹೇಳಿದ್ದಾರೆ. ಕೋರ್ಟ್‌ನಲ್ಲಿ ನಡೆಯುತ್ತಿದೆ. ಅಂತಿಮ ಘಟಕ್ಕೆ ಬಂದಿದೆ. ಏನಾಗುತ್ತದೆಯೋ ಕಾದು ನೋಡೋಣʼ ಎಂದರು.

ಕೊವಿಡ್ ಹಗರಣ ಆರೋಪ ; ತನಿಖೆ ನಡೆಸಲು ಯಾವುದೇ ಅಡ್ಡಿಯಿಲ್ಲ :

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊವಿಡ್ ಹಗರಣದ ಕುರಿತು ಪ್ರತಿಕ್ರಿಯಿಸಿದ ಅವರು,"ಈ ಸರ್ಕಾರ ಕೊವಿಡ್ ವಿಚಾರದಲ್ಲಿ ತನಿಖೆ ನಡೆಸಲು ಆಯೋಗ ರಚನೆ ಮಾಡಿದ್ದರು. ಆ ಆಯೋಗ ಸಿಎಂಗೆ ವರದಿ ಸಲ್ಲಿಸಿದೆ. ಅದರಲ್ಲಿ ಏನಿದೆಯೋ ಗೊತ್ತಿಲ್ಲ. ಎಲ್ಲವೂ ಹೊರಗೆ ಬರಲಿ ಅದಕ್ಕೆ ಉತ್ತರ ಕೊಡುತ್ತೇವೆ. ನಮ್ಮ ಕಾಲದ ಹಗರಣದ ಕುರಿತು ತನಿಖೆ ನಡೆಸಲು ಯಾವುದೇ ಅಡ್ಡಿಯಿಲ್ಲ. ಯಾರು ರಾಜಕೀಯವಾಗಿ ಆರೋಪ ಮಾಡಿ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಅವರಿಗೂ ಶಿಕ್ಷೆಯಾಗಲಿ" ಎಂದರು.

Tags

Basavaraja Bommai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X