Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ...

ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಸಕಲ ಸಿದ್ಧತೆ : ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ14 Jan 2025 9:22 PM IST
share
ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಸಕಲ ಸಿದ್ಧತೆ : ಚಲುವರಾಯಸ್ವಾಮಿ

ಮಂಡ್ಯ : ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ಜಿಲ್ಲೆಯ ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು‌ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಗಳವಾರ ನಾಗಮಂಗಲದ ದೇವಲಾಪುರದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ಪಡೆಯಲು‌ ಮಂಡ್ಯ ಜಿಲ್ಲೆಯಿಂದ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯಕ್ಕೆ ತೆರಳಬೇಕಿತ್ತು. ರೈತರು ಹೆಚ್ಚಿರುವ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯದ ಅವಶ್ಯಕತೆಯನ್ನು ಮನಗಂಡು ಪ್ರಾರಂಭಿಸಲಾಗುತ್ತಿದೆ. ರೈತರು ಸದುಪಯೋಗಪಡಿಸಿಕೊಳ್ಳಿ ಎಂದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ತಳಿಗಳು, ಬೆಳೆಗೆ ಬಳಸಬೇಕಿರುವ ರಸಗೊಬ್ಬರ ಸೇರಿದಂತೆ ಪ್ರತಿಯೊಂದು ಮಾಹಿತಿ ಸಂಶೋಧಕರಿಂದ ದೊರಕಲಿದೆ ಎಂದು ಮಾಹಿತಿ ನೀಡಿದರು.

ಸಂಕ್ರಾಂತಿ ಹಬ್ಬ ರೈತರು ತಾವು ಬೆಳೆದ ಭತ್ತ, ರಾಗಿ, ಕಾಳುಗಳನ್ನು ಒಟ್ಟುಗೂಡಿಸಿ, ಪೂಜೆ ಮಾಡಿ ಮನೆಗೆ ಬೇಕಾದಷ್ಟನ್ನು ಶೇಖರಿಸಿ ಉಳಿದದನ್ನು ಮಾರಾಟ ಮಾಡುತ್ತಾರೆ. ರೈತರಿಗೆ ಉತ್ತಮ ಆದಾಯ ಬರಲಿ ಎಂದು ಅವರು ಹಲವಾರು ತಿಂಗಳಿಂದ ಶ್ರಮಪಟ್ಟಿ ಪಡೆದ ಫಲವನ್ನು ಪೂಜಿಸುವ ಹಬ್ಬ ಸಂಕ್ರಾಂತಿ ಹಬ್ಬ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಮಾತನಾಡಿ, ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಕೃಷಿಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದು, 17 ತಿಂಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕನಿಷ್ಠ 3 ಬಾರಿ ಭೇಟಿ ನೀಡಿ ಕೃಷಿಯ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಶ್ರಮ ವಹಿಸಿದ್ದಾರೆ. 84 ಲಕ್ಷ ಹೆಕ್ಟೇರ್ ಬಿತ್ತನೆ ಕಾರ್ಯಕ್ಕಾಗಿ 6 ಲಕ್ಷ ಟನ್ ಬಿತ್ತನೆ ಬೀಜವನ್ನು ರೈತರಿಗೆ ಯಾವುದೇ ತೊಂದರೆಯಿಲ್ಲದೇ ಒದಗಿಸಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ 1,47,000 ರೈತರಿಗೆ1,400 ಕೋಟಿ ರೂ. ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ನೀಡಲಾಗಿದೆ. ಕಳೆದ ವರ್ಷ ಮೈಶುಗರ್ ಪುನಶ್ಚೇತನಕ್ಕೆ 50 ಕೋಟಿ ರೂ. ಹಣವನ್ನು ನೀಡಲಾಗಿತ್ತು. ಈ ಬಾರಿ ಕಾರ್ಖಾನೆ ಉತ್ತಮವಾಗಿ ನಡೆಯುತ್ತಿದೆ. ಇದಕ್ಕೆ ಕಾರಣಕರ್ತರಾದ ಹಾಗೂ ಜಿಲ್ಲೆಯ ಬಗ್ಗೆ ಹೆಚ್ಚಿನ ಪ್ರೀತಿ ಹೊಂದಿರುವ ಕೃಷಿ ಸಚಿವರಿಗೆ ಧನ್ಯವಾದ ಅರ್ಪಿಸಿದರು.

ಮದ್ದೂರು, ಮಳವಳ್ಳಿ ಹಾಗೂ ಕೊಪ್ಪದ ಕೊನೆಯ ಭಾಗದ ಕೃಷಿ ಚಟುವಟಿಕೆಗೆ ನೀರು ತಲುಪಿಸಲು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯನ್ನು 1,400 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ 10,48,000 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಉಚಿತ ಟಿಕೆಟ್ ನೀಡಿ 278 ಕೋಟಿ ರೂ. ಭರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ 4,85,000 ಕುಟುಂಬಗಳಿಗೆ ಉಚಿತ ವಿದ್ಯುತ್ ಒದಗಿಸಿ 280 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಸ್ಟಾರ್ ಚಂದ್ರು, ಹುಚ್ಚೇಗೌಡ, ಗ್ರಾಮ ಪಂಚಾಯತ್ ಆಧ್ಯಕ್ಷೆ ಸಿದ್ದಲಿಂಗಮ್ಮ, ಜ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ‌ಬಾಲದಂಡಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X