Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ | 1,146 ಕೋಟಿ ಮೊತ್ತದ ಅಭಿವೃದ್ಧಿ...

ಮಂಡ್ಯ | 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ28 July 2025 4:04 PM IST
share
ಮಂಡ್ಯ | 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮದ್ದೂರು : ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಹೇಳುವ ಬಿಜೆಪಿಗೆ ಇದು ನಮ್ಮ ಸರಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1,146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸವಾಲೆಸೆದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ವಿವರಿಸಿದರು.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ವುಗೆ ಸೂಚಿಸಿದರು.

ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಘೋಷಿಸಿದ ಮುಖ್ಯಮಂತ್ರಿಗಳು, ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ ಎಂದು ಪ್ರಶಂಶಿಸಿದರು.

ರಾಜ್ಯದ ಪಾಲಿನ ಗೊಬ್ಬರವನ್ನೂ ಕೇಂದ್ರ ಕೊಡುತ್ತಿಲ್ಲ :

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ, ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸವಾಲು ಹಾಕಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳೀಗೌಡ ಸೇರಿ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X