Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ರೈತರ ಹಿತ ಕಾಯಲು ಸರಕಾರ ಬದ್ಧ : ಸಿಎಂ...

ರೈತರ ಹಿತ ಕಾಯಲು ಸರಕಾರ ಬದ್ಧ : ಸಿಎಂ ಡಿ.ಕೆ.ಶಿವಕುಮಾರ್

1,793.74 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ31 Oct 2026 11:24 PM IST
share
ರೈತರ ಹಿತ ಕಾಯಲು ಸರಕಾರ ಬದ್ಧ : ಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ : ರಾಜ್ಯ ಸರಕಾರ ಸದಾ ರೈತರ ಪರವಾಗಿದೆ. ಪಶು ಆಹಾರ ಹಾಗೂ ಔಷಧಿಗಳ ಬೆಲೆ ಹೆಚ್ಚಳದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ರೈತರ ಹಿತದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡಿ ಪ್ರತಿ ಲೀಟರ್‌ಗೆ 7 ರೂ. ಹೆಚ್ಚುವರಿ ಹಣ ರೈತರಿಗೆ ದೊರೆಯುವಂತೆ ಸರಕಾರ ನಿರ್ಧರಿಸಿದೆ. ಆದರೆ, ವಿರೋಧ ಪಕ್ಷಗಳು ಇದಕ್ಕೂ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಡ್ಯ ವಿವಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹತ್ತು ವರ್ಷಗಳಿಂದ ಸಕ್ಕರೆ ಬೆಲೆ ಏರಿಕೆಯಾಗಿಲ್ಲ. ಆದರೆ, ರೈತರ ಉತ್ಪಾದನಾ ವೆಚ್ಚ ದುಪ್ಪಟ್ಟಾಗಿದೆ. ಕೇಂದ್ರ ಸರಕಾರ ಸಕ್ಕರೆ ದರವನ್ನು 50 ರೂ.ಗೆ ನಿಗದಿಪಡಿಸಿದರೆ ರೈತರಿಗೆ ಸೂಕ್ತ ಬೆಲೆ ಒದಗಿಸುವ ಜವಾಬ್ದಾರಿಯನ್ನು ನಾನೇ ತೆಗೆದುಕೊಳ್ಳುತ್ತೇನೆ ಎಂದರು.

ಕೆಆರ್‌ಎಸ್ ಜಲಾಶಯದಿಂದ ಮಂಡ್ಯ ಜಿಲ್ಲೆಯ ಮಳವಳ್ಳಿ, ಮದ್ದೂರು ಸೇರಿದಂತೆ ಕೊನೆಯ ಭಾಗದ ರೈತರ ಜಮೀನುಗಳಿಗೂ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪಾಂಡವಪುರ, ನಾಗಮಂಗಲ ಹಾಗೂ ಕೆ.ಆರ್.ಪೇಟೆ ಭಾಗಗಳಲ್ಲಿ ಕೆರೆಗಳನ್ನು ತುಂಬಿಸಲು ಮತ್ತು ಕಾಲುವೆಗಳ ದುರಸ್ತಿ ಹಾಗೂ ನಿರ್ಮಾಣ ಕಾಮಗಾರಿಗಳಿಗೆ 806 ಕೋಟಿ ರೂ.ಅನುದಾನ ಬಿಡುಗಡೆಗೆ ತೀರ್ಮಾನಿಸಲಾಗಿದೆ. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳ ಕಾಲುವೆಗಳ ಆಧುನೀಕರಣಕ್ಕೆ 224 ಕೋಟಿ ರೂ.ಅನುದಾನ ಒದಗಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಜಯದೇವ ಹೃದ್ರೋಗ ಆಸ್ಪತ್ರೆಯ ಮಾದರಿಯಲ್ಲಿ ಮಂಡ್ಯದಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹೊಸೂರು ಕಾಲನಿಯಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಸಿದ್ಧವಾಗಿದೆ. ಕೃಷಿ ವಿವಿಗೆ 100 ಕೋಟಿ ರೂ.ಅನುದಾನ ನೀಡಲಾಗಿದೆ. ಮೈಷುಗರ್ ಕಾರ್ಖಾನೆಯ ಬಾಯ್ಲಿಂಗ್ ಹೌಸ್ ನವೀಕರಣಕ್ಕೆ 60 ಕೋಟಿ ಮೊತ್ತದ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಿಎಂ ಹೇಳಿದರು.

ಮಂಡ್ಯ ಹಾಲು ಒಕ್ಕೂಟದಲ್ಲಿ ಪ್ರತಿನಿತ್ಯ 1.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ವ್ಯರ್ಥವಾಗುವುದನ್ನು ತಪ್ಪಿಸಲು ನಂದಿನಿ ಐಸ್‌ಕ್ರೀಮ್ ಘಟಕ ಸ್ಥಾಪನೆಗೆ ಒಕ್ಕೂಟ ಅನುಮತಿ ಕೋರಿದ್ದು, ಸರಕಾರದಿಂದ ಶೀಘ್ರವೇ ಅನುಮೋದನೆ ಮತ್ತು ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿದರು. ಸಚಿವ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ರವಿಕುಮಾರ್ ಗಣಿಗ, ಕೆ.ಎಂ.ಉದಯ್, ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರ ಹಿತ ಕಾಯಲು ಸರಕಾರ ಕ್ರಮ ಕೈಗೊಂಡಿದೆ. ರೈತರಿಗೆ ಮುಂಗಡವಾಗಿ 2,500 ರೂ. ಪರಿಹಾರ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದಲ್ಲಿ 52 ಸಾವಿರ ಕೋಟಿ ರೂ.ಗೂ ಅಧಿಕ ಹಣ ವೆಚ್ಚ ಮಾಡಲಾಗುತ್ತಿದೆ. ಗೃಹಲಕ್ಷ್ಮಿಯೋಜನೆಯಡಿ ರಾಜ್ಯದ ಮಹಿಳೆಯರ ಖಾತೆಗಳಿಗೆ 29 ಸಾವಿರ ಕೋಟಿ ರೂ.ಗೂ ಅಧಿಕ ಹಣ ಜಮೆಯಾಗಿದೆ.

-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ

ಒಂದೂವರೆ ವರ್ಷದಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರ ಕೋಟಿ ರೂ.ಗೂ ಅಧಿಕ ಅಭಿವೃದ್ಧಿ ಅನುದಾನ ನೀಡಲಾಗಿದೆ. ಕೆಲವರು ಈ ಅನುದಾನದ ಲೆಕ್ಕ ಕೇಳುತ್ತಿದ್ದಾರೆ. ನಾವು ಜಿಲ್ಲೆಯ ಜನರಿಗೆ ಲೆಕ್ಕ ನೀಡುತ್ತೇವೆ. ಕೇವಲ ರಾಜಕೀಯ ಟೀಕೆ ಮಾಡುವ ಬದಲು ಜಿಲ್ಲೆಯ ಅಭಿವೃದ್ಧಿಗೆ ವಿರೋಧ ಪಕ್ಷದ ನಾಯಕರು ಹಾಗೂ ಸಂಸದರು ತಮ್ಮ ಕೊಡುಗೆ ಏನು ಎಂಬುದನ್ನು ತೋರಿಸಲಿ.

-ಎನ್.ಚಲುವರಾಯಸ್ವಾಮಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ

Tags

D.K.ShivakumarfarmersGovernment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X